Shardul Thakur: ಶಾರ್ದೂಲ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ..!

India vs South Africa 2nd Test: ಅರ್ಧಶತಕ ಬಾರಿಸಿ ಕ್ರೀಸ್ ಕಚ್ಚಿ ನಿಂತಿದ್ದ ಕೀಗನ್ ಪೀಟರ್ಸನ್ ಅವರಿಗೂ ಪೆವಿಲಿಯನ್ ಹಾದಿ ತೋರಿಸಿದರು. ಬಳಿಕ ಬಂದ ವಂಡೆರ್ ಡುಸ್ಸೆನ್ ವಿಕೆಟ್ ಪಡೆದ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.

Shardul Thakur: ಶಾರ್ದೂಲ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ..!
Shardul thakur
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 04, 2022 | 6:17 PM

ಜೋಹಾನ್ಸ್​ಬರ್ಗ್​​ನ ವಾಂಡರರ್ಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ (India vs South Africa 2nd Test) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ವೇಗಿ ಶಾರ್ದೂಲ್ ಠಾಕೂರ್ (Shardul Thakur) 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ನೀಡಿದ 202 ರನ್​ಗಳಿಗೆ ಪ್ರತ್ಯುತ್ತರವಾಗಿ ಇನಿಂಗ್ಸ್​ ಆರಂಭಿಸಿದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆದಿತ್ತು. ಆದರೆ 2ನೇ ದಿನದಾಟದಲ್ಲಿ ಶಾರ್ದೂಲ್ ಠಾಕೂರ್ ಏಕಾಂಗಿಯಾಗಿ ಸೌತ್ ಆಫ್ರಿಕಾ ಬ್ಯಾಟರ್​ಗಳಿಗೆ ಆಘಾತ ನೀಡಿದರು.

1 ವಿಕೆಟ್ ನಷ್ಟಕ್ಕೆ 88 ರನ್​ಗಳಿಸಿದ್ದ ವೇಳೆ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಅವರನ್ನು ಪೆವಿಲಿಯನ್​ಗೆ ಕಳುಹಿಸಿ ಶಾರ್ದೂಲ್ ಠಾಕೂರ್ ಮೊದಲ ಯಶಸ್ಸು ಪಡೆದರು. ಇದರ ಬೆನ್ನಲ್ಲೇ ಅರ್ಧಶತಕ ಬಾರಿಸಿ ಕ್ರೀಸ್ ಕಚ್ಚಿ ನಿಂತಿದ್ದ ಕೀಗನ್ ಪೀಟರ್ಸನ್ ಅವರಿಗೂ ಪೆವಿಲಿಯನ್ ಹಾದಿ ತೋರಿಸಿದರು. ಬಳಿಕ ಬಂದ ವಂಡೆರ್ ಡುಸ್ಸೆನ್ ವಿಕೆಟ್ ಪಡೆದ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಕೈಲ್ ವೆಯರ್ನೆ ಅವರನ್ನು ಎಲ್​ಬಿಡಬ್ಲೂ ಬಲೆಗೆ ಬೀಳಿಸಿದ ಠಾಕೂರ್ ತಮ್ಮ ನಾಲ್ಕನೇ ವಿಕೆಟ್ ಪಡೆದರು.

ಇನ್ನೊಂದೆಡೆ 60 ಎಸೆತಗಳಲ್ಲಿ ಬಿರುಸಿನ 51 ರನ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ತೆಂಬ ಬವುಮಾ ಅವರನ್ನು ಔಟ್ ಮಾಡುವ ಮೂಲಕ ಶಾರ್ದೂಲ್ ಠಾಕೂರ್ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಮೂಲಕ ಜೋಹಾನ್ಸ್​ಬರ್ಗ್​ನ ವಂಡಾರರ್ಸ್​ ಪಿಚ್​ನಲ್ಲಿ ಐದು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 6ನೇ ಬೌಲರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ಪಿಚ್​ನಲ್ಲಿ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಶ್ರೀಶಾಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಕಬಳಿಸಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ಚೊಚ್ಚಲ ಐದು ವಿಕೆಟ್​ಗಳ ಗುಚ್ಛದೊಂದಿಗೆ ಶಾರ್ದೂಲ್ ಠಾಕೂರ್ ಕೂಡ ಸೇರ್ಪಡೆಯಾಗಿದ್ದಾರೆ.

ಇತ್ತೀಚಿನ ವರದಿ ಬಂದಾಗ ದಕ್ಷಿಣ ಆಫ್ರಿಕಾ ತಂಡವು  7 ವಿಕೆಟ್ ಕಳೆದುಕೊಂಡು 191 (191-7 /70 Ov) ರನ್​ಗಳಿಸಿದೆ. ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ 5 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 2 ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

( India vs South Africa 2nd Test: Shardul thakur 5 wicket haul vs south africa)

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ