ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 11 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಸೆಂಚುರಿಯನ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 219 ರನ್ ಗಳಿಸಿತು, ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 208 ರನ್ ಗಳಿಸಲು ಶಕ್ತವಾಯಿತು. ಟೀಂ ಇಂಡಿಯಾ ಪರ ತಿಲಕ್ ವರ್ಮಾ ಅಜೇಯ 107 ರನ್ ಗಳಿಸಿದರೆ, ಬೌಲಿಂಗ್ನಲ್ಲಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರು. ಇದೇ ಮೊದಲ ಬಾರಿಗೆ ಸೆಂಚುರಿಯನ್‌ನಲ್ಲಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಸರಣಿಯ ನಾಲ್ಕನೇ ಮತ್ತು ಕೊನೆಯ ಪಂದ್ಯ ನವೆಂಬರ್ 15 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.
ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 11 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡ ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ.
ಅರ್ಶ್ದೀಪ್ ಸಿಂಗ್ ಅದ್ಭುತವಾಗಿ ಬೌಲಿಂಗ್ ಮಾಡಿ ಇನ್ ಫಾರ್ಮ್ ಹೆನ್ರಿಚ್ ಕ್ಲಾಸೆನ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ದೊಡ್ಡ ಯಶಸ್ಸನ್ನು ನೀಡಿದರು. ಕ್ಲಾಸೆನ್ 22 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 41 ರನ್ ಗಳಿಸಿ ಔಟಾದರು.
ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಅಚ್ಚರಿಯ ಕ್ಯಾಚ್ ಪಡೆದರು. ಬೌಂಡರಿಯಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮಾಡಿದರು.
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಡೇವಿಡ್ ಮಿಲ್ಲರ್ ವಿಕೆಟ್ ಕಳೆದುಕೊಂಡರು. 18 ಎಸೆತಗಳಲ್ಲಿ 18 ರನ್ ಗಳಿಸಿದ ನಂತರ ಮಿಲ್ಲರ್ ಐದನೇ ಬ್ಯಾಟ್ಸ್‌ಮನ್ ಆಗಿ ಔಟಾದರು. ಹೆನ್ರಿಚ್ ಕ್ಲಾಸೆನ್ ಸದ್ಯ ಕ್ರೀಸ್‌ನಲ್ಲಿ ಉಳಿದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಗೆಲುವಿಗೆ ಇನ್ನು 25 ಎಸೆತಗಳಲ್ಲಿ 78 ರನ್‌ಗಳ ಅಗತ್ಯವಿದೆ.
ಕ್ಲಾಸೆನ್ ಮತ್ತು ಮಿಲ್ಲರ್ ಅವರ ಅದ್ಭುತ ಜೊತೆಯಾಟದ ಆಧಾರದ ಮೇಲೆ ದಕ್ಷಿಣ ಆಫ್ರಿಕಾ 15 ಓವರ್‌ಗಳ ಅಂತ್ಯಕ್ಕೆ ನಾಲ್ಕು ವಿಕೆಟ್‌ಗೆ 134 ರನ್ ಗಳಿಸಿದೆ.
ವರುಣ್ ಚಕ್ರವರ್ತಿ ಅದ್ಭುತ ಪ್ರದರ್ಶನ ನೀಡಿ ನಾಯಕ ಏಡೆನ್ ಮಾರ್ಕ್ರಾಮ್ ಅವರನ್ನು ಔಟ್ ಮಾಡಿದರು. ಮಾರ್ಕ್ರಾಮ್ 18 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಇದು ಈ ಪಂದ್ಯದ ವರುಣ್ ಅವರ ಎರಡನೇ ವಿಕೆಟ್ ಆಗಿದೆ.
ಸ್ಪಿನ್ನರ್ ಅಕ್ಷರ್ ಪಟೇಲ್ ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಮೂರನೇ ಯಶಸ್ಸನ್ನು ನೀಡಿದರು. ಕಳೆದ ಪಂದ್ಯದಲ್ಲಿ ಸ್ಟಬ್ಸ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ದಕ್ಷಿಣ ಆಫ್ರಿಕಾವನ್ನು ಗೆಲುವಿನತ್ತ ಕೊಂಡೊಯ್ದಿದ್ದರು, ಆದರೆ ಈ ಪಂದ್ಯದಲ್ಲಿ ಅವರು ಅದ್ಭುತಗಳನ್ನು ಮಾಡಲು ಸಾಧ್ಯವಾಗದೆ 12 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ದಕ್ಷಿಣ ಆಫ್ರಿಕಾ 68 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡಿದೆ. ಇನ್ನೂ 67 ಎಸೆತಗಳಲ್ಲಿ 152 ರನ್ ಗಳಿಸಬೇಕಿದೆ.
ಸ್ಪಿನ್ನರ್ ವರುಣ್ ಚಕ್ರವರ್ತಿ ರೀಜಾ ಹೆಂಡ್ರಿಕ್ಸ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಎರಡನೇ ಯಶಸ್ಸನ್ನು ನೀಡಿದರು. ಹೆಂಡ್ರಿಕ್ಸ್ 13 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ನೆರವಿನಿಂದ 21 ರನ್ ಗಳಿಸಿ ಔಟಾದರು.
ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತವಾಗಿ ಬೌಲಿಂಗ್ ಮಾಡಿ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ರಿಕಲ್ಟನ್ ಅವರನ್ನು ಔಟ್ ಮಾಡಿದರು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಕೀಟಗಳು (flying ants) ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ನಿಲ್ಲಿಸಬೇಕಾಗಿದೆ. ಮೈದಾನದಲ್ಲಿ ಸಾಕಷ್ಟು ಹಾರುವ ಕೀಟಗಳಿದ್ದು, ಇದರಿಂದ ಎರಡೂ ತಂಡಗಳ ಆಟಗಾರರು ಸಮಸ್ಯೆ ಎದುರಿಸುತ್ತಿದ್ದಾರೆ.
ಟೀಂ ಇಂಡಿಯಾದ ವೇಗಿ ಅರ್ಷದೀಪ್ ಸಿಂಗ್ ಮೊದಲ ಓವರ್‌ನಲ್ಲಿ ಕೇವಲ 7 ರನ್ ನೀಡಿದರು.
ತಿಲಕ್ ವರ್ಮಾ ಅವರ 107 ರನ್‌ಗಳ ಶತಕ ಮತ್ತು ಅಭಿಷೇಕ್ ಶರ್ಮಾ ಅವರ ಅರ್ಧಶತಕದ ಆಧಾರದ ಮೇಲೆ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 220 ರನ್‌ಗಳ ಗುರಿಯನ್ನು ನೀಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅದ್ಭುತ ಪ್ರದರ್ಶನ ನೀಡಿ ಶತಕ ಸಿಡಿಸಿದ್ದಾರೆ.
ರಿಂಕು ಸಿಂಗ್ ಅವರನ್ನು ಬೌಲ್ಡ್ ಮಾಡುವ ಮೂಲಕ ಸಿಮ್ಲೇನ್ ಭಾರತಕ್ಕೆ ಐದನೇ ಹೊಡೆತ ನೀಡಿದರು. ರಿಂಕು 13 ಎಸೆತಗಳಲ್ಲಿ ಎಂಟು ರನ್ ಗಳಿಸಿ ಔಟಾದರು.
ಕೊಟ್ಜಿಯಾ ಅವರ ಓವರ್‌ನಲ್ಲಿ 21 ರನ್‌ಗಳು ಬಂದವು. ತಿಲಕ್ ವರ್ಮಾ 2 ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ಕೊಟ್ಜಿಯಾ 3 ಓವರ್‌ಗಳಲ್ಲಿ 51 ರನ್ ನೀಡಿದ್ದಾರೆ. ಭಾರತದ ಸ್ಕೋರ್ 16 ಓವರ್‌ಗಳಲ್ಲಿ 175 ರನ್ ಆಗಿದೆ
ತಿಲಕ್ ವರ್ಮ, ಕೇಶವ ಮಹಾರಾಜ ಅವರ ಓವರ್‌ನಲ್ಲಿ 16 ರನ್ ಗಳಿಸಿದರು. ಈ ಓವರ್‌ನಲ್ಲಿ ಒಂದು ಸಿಕ್ಸರ್ ಮತ್ತು ಎರಡು ಬೌಂಡರಿಗಳನ್ನು ಬಾರಿಸಿದರು. 15 ಓವರ್‌ಗಳ ಬಳಿಕ ಟೀಂ ಇಂಡಿಯಾ ಸ್ಕೋರ್ 150ರ ಗಡಿ ದಾಟಿದೆ.
ಸ್ಪಿನ್ನರ್ ಕೇಶವ್ ಮಹಾರಾಜ್ ಅದ್ಭುತ ಬೌಲಿಂಗ್ ಮಾಡಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ನಾಲ್ಕನೇ ಹೊಡೆತ ನೀಡಿದರು. ಹಾರ್ದಿಕ್ 16 ಎಸೆತಗಳಲ್ಲಿ ಮೂರು ಬೌಂಡರಿಗಳ ನೆರವಿನಿಂದ 18 ರನ್ ಗಳಿಸಿದರು. ಭಾರತ 13 ಓವರ್‌ಗಳ ಅಂತ್ಯಕ್ಕೆ ನಾಲ್ಕು ವಿಕೆಟ್‌ಗೆ 132 ರನ್ ಗಳಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು, 32 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ್ದಾರೆ.
ಅಭಿಷೇಕ್ ಶರ್ಮಾ ಔಟಾದ ಬಳಿಕ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಪೆವಿಲಿಯನ್ ಗೆ ಮರಳಿದ್ದಾರೆ. ಸಿಮಲಾನೆ ಎಸೆತದಲ್ಲಿ ಬಿಗ್ ಶಾಟ್ ಹೊಡೆಯುವ ಯತ್ನದಲ್ಲಿ ಸೂರ್ಯಕುಮಾರ್ ವಿಕೆಟ್ ಕಳೆದುಕೊಂಡರು. ನಾಲ್ಕು ಎಸೆತಗಳಲ್ಲಿ ಒಂದು ರನ್ ಗಳಿಸಿ ಸೂರ್ಯಕುಮಾರ್ ಔಟಾದರು.
ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಅರ್ಧಶತಕ ಗಳಿಸಿದ ಬೆನ್ನಲ್ಲೇ ವಿಕೆಟ್ ಕಳೆದುಕೊಂಡರು. ಈ ಮೂಲಕ ಅಭಿಷೇಕ್ ಮತ್ತು ತಿಲಕ್ ನಡುವಿನ ಎರಡನೇ ವಿಕೆಟ್‌ಗೆ 107 ರನ್ ಗಳ ಜೊತೆಯಾಟ ಮುರಿದುಬಿತ್ತು. ಅಭಿಷೇಕ್ 25 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಒಂಬತ್ತು ಓವರ್‌ಗಳ ಅಂತ್ಯಕ್ಕೆ ಭಾರತ ಎರಡು ವಿಕೆಟ್‌ಗೆ 107 ರನ್ ಗಳಿಸಿದೆ.
ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿ ಅರ್ಧಶತಕ ಗಳಿಸಿದರು. ಅಭಿಷೇಕ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.
ಪವರ್‌ಪ್ಲೇಯಲ್ಲಿ ಭಾರತ ತಂಡ 70 ರನ್ ಗಳಿಸಿದೆ. ಅಭಿಷೇಕ್ ಶರ್ಮಾ ಸಿಂಪಾಲ ಎಸೆತದಲ್ಲಿ ಅದ್ಭುತ ಸಿಕ್ಸರ್ ಬಾರಿಸಿದರು. ಅಭಿಷೇಕ್ ಮತ್ತು ತಿಲಕ್ ದಕ್ಷಿಣ ಆಫ್ರಿಕಾ ವೇಗಿಗಳನ್ನು ದಿಟ್ಟವಾಗಿ ಎದುರಿಸುತ್ತಿದ್ದಾರೆ.
ಐದನೇ ಓವರ್‌ನಲ್ಲಿ 18 ರನ್‌ಗಳು ಬಂದವು. ಈ ಓವರ್‌ನಲ್ಲಿ ಅಭಿಷೇಕ್ 2 ಸಿಕ್ಸರ್ ಬಾರಿಸಿದರೆ ತಿಲಕ್ ವರ್ಮಾ ಕ್ಲಾಸಿಕಲ್ ಫೋರ್ ಹೊಡೆದರು. ಟೀಂ ಇಂಡಿಯಾ ಸ್ಕೋರ್ 5 ಓವರ್‌ಗಳಲ್ಲಿ 60 ರನ್ ತಲುಪಿದೆ.
ಮೊದಲ ಓವರ್‌ನಲ್ಲಿಯೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡ ನಂತರ, ಅಭಿಷೇಕ್ ಶರ್ಮಾ ಮತ್ತು ತಿಲಕ್ ವರ್ಮಾ ಭಾರತದ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಅಭಿಷೇಕ್ ಮತ್ತು ತಿಲಕ್ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಮೂರು ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 35 ರನ್ ಗಳಿಸಿದೆ.
ಸತತ ಎರಡನೇ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಸಂಜು, ಆ ನಂತರದ ಎರಡೂ ಪಂದ್ಯಗಳಲ್ಲೂ ಸೊನ್ನೆ ಸುತ್ತಿದ್ದಾರೆ.
ಏಡೆನ್ ಮಾರ್ಕ್ರಾಮ್ (ನಾಯಕ), ರಿಯಾನ್ ರಿಕೆಲ್ಟನ್, ರೀಜಾ ಹೆಂಡ್ರಿಕ್ಸ್, ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಆಂಡಿಲ್ ಸಿಮೆಲೇನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ.
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್.
ಸತತ ಮೂರನೇ ಟಿ20 ಪಂದ್ಯದಲ್ಲೂ ಸೂರ್ಯಕುಮಾರ್ ಯಾದವ್ ಟಾಸ್ ಸೋತಿದ್ದಾರೆ. ಅದರಂತೆ ಟಾಸ್ ಗೆದ್ದಿರುವ ಆಫ್ರಿಕಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇಬ್ಬರ ನಡುವೆ ಇದುವರೆಗೆ 29 ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 16 ಹಾಗೂ ದಕ್ಷಿಣ ಆಫ್ರಿಕಾ 12 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಅಂದರೆ ಮತ್ತೊಮ್ಮೆ ಎರಡು ತಂಡಗಳ ನಡುವೆ ಕಠಿಣ ಪೈಪೋಟಿಯನ್ನು ಕಾಣಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8:30ಕ್ಕೆ ಆರಂಭವಾಗಲಿದ್ದು, ಟಾಸ್ 8 ಗಂಟೆಗೆ ನಡೆಯಲಿದೆ.
Published On - 7:38 pm, Wed, 13 November 24