India vs South Africa 3rd Odi: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಟೀಮ್ ಇಂಡಿಯಾ (Team India) ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದರು.
ಮೂರನೇ ಓವರ್ನಲ್ಲಿ ಡಿಕಾಕ್ (7) ವಿಕೆಟ್ ಪಡೆಯುವ ಮೂಲಕ ವಾಷಿಂಗ್ಟನ್ ಸುಂದರ್ ಯಶಸ್ಸಿನ ಖಾತೆ ತೆರೆದರು. ಇದರ ಬೆನ್ನಲ್ಲೇ ಜಾನ್ನೆಮನ್ ಮಲನ್ (15) ವಿಕೆಟ್ ಕಬಳಿಸಿ ಸಿರಾಜ್ ಮತ್ತೊಂದು ಯಶಸ್ಸು ತಂದುಕೊಟ್ಟರು. ಇನ್ನು 3 ರನ್ಗಳಿಸಿದ್ದ ರೀಝಾ ಹೆಂಡ್ರಿಕ್ಸ್ಗೆ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಐಡನ್ ಮಾರ್ಕ್ರಾಮ್ ವಿಕೆಟ್ ಉರುಳಿಸುವ ಮೂಲಕ ಶಹಬಾಜ್ ಅಹ್ಮದ್ ಕೂಡ ವಿಕೆಟ್ ಬೇಟೆ ಆರಂಭಿಸಿದ್ದರು.
ಅಲ್ಲಿಗೆ ಸೌತ್ ಆಫ್ರಿಕಾ ತಂಡವು 15.3 ಓವರ್ಗಳಲ್ಲಿ ಕೇವಲ 43 ರನ್ಗಳಿಗೆ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಮತ್ತೆ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ಡೇವಿಡ್ ಮಿಲ್ಲರ್ (7) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
ಇದಾದ ಬಳಿಕ ಸೌತ್ ಆಫ್ರಿಕಾದ ಯಾವುದೇ ಬ್ಯಾಟ್ಸ್ಮನ್ಗಳನ್ನು ಕ್ರೀಸ್ ಕಚ್ಚಿ ನಿಲ್ಲಲು ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಬಿಡಲಿಲ್ಲ. ನಾಲ್ಕು ಓವರ್ಗಳಲ್ಲಿ 4 ವಿಕೆಟ್ ಉರುಳಿಸುವ ಮೂಲಕ ಕುಲ್ದೀಪ್ ಸೌತ್ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು. ಪರಿಣಾಮ 27.1 ಓವರ್ಗಳಲ್ಲಿ ದಕ್ಷಿಣ ಆಫ್ರಿಕಾ ತಂಡವು ಕೇವಲ 99 ರನ್ಗಳಿಗೆ ಆಲೌಟ್ ಆಯಿತು.
ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್, ಸಿರಾಜ್, ಶಹಬಾಜ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 4 ಓವರ್ಗಳಲ್ಲಿ 18 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.
Innings Break!
Superb bowling peformance from #TeamIndia! ? ?
4⃣ wickets for @imkuldeep18
2⃣ wickets each for Shahbaz Ahmed, @mdsirajofficial & @Sundarwashi5Over to our batters now. ? ?
Scorecard ? https://t.co/XyFdjV9BTC #INDvSA pic.twitter.com/B2wUzvis4y
— BCCI (@BCCI) October 11, 2022
ಭಾರತ ಪ್ಲೇಯಿಂಗ್ 11: ಶಿಖರ್ ಧವನ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಅವೇಶ್ ಖಾನ್
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ , ಜಾನ್ನೆಮನ್ ಮಲನ್ , ರೀಜಾ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ (ನಾಯಕ) , ಮಾರ್ಕೊ ಯಾನ್ಸೆನ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ಅನ್ರಿಕ್ ನೋಕಿಯಾ.
Published On - 4:43 pm, Tue, 11 October 22