IND vs SA: ಆರಂಭಿಕನನ್ನು ಬದಲಿಸುವುದೇ ಟೀಮ್ ಇಂಡಿಯಾಗೆ ದೊಡ್ಡ ಚಿಂತೆ..!

India vs South Africa 3rd T20I: ರುತುರಾಜ್ ಬದಲಿಗೆ ಮತ್ತೋರ್ವ ಆಟಗಾರನಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ. ಆದರೆ ಯಾರನ್ನು ಆಯ್ಕೆ ಮಾಡುವುದು ಎಂಬುದೇ ಈಗ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆ.

IND vs SA: ಆರಂಭಿಕನನ್ನು ಬದಲಿಸುವುದೇ ಟೀಮ್ ಇಂಡಿಯಾಗೆ ದೊಡ್ಡ ಚಿಂತೆ..!
Ishan-Ruturaj
Follow us
| Updated By: ಝಾಹಿರ್ ಯೂಸುಫ್

Updated on: Jun 13, 2022 | 4:18 PM

India vs South Africa 3rd T20I: ಸೌತ್ ಆಫ್ರಿಕಾ ವಿರುದ್ದದ (IND vs SA)  5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಮೊದಲೆರಡು ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಮೂರನೇ ಟಿ20 ಪಂದ್ಯ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡದ ಸೋತರೆ ಸರಣಿ ಸೌತ್ ಆಫ್ರಿಕಾ ಪಾಲಾಗಲಿದೆ. ಹೀಗಾಗಿ ಈ ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳುವತ್ತ ಟೀಮ್ ಇಂಡಿಯಾ ಚಿತ್ತ ನೆಟ್ಟಿದೆ. ಅದರಲ್ಲೂ ಭಾರತ ತಂಡವು ಮೊದಲ ಎರಡು ಪಂದ್ಯಗಳಲ್ಲೂ ಆರಂಭಿಕ ವೈಫಲ್ಯಕ್ಕೆ ಒಳಗಾಗಿತ್ತು. ಹೀಗಾಗಿಯೇ ಮೂರನೇ ಪಂದ್ಯದಲ್ಲಿ ಓಪನರ್ ಬದಲಾಗುವ ಸಾಧ್ಯತೆ ಹೆಚ್ಚು. ಏಕೆಂದರೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಇಶಾನ್ ಕಿಶನ್ (Ishan Kishan) ಎರಡು ಮ್ಯಾಚ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆದರೆ ಮತ್ತೊಂದೆಡೆ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಸ್ಥಾನ ಪಡೆದ ರುತುರಾಜ್ ಗಾಯಕ್ವಾಡ್ (Ruturaj Gaikwad) ರನ್​ಗಳಿಸಲು ಪರದಾಡುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ಕೇವಲ 23 ರನ್​ಗಳಿಸಿ ಔಟಾಗಿದ್ದ ರುತುರಾಜ್ ಗಾಯಕ್ವಾಡ್, 2ನೇ ಪಂದ್ಯದಲ್ಲಿ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲಿ ರುತುರಾಜ್ ಬದಲಿಗೆ ಮತ್ತೋರ್ವ ಆಟಗಾರನಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ. ಆದರೆ ಯಾರನ್ನು ಆಯ್ಕೆ ಮಾಡುವುದು ಎಂಬುದೇ ಈಗ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆ. ಏಕೆಂದರೆ ತಂಡದಲ್ಲಿ ಹೆಚ್ಚುವರಿ ಆರಂಭಿಕನಾಗಿ ಇರುವುದು ಏಕೈಕ ಆಟಗಾರ ಮಾತ್ರ. ಅಂದರೆ ಬದಲಿಯಾಗಿ ವೆಂಕಟೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

ಆದರೆ ಕಳಪೆ ಫಾರ್ಮ್​ನಲ್ಲಿರುವ ವೆಂಕಿಗೆ ಚಾನ್ಸ್​ ನೀಡುವುದೇ ಈಗ ದೊಡ್ಡ ಚಿಂತೆಯಾಗಿ ಮಾರ್ಪಟ್ಟಿದೆ. ಏಕೆಂದರೆ ಈ ಬಾರಿ ಐಪಿಎಲ್​ನಲ್ಲಿ ಕೆಕೆಆರ್ ಪರ 12 ಪಂದ್ಯವಾಡಿರುವ ವೆಂಕಟೇಶ್ ಅಯ್ಯರ್ ಕಲೆಹಾಕಿದ್ದು ಕೇವಲ 182 ರನ್​ ಮಾತ್ರ. ಅಂದರೆ ಇಲ್ಲಿ ವೆಂಕಟೇಶ್ ಅಯ್ಯರ್ ಫಾರ್ಮ್​ನಲ್ಲಿ ಇಲ್ಲದಿರುವುದು ಸ್ಪಷ್ಟ. ಆದರೆ ಇತ್ತ ಟೀಮ್ ಇಂಡಿಯಾ ಆರಂಭಿಕನನ್ನು ಬದಲಿಸಬೇಕಾದ ಅನಿವಾರ್ಯತೆಯಲ್ಲಿದೆ. ಏಕೆಂದರೆ ರತುರಾಜ್ ಮೊದಲೆರಡು ಪಂದ್ಯಗಳಲ್ಲಿ ಪರಿಣಾಮಕಾರಿಯಾಗಿ ಬ್ಯಾಟ್ ಬೀಸಿಲ್ಲ. ಇತ್ತ ಅವರನ್ನು ಕೈಬಿಟ್ಟರೆ ವೆಂಕಟೇಶ್ ಅಯ್ಯರ್​ ಬಿಟ್ಟರೆ ಟೀಮ್ ಇಂಡಿಯಾ ಮುಂದೆ ಮತ್ತೊಂದು ಆಯ್ಕೆ ಕೂಡ ಇಲ್ಲ.

ಇದನ್ನೂ ಓದಿ
Image
KL Rahul: ಗಾಯ ಗಂಭೀರವಲ್ಲ..ಜಿಮ್​ನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇದನ್ನೂ ಓದಿ: IPL Media Rights: ಪ್ರತಿ ಪಂದ್ಯಕ್ಕೆ 50 ಕೋಟಿ ರೂ: ಐಪಿಎಲ್​ ಡಿಜಿಟಲ್ ಹಕ್ಕು ಮಾರಾಟ..!

ಹೀಗಾಗಿ ರುತುರಾಜ್ ಗಾಯಕ್ವಾಡ್​ಗೆ ಮತ್ತೊಂದು ಅವಕಾಶ ನೀಡಬೇಕಾ ಅಥವಾ ಔಟ್ ಆಫ್ ಫಾರ್ಮ್​ನಲ್ಲಿರುವ ವೆಂಕಟೇಶ್ ಅಯ್ಯರ್​ಗೆ ಚಾನ್ಸ್​ ರಿಸ್ಕ್​ ತೆಗೆದುಕೊಳ್ಳಬೇಕಾ ಎಂಬ ಚಿಂತೆಯೊಂದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಶುರುವಾಗಿದೆ. ಒಟ್ಟಿನಲ್ಲಿ ಮೂರನೇ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದು, ಹೀಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನನ್ನು ಕಣಕ್ಕಿಳಿಸದ ಹೊರತು ಗೆಲ್ಲುವು ಅಸಾಧ್ಯ.

ಟೀಮ್ ಇಂಡಿಯಾ ಟಿ20 ತಂಡ (Team India T20 Squad): ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು