AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South africa: 2ನೇ ಟೆಸ್ಟ್ ಪಂದ್ಯ ಯಾವಾಗ? ಈ ಪಂದ್ಯವನ್ನೂ ಕೂಡ ಭಾರತ ಗೆಲ್ಲುತ್ತೆ, ಯಾಕೆಂದರೆ…

India vs south africa 2nd test: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ಅರ್ಧಶತಕ ಬಾರಿಸಿದ್ದರು.

India vs South africa: 2ನೇ ಟೆಸ್ಟ್ ಪಂದ್ಯ ಯಾವಾಗ? ಈ ಪಂದ್ಯವನ್ನೂ ಕೂಡ ಭಾರತ ಗೆಲ್ಲುತ್ತೆ, ಯಾಕೆಂದರೆ...
India vs south africa 2nd test date
TV9 Web
| Edited By: |

Updated on: Dec 30, 2021 | 5:37 PM

Share

ಭಾರತ-ದಕ್ಷಿಣ ಆಫ್ರಿಕಾ (India vs South africa) ನಡುವೆ ಟೆಸ್ಟ್​ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಸೆಂಚುರಿಯನ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾವನ್ನು 113 ರನ್​ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. 3 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಆದರೆ ಈ ಬಾರಿ ಮೊದಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸುವ ಮೂಲಕ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಇನ್ನು 2ನೇ ಪಂದ್ಯವು ಜೋಹಾನ್ಸ್​ಬರ್ಗ್​ನಲ್ಲಿನ ವಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ. ಈ ಮೈದಾನವು ಟೀಮ್ ಇಂಡಿಯಾ ಪಾಲಿಗೆ ಅದೃಷ್ಟ ಎನ್ನಲು ಕಳೆದ ಬಾರಿಯ ಪ್ರದರ್ಶನವೇ ಸಾಕ್ಷಿ. ಏಕೆಂದರೆ 2018 ರಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೂ ವಂಡರರ್ಸ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾವನ್ನು ಬಗ್ಗು ಬಡಿದಿತ್ತು.

ಅಂದು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ಅರ್ಧಶತಕ ಬಾರಿಸಿದ್ದರು. ಇದಾಗ್ಯೂ ಇತರೆ ಯಾವುದೇ ಬ್ಯಾಟರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಅದರಂತೆ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ 187 ರನ್​ ಮಾತ್ರ.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ದಕ್ಷಿಣ ಆಫ್ರಿಕಾ ಕೂಡ ಟೀಮ್ ಇಂಡಿಯಾ ಬೌಲರುಗಳ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಿರಲಿಲ್ಲ. ಹಾಶೀಮ್ ಆಮ್ಲ ಅವರ ಅರ್ಧಶತಕದ ನೆರವಿನಿಂದ ಅಂದು ದಕ್ಷಿಣ ಆಫ್ರಿಕಾ ಕಲೆಹಾಕಿದ್ದು 194 ರನ್​ ಮಾತ್ರ. ಕೇವಲ 6 ರನ್​ಗಳ ಹಿನ್ನಡೆಯೊಂದಿಗೆ 2ನೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ರಹಾನೆ ಹಾಗೂ ಕೊಹ್ಲಿ ಆಸರೆಯಾಗಿದ್ದರು. ಅದರಂತೆ ಭಾರತ ತಂಡವು 247 ರನ್​ಗಳಿಗೆ ಆಲೌಟ್ ಆಗಿತ್ತು.

241 ರನ್​ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾಗೆ ಅಂದು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶಾಕ್ ನೀಡಿದ್ದರು. ಡೀನ್ ಎಲ್ಗರ್ ಹಾಗೂ ಹಾಶಿಂ ಆಮ್ಲ ಅಂದು ಅರ್ಧಶತಕ ಬಾರಿಸಿದರೂ ಶಮಿಯ ಮಾರಕ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಸಾಧ್ಯವಾಗಿಲ್ಲ. ಅದರಂತೆ ಐದು ವಿಕೆಟ್ ಉರುಳಿಸಿದ ಶಮಿ 177 ರನ್​ಗೆ ದಕ್ಷಿಣ ಆಫ್ರಿಕಾ ಸರ್ವಪತನಕ್ಕೆ ಕಾರಣರಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 63 ರನ್​ಗಳ ಜಯ ಸಾಧಿಸಿತ್ತು.

ಅಂದು ಟೀಮ್ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಜಸ್​ಪ್ರೀತ್ ಬುಮ್ರಾ, ಮ ಮೊಹಮ್ಮದ್ ಶಮಿ ಇದೀಗ ಟೀಮ್ ಇಂಡಿಯಾದಲ್ಲಿದ್ದಾರೆ.  ಅಂದರೆ 2018 ರಲ್ಲಿ ವಂಡರರ್ಸ್​ ಮೈದಾನದಲ್ಲಿ ವಂಡರ್​ ಸೃಷ್ಟಿಸಿ ಟೀಮ್ ಇಂಡಿಯಾದ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಆಟಗಾರರು ಈಗಲೂ ಭಾರತ ತಂಡದಲ್ಲಿದ್ದಾರೆ. ಅದರಲ್ಲೂ ಈ ಹಿಂದಿಕ್ಕಿಂತಲೂ ಉತ್ತಮ ಪೇಸ್ ಅಟ್ಯಾಕಿಂಗ್ ಬೌಲರ್​ಗಳು ಟೀಮ್ ಇಂಡಿಯಾದಲ್ಲಿದ್ದಾರೆ. ಹೀಗಾಗಿ 2ನೇ ಟೆಸ್ಟ್​ ಪಂದ್ಯದಲ್ಲೂ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

2ನೇ ಟೆಸ್ಟ್ ಪಂದ್ಯದ ವೇಳಾಪಟ್ಟಿ: ಜನವರಿ 03 ರಿಂದ ಜನವರಿ 07 ವಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(India vs south africa 2nd test date)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?