India vs South Africa 2nd Test: 2 ದಿನದಾಟ, 122 ರನ್ vs 8 ವಿಕೆಟ್: ಗೆಲುವು ಯಾರಿಗೆ?

India vs South Africa 2nd Test: ಎಲ್ಗರ್ ಅವರ ರಕ್ಷಣಾತ್ಮಕ ಆಟದೊಂದಿಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 100ರ ಗಡಿದಾಟಿದೆ. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಸೌತ್ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 118 ರನ್​ಗಳಿಸಿದೆ.

India vs South Africa 2nd Test: 2 ದಿನದಾಟ, 122 ರನ್ vs 8 ವಿಕೆಟ್: ಗೆಲುವು ಯಾರಿಗೆ?
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 05, 2022 | 10:36 PM

ಭಾರತ-ದಕ್ಷಿಣ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗುತ್ತಿದೆ. ಜೋಹಾನ್ಸ್​ಬರ್ಗ್​ನ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಕೆಎಲ್ ರಾಹುಲ್ ಅವರ ಅರ್ಧಶತಕ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 202 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವಿರುದ್ದ ಶಾರ್ದೂಲ್ ಠಾಕೂರ್ 7 ವಿಕೆಟ್ ಕಬಳಿಸಿದರು. ಪರಿಣಾಮ ಸೌತ್ ಆಫ್ರಿಕಾ ಮೊದಲ ಇನಿಂಗ್ಸ್​ 229 ರನ್​ಗಳಿಗೆ ಅಂತ್ಯವಾಗಿತ್ತು.

ಇದರ ಬೆನ್ನಲ್ಲೇ 27 ರನ್​ಗಳ ಹಿನ್ನಡೆಯೊಂದಿಗೆ 2ನೇ ಇನಿಂಗ್ಸ್​ ಆರಂಭಿಸಿದ್ದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ (58), ಚೇತೇಶ್ವರ ಪೂಜಾರ (54) ತಂಡಕ್ಕೆ ಆಸರೆಯಾದರು. ಉಳಿದ ಆಟಗಾರರ ನೀರಸ ಪ್ರದರ್ಶನದ ಹೊರತಾಗಿಯೂ ಹನುಮ ವಿಹಾರಿ ಅವರ ರಕ್ಷಣಾತ್ಮಕ ಆಟದೊಂದಿಗೆ ಅಜೇಯ 40 ರನ್​ಗಳಿಸಿ ತಂಡದ ಮೊತ್ತವನ್ನು 250 ರನ್​ಗಳ ಗಡಿದಾಟಿಸಿದರು. ಕಗಿಸೊ ರಬಾಡ, ಲುಂಗಿ ಎನ್​ಗಿಡಿ ಹಾಗೂ ಮಾರ್ಕೊ ಜಾನ್ಸನ್ ತಲಾ ಮೂರು ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾವನ್ನು ಎರಡನೇ ಇನಿಂಗ್ಸ್​ನಲ್ಲಿ 266 ರನ್​ಗಳಿಗೆ ನಿಯಂತ್ರಿಸಿದರು.

ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ 240 ರನ್​ಗಳ ಟಾರ್ಗೆಟ್ ಪಡೆದ ದಕ್ಷಿಣ ಆಫ್ರಿಕಾ 2ನೇ ಇನಿಂಗ್ಸ್ ಉತ್ತಮವಾಗಿ ಆರಂಭಿಸಿದೆ. ನಾಯಕ ಡೀನ್ ಎಲ್ಗರ್ ಜೊತೆಗೂಡಿ ಮೊದಲ ವಿಕೆಟ್​ಗೆ 47 ರನ್​ಗಳಿಸಿ ಐಡನ್ ಮಾರ್ಕ್ರಾಮ್ (31) ಶಾರ್ದೂಲ್ ಠಾಕೂರ್​ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಕೀಗನ್ ಪೀಟರ್ಸನ್ ವಿಕೆಟ್ ಪಡೆದು ಅಶ್ವಿನ್ ಟೀಮ್ ಇಂಡಿಯಾಗೆ 2ನೇ ಯಶಸ್ಸು ತಂದುಕೊಟ್ಟರು. ಇದಾಗ್ಯೂ ಎಲ್ಗರ್ ಅವರ ರಕ್ಷಣಾತ್ಮಕ ಆಟದೊಂದಿಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 100ರ ಗಡಿದಾಟಿದೆ. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಸೌತ್ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 118 ರನ್​ಗಳಿಸಿದೆ. ಕ್ರೀಸ್​ನಲ್ಲಿ ಡೀನ್ ಎಲ್ಗರ್ (46) ಹಾಗೂ ರಸ್ಸಿ ವಂಡೆರ್ ಡುಸ್ಸೆನ್ (11) ಬ್ಯಾಟ್ ಮಾಡುತ್ತಿದ್ದಾರೆ.

ಸದ್ಯ ಮೂರನೇ ದಿನದಾಟ ಮುಗಿದ್ದಿದ್ದು ಇನ್ನೂ 2 ದಿನಗಳ ಆಟ ಬಾಕಿಯಿದೆ. ಇತ್ತ ದಕ್ಷಿಣ ಆಫ್ರಿಕಾಗೆ ಗೆಲ್ಲಲು 122 ರನ್​ಗಳ ಅವಶ್ಯಕತೆಯಿದ್ದರೆ, ಅತ್ತ ಟೀಮ್ ಇಂಡಿಯಾ 8 ವಿಕೆಟ್ ಕಬಳಿಸಿದರೆ ಮಾತ್ರ ಜಯ ಸಾಧಿಸಲಿದೆ. ಹೀಗಾಗಿ 4ನೇ ದಿನದಾಟದಲ್ಲೇ ಪಂದ್ಯದ ಫಲಿತಾಂಶವಂತು ಹೊರಬೀಳಲಿದೆ. ಈ ಪಂದ್ಯವು ದಕ್ಷಿಣ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದು, ಇದರಲ್ಲಿ ಗೆದ್ದರೆ ಸರಣಿ 1-1 ಅಂತರದಂತೆ ಸಮಗೊಳ್ಳಲಿದೆ. ಒಂದು ವೇಳೆ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ಒಂದು ವೇಳೆ ಸರಣಿ ಸಮಗೊಂಡರೆ ಕೇಪ್​ಟೌನ್​ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್​ ಪಂದ್ಯವು ಸರಣಿಯ ಫಲಿತಾಂಶವನ್ನು ನಿರ್ಧರಿಸಲಿದೆ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(India vs South Africa 2nd Test: Elgar keeps SA steady at Stumps)

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ