AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಶ್ರೇಯಸ್ ಔಟ್..? ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

IND vs SA: ಲಕ್ನೋ ಮತ್ತು ರಾಂಚಿ ನಂತರ, ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವು ಮಂಗಳವಾರ ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

IND vs SA: ಶ್ರೇಯಸ್ ಔಟ್..? ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
ಕ್ರಿಕೆಟ್ ದುನಿಯಾದಲ್ಲಿ ವಿರಾಟ್ ಕೊಹ್ಲಿಯನ್ನು ಚೇಸ್ ಮಾಸ್ಟರ್ ಎಂದು ಕರೆಯಲಾಗುತ್ತದೆ. ಗುರಿಯನ್ನು ಬೆನ್ನಟ್ಟಿದ ಹಲವು ಸಮಯದಲ್ಲಿ ಟೀಂ ಇಂಡಿಯಾ ಪರ ಕೊಹ್ಲಿ ಏಕಾಂಗಿಯಾಗಿ ನಿಂತು ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಾಗಿ ಕೊಹ್ಲಿಗೆ ಚೇಸ್ ಮಾಸ್ಟರ್ ಎಂಬ ಹೆಸರು ಬಂದಿದೆ. ಆದರೆ ಇತ್ತೀಚಿಗೆ ಟೀಂ ಇಂಡಿಯಾದ ಮತ್ತೊಬ್ಬ ಮಿಡಲ್ ಆರ್ಡರ್ ಬ್ಯಾಟ್ಸ್‌ಮನ್ ಆದ ಶ್ರೇಯಸ್ ಅಯ್ಯರ್, ಕೊಹ್ಲಿಯ ಚೇಸ್ ಮಾಸ್ಟರ್ ಬಿರುದನ್ನು ತಮ್ಮತ್ತ ವಾಲುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಕಳೆದ ಕೆಲವು ಇನ್ನಿಂಗ್ಸ್​ಗಳಲ್ಲಿ ಶ್ರೇಯಸ್ ನೀಡಿರುವ ಪ್ರದರ್ಶನವೇ ನಿದರ್ಶನವಾಗಿದೆ.
TV9 Web
| Edited By: |

Updated on:Oct 10, 2022 | 7:36 PM

Share

ಕಳೆದ 2-3 ವರ್ಷಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಭಾರತೀಯ ಕ್ರಿಕೆಟ್ ತಂಡದ (Indian cricket team) ಬೆಂಚ್ ಬಲವನ್ನು ರಾಂಚಿಯಲ್ಲಿ ತೋರಿಸಲಾಯಿತು. ಅಕ್ಟೋಬರ್ 9, ಭಾನುವಾರದಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸಿತು. ಹಲವು ವರ್ಷಗಳಿಂದ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿದ್ದ ಹಲವು ಪ್ರತಿಭಾವಂತ ಕ್ರಿಕೆಟಿಗರಿಗೆ ಈ ಸರಣಿಯಲ್ಲಿ ಅವಕಾಶ ಸಿಕ್ಕಿದ್ದು, ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಯುವ ಕ್ರಿಕೆಟಿಗರು ಯಶಸ್ವಿಯಾಗುತ್ತಿದ್ದಾರೆ. ಈಗ ಇದೇ ಯುವ ಆಟಗಾರರನ್ನೊಳಗೊಂಡಿರುವ ಧವನ್ ಪಡೆ ಮಂಗಳವಾರ ನಡೆಯಲ್ಲಿರುವ ಅಂತಿಮ ಹಾಗೂ ಸರಣಿ ನಿರ್ಧಾರಕ ಪಂದ್ಯದಲ್ಲಿ ಸರಣಿ ಗೆಲ್ಲುವ ಸಲುವಾಗಿ ಕಣಕ್ಕಿಳಿಯಲಿದೆ. ಹೀಗಾಗಿ 2ನೇ ಏಕದಿನ ಪಂದ್ಯ ಗೆದ್ದ ಅದೇ ತಂಡವನ್ನು ಧವನ್ ಕಣಕ್ಕಿಳಿಸುತ್ತಾರೋ ಅಥವಾ ತಂಡದಲ್ಲಿ ಬದಲಾವಣೆಗಳನ್ನು ಮಾಡುತ್ತಾರೋ ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಲಕ್ನೋ ಮತ್ತು ರಾಂಚಿ ನಂತರ, ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವು ಮಂಗಳವಾರ ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಲಕ್ನೋದಲ್ಲಿ ದಕ್ಷಿಣ ಆಫ್ರಿಕಾ ಗೆದ್ದರೆ, ರಾಂಚಿಯಲ್ಲಿ ಭಾರತವು ಶ್ರೇಯಸ್ ಅಯ್ಯರ್ ಅವರ ಶತಕ, ಇಶಾನ್ ಕಿಶನ್ ಅವರ ಅತ್ಯುತ್ತಮ 93 ರನ್ ಮತ್ತು ಮೊಹಮ್ಮದ್ ಸಿರಾಜ್ ಅವರ 3 ವಿಕೆಟ್‌ಗಳ ಆಧಾರದ ಮೇಲೆ 7 ವಿಕೆಟ್‌ಗಳ ಜಯ ಸಾಧಿಸಿತು.

ಬಿಷ್ಣೋಯ್ ವಾಪಸ್?

ಟೀಂ ಇಂಡಿಯಾ ಕಳೆದ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹ್ಮದ್ ಅವರಿಗೆ ಆಡುವ XI ನಲ್ಲಿ ಅವಕಾಶ ನೀಡುವ ಮೂಲಕ ಅಚ್ಚರಿ ಮೂಡಿಸಿತ್ತು. ಆದರೆ, ಇಬ್ಬರೂ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದರು. ಹೀಗಿರುವಾಗ ಮೂರನೇ ಪಂದ್ಯದಲ್ಲೂ ಇಬ್ಬರೂ ಕಣಕ್ಕಿಳಿಯುವುದು ಖಚಿತ. ಆದರೆ, ಟಿ20 ವಿಶ್ವಕಪ್‌ಗೂ ಮುನ್ನ ರವಿ ಬಿಷ್ಣೋಯ್‌ ಅವರನ್ನು ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಬಹುದಾಗಿದ್ದು, ಅವರಿಗೆ ತಯಾರಾಗಲು ಅವಕಾಶ ನೀಡಬಹುದು. ಹೀಗಾಗಿ ಕುಲ್ದೀಪ್ ಯಾದವ್‌ಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಬಹುದು.

ಗಾಯಕ್ವಾಡ್‌ಗೆ ಅವಕಾಶ ಸಿಗುತ್ತಾ?

ರುತುರಾಜ್ ಗಾಯಕ್​ವಾಡ್​ಗೆ ಮತ್ತೆ ಅವಕಾಶ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಮೊದಲ ಪಂದ್ಯದ ವೈಫಲ್ಯದ ನಂತರ ಅವರನ್ನು 2ನೇ ಏಕದಿನ ಪಂದ್ಯದಿಂದ ಕೈಬಿಡಲಾಯಿತು. ಇಂತಹ ಪರಿಸ್ಥಿತಿಯಲ್ಲಿ ಅವಕಾಶ ಸಿಗುತ್ತದೋ ಇಲ್ಲವೋ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಅಂದಹಾಗೆ ರುತುರಾಜ್​ಗೆ ಕೊನೆಯ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿದ್ದು, ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಹೋಗಬೇಕಾಗಿರುವುದರಿಂದ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಇಂತಹ ಪರಿಸ್ಥಿತಿಯಲ್ಲಿ ಗಾಯಕ್ವಾಡ್​ಗೆ ಮತ್ತೊಂದು ಅವಕಾಶ ಸಿಗುವ ನಿರೀಕ್ಷೆ ಇದೆ.

ಭಾರತದ ಸಂಭಾವ್ಯ 11:

ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ರುತುರಾಜ್ ಗಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್

Published On - 7:36 pm, Mon, 10 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ