ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ಶುರು? ಎಂಬಿತ್ಯಾದಿ ಮಾಹಿತಿಗಳು ಈ ಕೆಳಗಿನಂತಿದೆ…
ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಯಾವಾಗ?
ಐದು ಪಂದ್ಯಗಳ ಸರಣಿಯ ದ್ವಿತೀಯ ಮ್ಯಾಚ್ ಡಿಸೆಂಬರ್ 14 ರಂದು ನಡೆಯಲಿದೆ. ಅಂದರೆ ಭಾನುವಾರ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ.
ಮೂರನೇ ಪಂದ್ಯ ನಡೆಯುವುದು ಎಲ್ಲಿ?
ಭಾರತ vs ಸೌತ್ ಆಫ್ರಿಕಾ ನಡುವಣ 3ನೇ ಟಿ20 ಪಂದ್ಯವು ಹಿಮಾಚಲ ಪ್ರದೇಶದಲ್ಲಿ ಜರುಗಲಿದೆ. ಈ ಪಂದ್ಯಕ್ಕೆ ಧರ್ಮಶಾಲಾದಲ್ಲಿರುವ ಹೆಚ್ಪಿಸಿ ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಭಾರತ-ಸೌತ್ ಆಫ್ರಿಕಾ ನಡುವಣ ಪಂದ್ಯಗಳು ಎಷ್ಟು ಗಂಟೆಗೆ ಶುರು?
ಈ ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆಯು 6.30 ಕ್ಕೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದೆ. ಇದರ ಜೊತೆಗೆ ಜಿಯೋ ಹಾಟ್ ಸ್ಟಾರ್ ವೆಬ್ಸೈಟ್ ಹಾಗೂ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಉಭಯ ತಂಡಗಳು:
ಸೌತ್ ಆಫ್ರಿಕಾ ಟಿ20 ತಂಡ: ಐಡನ್ ಮಾರ್ಕ್ರಾಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರೀಝ ಹೆಂಡ್ರಿಕ್ಸ್, ಮಾರ್ಕೋ ಯಾನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯ, ಲುಥೋ ಸಿಪಮ್ಲಾ, ಟ್ರಿಸ್ಟನ್ ಸ್ಟಬ್ಸ್.
ಇದನ್ನೂ ಓದಿ: ಕೇವಲ ೧ ರನ್ನಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಮ್ ಇಂಡಿಯಾ
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.
Published On - 12:55 pm, Sat, 13 December 25
