IND vs SA: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಸೌತ್ ಆಫ್ರಿಕಾ ಆಲೌಟ್

India vs South Africa 3rd ODI: ಮೂರನೇ ಓವರ್​ನಲ್ಲಿ ಡಿಕಾಕ್ (7) ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು. ಇದರ ಬೆನ್ನಲ್ಲೇ ಜಾನ್ನೆಮನ್ ಮಲನ್ ವಿಕೆಟ್ ಕಬಳಿಸಿ ಸಿರಾಜ್ ಮತ್ತೊಂದು ಯಶಸ್ಸು ತಂದುಕೊಟ್ಟರು.

IND vs SA: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಎರಡಂಕಿ ಮೊತ್ತಕ್ಕೆ ಸೌತ್ ಆಫ್ರಿಕಾ ಆಲೌಟ್
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 11, 2022 | 4:44 PM

India vs South Africa 3rd Odi:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಟೀಮ್ ಇಂಡಿಯಾ (Team India) ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದರು.

ಮೂರನೇ ಓವರ್​ನಲ್ಲಿ ಡಿಕಾಕ್ (7) ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು. ಇದರ ಬೆನ್ನಲ್ಲೇ ಜಾನ್ನೆಮನ್ ಮಲನ್ (15) ವಿಕೆಟ್ ಕಬಳಿಸಿ ಸಿರಾಜ್ ಮತ್ತೊಂದು ಯಶಸ್ಸು ತಂದುಕೊಟ್ಟರು. ಇನ್ನು 3 ರನ್​ಗಳಿಸಿದ್ದ ರೀಝಾ ಹೆಂಡ್ರಿಕ್ಸ್​ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಐಡನ್ ಮಾರ್ಕ್ರಾಮ್ ವಿಕೆಟ್ ಉರುಳಿಸುವ ಮೂಲಕ ಶಹಬಾಜ್ ಅಹ್ಮದ್ ಕೂಡ ವಿಕೆಟ್ ಬೇಟೆ ಆರಂಭಿಸಿದ್ದರು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಲ್ಲಿಗೆ ಸೌತ್ ಆಫ್ರಿಕಾ ತಂಡವು 15.3 ಓವರ್​ಗಳಲ್ಲಿ ಕೇವಲ 43 ರನ್​ಗಳಿಗೆ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಡೇವಿಡ್ ಮಿಲ್ಲರ್ (7) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇದಾದ ಬಳಿಕ ಸೌತ್ ಆಫ್ರಿಕಾದ ಯಾವುದೇ ಬ್ಯಾಟ್ಸ್​ಮನ್​ಗಳನ್ನು ಕ್ರೀಸ್ ಕಚ್ಚಿ ನಿಲ್ಲಲು ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಬಿಡಲಿಲ್ಲ. ನಾಲ್ಕು ಓವರ್​ಗಳಲ್ಲಿ 4 ವಿಕೆಟ್ ಉರುಳಿಸುವ ಮೂಲಕ ಕುಲ್ದೀಪ್ ಸೌತ್ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು.  ಪರಿಣಾಮ 27.1 ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ 99 ರನ್​ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್, ಸಿರಾಜ್, ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 4 ಓವರ್​ಗಳಲ್ಲಿ 18 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಭಾರತ ಪ್ಲೇಯಿಂಗ್ 11: ಶಿಖರ್ ಧವನ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಅವೇಶ್ ಖಾನ್

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ , ಜಾನ್ನೆಮನ್ ಮಲನ್ , ರೀಜಾ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ (ನಾಯಕ) , ಮಾರ್ಕೊ ಯಾನ್ಸೆನ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ಅನ್ರಿಕ್ ನೋಕಿಯಾ.

Published On - 4:43 pm, Tue, 11 October 22