India vs South Africa 3rd ODI Live Streaming: ಸರಣಿ ನಿರ್ಧಾರಕ ಪಂದ್ಯದಲ್ಲಿ ಗೆಲುವು ಯಾರಿಗೆ? ಪಂದ್ಯ ಆರಂಭ ಯಾವಾಗ?

| Updated By: ಪೃಥ್ವಿಶಂಕರ

Updated on: Oct 10, 2022 | 9:09 PM

India vs South Africa 3rd ODI Live Streaming: ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತ 3 ನೇ ಸ್ಥಾನದಲ್ಲಿದರೆ, ದಕ್ಷಿಣ ಆಫ್ರಿಕಾ 6 ನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ಇದುವರೆಗೆ 89 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ 50 ಪಂದ್ಯಗಳನ್ನು ಗೆದ್ದಿದರೆ, ಭಾರತ 36 ಪಂದ್ಯಗಳನ್ನು ಗೆದ್ದಿದೆ.

India vs South Africa 3rd ODI Live Streaming: ಸರಣಿ ನಿರ್ಧಾರಕ ಪಂದ್ಯದಲ್ಲಿ ಗೆಲುವು ಯಾರಿಗೆ? ಪಂದ್ಯ ಆರಂಭ ಯಾವಾಗ?
IND vs SA
Follow us on

ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಜಯ ಸಾಧಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬೌಲರ್​ಗಳು ನಿರೀಕ್ಷೆಗೆ ತಕ್ಕಂತೆ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ, ಟೀಮ್ ಇಂಡಿಯಾ ಬ್ಯಾಟರ್​ಗಳು ಅಮೋಘ ಆಟ ಪ್ರದರ್ಶಿಸಿದರು. ಅದರಲ್ಲೂ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ (Ishan Kishan) ಶತಕದ ಜೊತೆಯಾಟ ಆಡಿ ತಂಡಕ್ಕೆ 7 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ. ಹೀಗಾಗಿ ದೆಹಲಿಯಲ್ಲಿ ನಡೆಯುವ ಅಂತಿಮ ಪಂದ್ಯದ ಮೇಲೆ ಎಲ್ಲರ ಗಮನ ನೆಟ್ಟಿದೆ. ಆದರೆ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರಿಂದಾಗಿ ಪಂದ್ಯ ನಡೆಯುವುದರ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ.

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತ 3 ನೇ ಸ್ಥಾನದಲ್ಲಿದರೆ, ದಕ್ಷಿಣ ಆಫ್ರಿಕಾ 6 ನೇ ಸ್ಥಾನದಲ್ಲಿದೆ. ಈ ಎರಡೂ ತಂಡಗಳು ಇದುವರೆಗೆ 89 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ದಕ್ಷಿಣ ಆಫ್ರಿಕಾ 50 ಪಂದ್ಯಗಳನ್ನು ಗೆದ್ದಿದರೆ, ಭಾರತ 36 ಪಂದ್ಯಗಳನ್ನು ಗೆದ್ದಿದೆ. ಉಳಿದ 3 ಪಂದ್ಯಗಳು ಮಳೆಯಿಂದ ರದ್ದಾಗಿವೆ.

ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ನಾಳೆ ಮಂಗಳವಾರ (ಅಕ್ಟೋಬರ್ 11) ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೂರನೇ ODI ಪಂದ್ಯ ಎಲ್ಲಿ ನಡೆಯುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಪಂದ್ಯ ಯಾವಾಗ ಆರಂಭವಾಗುತ್ತದೆ?

ಭಾರತ vs ದಕ್ಷಿಣ ಆಫ್ರಿಕಾ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ 1 ಗಂಟೆಗೆ ಟಾಸ್ ನಡೆಯಲಿದೆ.

ಭಾರತ vs ದಕ್ಷಿಣ ಆಫ್ರಿಕಾ 3ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ಭಾರತ vs ದಕ್ಷಿಣ ಆಫ್ರಿಕಾ 3ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಅವೇಶ್ ಖಾನ್, ಶಹಬಾಜ್ ಅಹ್ಮದ್, ಮುಖೇಶ್ ಕುಮಾರ್ , ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್.

ದಕ್ಷಿಣ ಆಫ್ರಿಕಾದ ಏಕದಿನ ತಂಡ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಿಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಜಾನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಒನ್ರಿಚ್ ನೋಕಿಯಾ, ವೇಯ್ನ್ ಪರ್ನೆಲ್, ಆಂಡಿಲ್ ಪರ್ನೆಲ್, ತಬ್ರೈಜ್ ಶಮ್ಸಿ.