AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಫಾಲೋಆನ್​ ಹೇರದ ಸೌತ್ ಆಫ್ರಿಕಾ

India vs South Africa, 2nd Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು

ಟೀಮ್ ಇಂಡಿಯಾಗೆ ಫಾಲೋಆನ್​ ಹೇರದ ಸೌತ್ ಆಫ್ರಿಕಾ
Ind Vs Sa
ಝಾಹಿರ್ ಯೂಸುಫ್
|

Updated on:Nov 24, 2025 | 3:17 PM

Share

ಗುವಾಹಟಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 201 ರನ್​​ಗಳಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 489 ರನ್​ ಕಲೆಹಾಕಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ (58) ಹಾಗೂ ಕೆಎಲ್ ರಾಹುಲ್ (22) ಉತ್ತಮ ಆರಂಭ ಒದಗಿಸಿದ್ದರು. ಆದರೆ ಆ ಬಳಿಕ ಬಂದ ಬ್ಯಾಟರ್​ಗಳ ಪೆವಿಲಿಯನ್ ಪರೇಡ್ ನಡೆಸಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 15 ರನ್​ಗಳಿಸಿದರೆ, ಧ್ರುವ್ ಜುರೆಲ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ರಿಷಭ್ ಪಂತ್ ಕಲೆಹಾಕಿದ್ದು ಕೇವಲ 7 ರನ್​ಗಳು ಮಾತ್ರ.

ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 6 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ವಾಷಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ 72 ರನ್​ಗಳ ಜೊತೆಯಾಟವಾಡಿದರು.

ಆದರೆ ಮೂರನೇ ದಿನದಾಟದ ಭೋಜನಾ ವಿರಾಮದ ಬಳಿಕ ವಾಷಿಂಗ್ಟನ್ ಸುಂದರ್ (45) ವಿಕೆಟ್ ಪಡೆಯುವಲ್ಲಿ ಸೈಮ್ ಹರ್ಮರ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಕುಲ್ದೀಪ್ ಯಾದವ್ (19) ಕೂಡ ಔಟಾದರು. ಇನ್ನು ಜಸ್​ಪ್ರೀತ್ ಬುಮ್ರಾ (5) ಕ್ಯಾಚ್ ನೀಡುವುದರೊಂದಿಗೆ ಟೀಮ್ ಇಂಡಿಯಾ 201 ರನ್​ಗಳಿಸಿ ಆಲೌಟ್ ಆಯಿತು. ಸೌತ್ ಆಫ್ರಿಕಾ ಪರ  19.5 ಓವರ್​ಗಳನ್ನು ಎಸೆದ ಮಾರ್ಕೊ ಯಾನ್ಸೆನ್ 48 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ಫಾಲೋಆನ್​ ಹೇರದ ಸೌತ್ ಆಫ್ರಿಕಾ:

ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 288 ರನ್​ಗಳ ಹಿನ್ನಡೆ ಅನುಭವಿಸಿದ್ದರೂ ಸೌತ್ ಆಫ್ರಿಕಾ ತಂಡ ಫಾಲೋಆನ್ ಹೇರದೇ ಅಚ್ಚರಿ ಮೂಡಿಸಿದ್ದಾರೆ. ಅಂದರೆ ಎದುರಾಳಿ ತಂಡವು ಮೊದಲ ಇನಿಂಗ್ಸ್​ನಲ್ಲಿ 200 ರನ್​ಗಳ ಹಿನ್ನಡೆ ಅನುಭವಿಸಿದರೆ, ಆ ತಂಡವನ್ನು ಮೊದಲು ದ್ವಿತೀಯ ಇನಿಂಗ್ಸ್ ಆಡಲು ಆಹ್ವಾನಿಸಬಹುದು. ಆದರೆ ಟೆಂಬಾ ಬವುಮಾ ಫಾಲೋಆನ್ ಹೇರದೆ ಮತ್ತೆ ಬ್ಯಾಟಿಂಗ್ ನಡೆಸಲು ನಿರ್ಧರಿಸಿದ್ದಾರೆ.  ಅದರಂತೆ 288 ರನ್​ಗಳ ಮುನ್ನಡೆಯೊಂದಿಗೆ ಸೌತ್ ಆಫ್ರಿಕಾ ದ್ವಿತೀಯ ಇನಿಂಗ್ಸ್ ಆರಂಭಿಸಲಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Published On - 3:13 pm, Mon, 24 November 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು