IND vs SA: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ

|

Updated on: Dec 20, 2023 | 10:36 PM

IND vs SA: ಎರಡನೇ ಏಕದಿನ ಪಂದ್ಯದಲ್ಲಿ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗವೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಮೂರನೇ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

IND vs SA: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ
ಭಾರತ- ಆಫ್ರಿಕಾ
Follow us on

ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ (India vs South Africa) ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಮೊದಲನೆಯದಾಗಿ, ಈ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಆತಿಥೇಯರನ್ನು 8 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗವೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಮೂರನೇ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ (KL Rahul) ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಯಾವ ಆಟಗಾರನಿಗೆ ಕೋಕ್ ಸಿಗಲಿದೆ? ಹಾಗೂ ಯಾವ ಆಟಗಾರನಿಗೆ ತಂಡದಲ್ಲಿ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ..

ಭಾರತ ತಂಡದಲ್ಲಿ ಬದಲಾವಣೆ ಖಚಿತ

ಮೂರನೇ ಏಕದಿನ ಪಂದ್ಯವು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ರವೀಂದ್ರ ಜಡೇಜಾಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವುದು ಖಚಿತವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಜಡ್ಡು ಬದಲಿಗೆ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಅಕ್ಷರ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ನಿರಾಸೆ ಮೂಡಿಸಿದರು. ಬ್ಯಾಟಿಂಗ್​ನಲ್ಲಿ ಕೇವಲ 7 ರನ್ ಕಲೆಹಾಕಿದ ಅಕ್ಷರ್ ಇದಕ್ಕಾಗಿ 23 ಎಸೆತಗಳನ್ನು ಎದುರಿಸಿದ್ದರು. ಅಲ್ಲದೆ ಬೌಲಿಂಗ್​ನಲ್ಲೂ 6 ಓವರ್ ಬೌಲಿಂಗ್ ಮಾಡಿದ ಅಕ್ಷರ್ 22 ರನ್ ನೀಡಿ ಒಂದೇ ಒಂದು ವಿಕೆಟ್ ಪಡೆಯಲಿಲ್ಲ.

IND vs SA: ಬೋಲ್ಯಾಂಡ್ ಪಾರ್ಕ್ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕಿದೆಯಾ ಮಳೆಯ ಆತಂಕ?

ಭಾರತಕ್ಕೆ ಹೀನಾಯ ಸೋಲು

ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದರು. ಮೊದಲ ಪಂದ್ಯದಲ್ಲಿ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಎರಡನೇ ಪಂದ್ಯದಲ್ಲಿ 212 ರನ್‌ಗಳನ್ನು ಡಿಫೆಂಡ್ ಮಾಡುವಾಗ ಭಾರತದ ಬೌಲರ್‌ಗಳು ಸಪ್ಪೆ ಪ್ರದರ್ಶನ ನೀಡಿದರು. ಮೊದಲ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಪಡೆದಿದ್ದ ಅರ್ಷದೀಪ್ ಸಿಂಗ್ ಇಲ್ಲಿ ಒಂದು ವಿಕೆಟ್ ಪಡೆದರೂ ತಂಡದ ಗೆಲುವಿಗೆ ಸಾಕಾಗಲಿಲ್ಲ. ಏಕೆಂದರೆ ಈ ವಿಕೆಟ್ ಬೀಳಲು ತಡವಾಗಿತ್ತು. ಅಂತಿಮವಾಗಿ ರಿಂಕು ಸಿಂಗ್ ಒಂದು ವಿಕೆಟ್ ಪಡೆದು ಅಂತಾರಾಷ್ಟ್ರೀಯ ವಿಕೆಟ್ ಖಾತೆ ತೆರೆದರು. ಈ ಪಂದ್ಯವನ್ನು ಆಫ್ರಿಕಾ 8 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದುಕೊಂಡಿತು. ಆಫ್ರಿಕಾ ಪರ ಆರಂಭಿಕರಾದ ಟೋನಿ ಡಿಜಾರ್ಜ್ ಶತಕ ಸಿಡಿಸಿದ್ದರು.

ಭಾರತ ಸಂಭಾವ್ಯ ತಂಡ

ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ರಿಂಕು ಸಿಂಗ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Wed, 20 December 23