IND vs SA: 2ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

IND vs SA: ಎರಡನೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಆಫ್ರಿಕಾ ಮತ್ತೆ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆಫ್ರಿಕಾ ತಂಡದಲ್ಲಿ ಬದಲಾವಣೆಯಾಗಿದ್ದರೆ, ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಮೊದಲ ಪಂದ್ಯದಲ್ಲಿ ಅಖಾಡಕ್ಕಿಳಿದಿದ್ದ ತಂಡವೇ ಎರಡನೇ ಪಂದ್ಯದಲ್ಲೂ ಕಣಕ್ಕಿಳಿಯಲಿದೆ.

IND vs SA: 2ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
ಭಾರತ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on:Nov 10, 2024 | 7:20 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ 4 ಪಂದ್ಯಗಳ ಟಿ20 ಸರಣಿ ಈಗಾಗಲೇ ಆರಂಭವಾಗಿದೆ. ಡರ್ಬನ್​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಸರಣಿಯ ಎರಡನೇ ಪಂದ್ಯ ಸೇಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಅಜೇಯ ಮುನ್ನಡೆಯ ಮೇಲೆ ಕಣ್ಣಿಟ್ಟಿದೆ. ಇತ್ತ ಆಫ್ರಿಕಾ ಕೂಡ ಎರಡನೇ ಪಂದ್ಯ ಗೆದ್ದು ಸರಣಿಯನ್ನು ಸಮಬಲಗೊಳಿಸಲು ನೋಡುತ್ತಿದೆ.

ಇನ್ನು ಎರಡನೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಆಫ್ರಿಕಾ ಮತ್ತೆ ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆಫ್ರಿಕಾ ತಂಡದಲ್ಲಿ ಬದಲಾವಣೆಯಾಗಿದ್ದರೆ, ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಮೊದಲ ಪಂದ್ಯದಲ್ಲಿ ಅಖಾಡಕ್ಕಿಳಿದಿದ್ದ ತಂಡವೇ ಎರಡನೇ ಪಂದ್ಯದಲ್ಲೂ ಕಣಕ್ಕಿಳಿಯಲಿದೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಕ್ರುಗರ್ ಬದಲಿಗೆ ರೀಜಾ ಹೆಂಡ್ರಿಕ್ಸ್‌ಗೆ ಅವಕಾಶ ನೀಡಲಾಗಿದೆ.

ಉಭಯ ತಂಡಗಳು ಹೀಗಿವೆ

ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅವೇಶ್ ಖಾನ್.

ದಕ್ಷಿಣ ಆಫ್ರಿಕಾ: ಏಡೆನ್ ಮಾರ್ಕ್ರಾಮ್ (ನಾಯಕ), ರಿಯಾನ್ ರಿಕಲ್ಟನ್, ರೀಜಾ ಹೆಂಡ್ರಿಕ್ಸ್, ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಆಂಡಿಲ್ ಸಿಮೆಲೇನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಪೀಟರ್.

ಟಿ20 ಮುಖಾಮುಖಿ ವರದಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ ಒಟ್ಟು 28 ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ 16 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ ಯಶಸ್ಸು ಕಂಡಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇನ್ನು ದಕ್ಷಿಣ ಆಫ್ರಿಕಾದಲ್ಲಿ ಆಡಿದ 10 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 3 ಪಂದ್ಯಗಳನ್ನು ಗೆದ್ದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Sun, 10 November 24

ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?