AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ

India vs South Africa, 2nd Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 30 ರನ್​​ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಮೂಲಕ ಗುವಾಹಟಿ ಟೆಸ್ಟ್​ನಲ್ಲಿ ಪ್ರವಾಸಿ ತಂಡ ಮೇಲುಗೈ ಸಾಧಿಸಿದೆ.

ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ
Rishabh Pant - Ravindra Jadeja
ಝಾಹಿರ್ ಯೂಸುಫ್
|

Updated on: Nov 24, 2025 | 12:24 PM

Share

ಗುವಾಹಟಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 489 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ (58) ಹಾಗೂ ಕೆಎಲ್ ರಾಹುಲ್ (22) ಉತ್ತಮ ಆರಂಭ ಒದಗಿಸಿದ್ದರು.

ಆದರೆ ಆ ಬಳಿಕ ಬಂದ ಬ್ಯಾಟರ್​ಗಳ ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 15 ರನ್​ಗಳಿಸಿದರೆ, ಧ್ರುವ್ ಜುರೆಲ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ರಿಷಭ್ ಪಂತ್ ಕಲೆಹಾಕಿದ್ದು ಕೇವಲ 7 ರನ್​ಗಳು ಮಾತ್ರ.

ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 6 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಪರಿಣಾಮ 122 ರನ್​ಗಳಿಸುವಷ್ಟರಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಕಳೆದುಕೊಂಡಿದೆ.

ಅಲ್ಲದೆ 50 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 7 ವಿಕೆಟ್ ಕಳೆದುಕೊಂಡು 141 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ವಾಷಿಂಗ್ಟನ್ ಸುಂದರ್ (17) ಹಾಗೂ ಕುಲ್ದೀಪ್ ಯಾದವ್ (1) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ:

ಸೌತ್ ಆಫ್ರಿಕಾ ತಂಡದ 489 ರನ್​ಗಳ ಇನಿಂಗ್ಸ್​ಗೆ ಉತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಇದೀಗ ಫಾಲೋಆನ್ ಭೀತಿ ಎದುರಿಸುತ್ತಿದೆ. ಏಕೆಂದರೆ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 200 ರನ್​ಗಳ ಮುನ್ನಡೆ ಪಡೆದುಕೊಂಡರೆ ಭಾರತ ತಂಡವನ್ನು ಮತ್ತೆ ಬ್ಯಾಟಿಂಗ್​ ಆಹ್ವಾನಿಸಬಹುದು.

ಈ ಮೂಲಕ ಟೀಮ್ ಇಂಡಿಯಾ ಮೇಲೆ ಒತ್ತಡ ಹೇರಿ ದ್ವಿತೀಯ ಇನಿಂಗ್ಸ್​ನಲ್ಲಿ ಬೇಗನೆ ಆಲೌಟ್ ಮಾಡುವ ಮೂಲಕ ಪಂದ್ಯವನ್ನು ಗೆಲ್ಲುವ ಅವಕಾಶ ಸೌತ್ ಆಫ್ರಿಕಾ ತಂಡಕ್ಕೆ ಒದಗಲಿದೆ. ಹೀಗಾಗಿ ಟೀಮ್ ಇಂಡಿಯಾ ಫಾಲೋಆನ್ ತಪ್ಪಿಸಿಕೊಳ್ಳಲು ಮೊದಲ ಇನಿಂಗ್ಸ್​ನಲ್ಲಿ 290 ರನ್​ಗಳಿಸಲೇಬೇಕು.

ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ:

ಈ ಪಂದ್ಯವು ಭಾರತ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಸರಣಿ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿರುವ ಸೌತ್ ಆಫ್ರಿಕಾ ತಂಡವು ದ್ವಿತೀಯ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಜಯಿಸಬಹುದು.

ಇತ್ತ ಟೀಮ್ ಇಂಡಿಯಾ ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ದ್ವಿತೀಯ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಟೆಸ್ಟ್ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ