AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಬೃಹತ್ ಮೊತ್ತ ಪೇರಿಸಿ ಸೌತ್ ಆಫ್ರಿಕಾ ಆಲೌಟ್

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಫ್ರಿಕಾ ಪಡೆ ಜಯ ಸಾಧಿಸಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು

IND vs SA: ಬೃಹತ್ ಮೊತ್ತ ಪೇರಿಸಿ ಸೌತ್ ಆಫ್ರಿಕಾ ಆಲೌಟ್
Ind Vs Sa
ಝಾಹಿರ್ ಯೂಸುಫ್
|

Updated on:Nov 23, 2025 | 8:25 PM

Share

ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ತಂಡ 489 ರನ್​ಗಳಿಸಿ ಆಲೌಟ್ ಆಗಿದೆ.  ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ (35) ಹಾಗೂ ಐಡೆನ್ ಮಾರ್ಕ್ರಾಮ್ (38) ಮೊದಲ ವಿಕೆಟ್​ಗೆ 82 ರನ್ ಪೇರಿಸಿ ಉತ್ತಮ ಆರಂಭ ಒದಗಿಸಿದ್ದರು.

ಇದಾದ ಬಳಿಕ ಬಂದ ಟ್ರಿಸ್ಟನ್ ಸ್ಟಬ್ಸ್ 49 ರನ್ ಬಾರಿಸಿದರೆ, ಟೆಂಬಾ ಬವುಮಾ 41 ರನ್​ಗಳ ಕೊಡುಗೆ ನೀಡಿದರು. ಇನ್ನು ಟೋನಿ ಡಿ ಝೋರ್ಝಿ 28 ರನ್ ಬಾರಿಸಿ ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 247 ರನ್​ಗಳಿಸಿತ್ತು.

ದ್ವಿತೀಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಸೆನುರಾನ್ ಮುತ್ತುಸಾಮಿ ಭರ್ಜರಿ ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 400ರ ಗಡಿದಾಟಿಸಿದರು. ಅಂತಿಮವಾಗಿ 206 ಎಸೆತಗಳನ್ನು ಎದುರಿಸಿದ ಮುತ್ತುಸಾಮಿ 2 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 109 ರನ್​ ಬಾರಿಸಿ ಔಟಾದರು.

ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಮಾರ್ಕೊ ಯಾನ್ಸೆನ್ 93 ರನ್​ಗಳಿಸಿ ಕೇವಲ 7 ರನ್​​ಗಳಿಂದ ಶತಕ ವಂಚಿತರಾದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 489 ರನ್​​ಗಳಿಸಿ ಆಲೌಟ್ ಆಗಿದೆ.

ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 2ನೇ ದಿನದಾಟದ ಅಂತ್ಯದ ವೇಳೆ ಪ್ರಥಮ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 9 ರನ್ ಕಲೆಹಾಕಿದೆ. ಅಲ್ಲದೆ ಮೂರನೇ ದಿನದಾಟದಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಟ್ರಾವಿಸ್ ಹೆಡ್

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Published On - 3:20 pm, Sun, 23 November 25

‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ