IND vs SA: ಭಾರತ- ಆಫ್ರಿಕಾ ನಡುವಿನ ಕೊನೆಯ ಏಕದಿನ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ?
India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ 3ನೇ ಪಂದ್ಯ ಸರಣಿ ನಿರ್ಧಾರಕವಾಗಿದೆ. ಮಧ್ಯಾಹ್ನ 1 ಗಂಟೆಗೆ ಆರಂಭವಾಗುವ ಈ ಪಂದ್ಯವನ್ನು ಗೆದ್ದ ತಂಡ ಟ್ರೋಫಿ ಎತ್ತಿಹಿಡಿಯಲಿದೆ. ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡ ಕಾತರಿಸುತ್ತಿದೆ. ಪಂದ್ಯದ ಸಮಯ, ನೇರ ಪ್ರಸಾರ, ಹಾಗೂ ತಂಡಗಳ ವಿವರ ಇಲ್ಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಪ್ರಸ್ತುತ 1-1 ರಿಂದ ಸಮಬಲಗೊಂಡಿದೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತ 17 ರನ್‌ಗಳಿಂದ ಗೆದ್ದರೆ, ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ದಕ್ಷಿಣ ಆಫ್ರಿಕಾ 4 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಹೀಗಾಗಿ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸರಣಿ ಕೈಸೇರಲಿದೆ. ಅಂದರೆ ಈ ಪಂದ್ಯವನ್ನು ಯಾವ ತಂಡ ಗೆದ್ದರೂ ಅದು ಟ್ರೋಫಿಯನ್ನು ಎತ್ತಿಹಿಡಿಯಲಿದೆ. ಹೀಗಾಗಿ ಈ ಪಂದ್ಯವನ್ನು ಶತಾಯಗತಾಯ ಗೆದ್ದು ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಡಿಸೆಂಬರ್ 6 ರಂದು ನಡೆಯಲಿದೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಟಾಸ್ 12:30 ಕ್ಕೆ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಅಭಿಮಾನಿಗಳು ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರಿಷಭ್ ಪಂತ್ (ಉಪನಾಯಕ/ವಿಕೆಟ್ ಕೀಪರ್), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ ಮತ್ತು ಅರ್ಶ್ದೀಪ್ ಸಿಂಗ್.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಡೆವಾಲ್ಡ್ ಬ್ರೂಯಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಾಯೆನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:33 pm, Thu, 4 December 25
