AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ

India vs South Africa ODI: ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 96 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 41 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಸೌತ್ ಆಫ್ರಿಕಾ ತಂಡ 52 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಮೂರು ಮ್ಯಾಚ್​ಗಳು ಕಾರಣಾಂತರದಿಂದ ರದ್ದಾಗಿದ್ದವು.

IND vs SA: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ
Team India
ಝಾಹಿರ್ ಯೂಸುಫ್
|

Updated on:Dec 06, 2025 | 1:05 PM

Share

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಸೌತ್ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡದ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ.

ರಾಯ್​ಪುರದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ನಾಂಡ್ರೆ ಬರ್ಗರ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ಬ್ಯಾಟಿಂಗ್ ವೇಳೆ ಕಾಲು ನೋವಿಗೆ ತುತ್ತಾಗಿದ್ದ ಎಡಗೈ ದಾಂಡಿಗ ಟೋನಿ ಡಿ ಝೋರ್ಝಿ ಸಹ ಈ ಮ್ಯಾಚ್​ಗೆ ಅಲಭ್ಯರಾಗಿದ್ದಾರೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಇಂದಿನ ಪಂದ್ಯದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯಲಿದ್ದಾರೆ.

ಸರಣಿ ನಿರ್ಣಾಯಕ ಪಂದ್ಯ:

ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಮ್ಯಾಚ್​ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಸೌತ್ ಆಫ್ರಿಕಾ ಪ್ಲೇಯಿಂಗ್ XI:  ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್​​ಕೆ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್,  ಲುಂಗಿ ಎನ್​ಗಿಡಿ, ಕೇಶವ್ ಮಹಾರಾಜ್, ಒಟ್ನೀಲ್ ಬಾರ್ಟ್‌ಮ್ಯಾನ್.

ಉಭಯ ತಂಡಗಳು:

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಇದನ್ನೂ ಓದಿ: ಸ್ಫೋಟಕ ಸೆಂಚುರಿ… ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ, ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್​​ಕೆ, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್​​ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್.

Published On - 1:04 pm, Sat, 6 December 25