IND Vs SA, 3rd T20I Live Streaming: ಕ್ಲೀನ್ ಸ್ವೀಪ್ ಮೇಲೆ ಭಾರತದ ಕಣ್ಣು; ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಪಂದ್ಯ ಆರಂಭ?

IND Vs SA, 3rd T20I Live Streaming: ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಡುತ್ತಿರುವ ಕೊನೆಯ ಟಿ20 ಸರಣಿ ಇದಾಗಿದ್ದು, ಗೆಲುವಿನ ಮೂಲಕ ಆಸ್ಟ್ರೇಲಿಯಾಕ್ಕೆ ಹಾರಲು ರೋಹಿತ್ ಪಡೆ ಪ್ರಯತ್ನಿಸಲಿದೆ.

IND Vs SA, 3rd T20I Live Streaming: ಕ್ಲೀನ್ ಸ್ವೀಪ್ ಮೇಲೆ ಭಾರತದ ಕಣ್ಣು; ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಪಂದ್ಯ ಆರಂಭ?
India Vs South Africa
Follow us
TV9 Web
| Updated By: ಪೃಥ್ವಿಶಂಕರ

Updated on:Oct 03, 2022 | 3:10 PM

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ಮಂಗಳವಾರ ಲಕ್ನೋದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದ ಭಾರತ ತಂಡ ಈಗಾಗಲೇ ಸರಣಿ ಗೆದ್ದಿದ್ದು, ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಪ್ರಯತ್ನದಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್‌ಗಳ ಜಯ ಸಾಧಿಸಿತ್ತು. ಆದರೆ ಗುವಾಹಟಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನೀಡಿದ್ದ ಬೃಹತ್ ಟಾರ್ಗೆಟ್ ನಡುವೆಯೂ ಗೆಲ್ಲಲು ಟೀಂ ಇಂಡಿಯಾ ಸಾಕಷ್ಟು ಬೆವರು ಹರಿಸಬೇಕಾಯಿತು.

ಇಡೀ ಪಂದ್ಯದಲ್ಲಿ ಏಕಾಂಗಿ ಹೋರಾಟ ನಡೆಸಿದ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ ಟೀಂ ಇಂಡಿಯಾ ಬೌಲರ್‌ಗಳಿಗೆ ಸಿಂಹಸ್ವಪ್ನವಾದರು. ಕೇವಲ 47 ಎಸೆತಗಳನ್ನು ಎದುರಿಸಿದ ಮಿಲ್ಲರ್, 106 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಮತ್ತೊಂದೆಡೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದರು. ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಡುತ್ತಿರುವ ಕೊನೆಯ ಟಿ20 ಸರಣಿ ಇದಾಗಿದ್ದು, ಗೆಲುವಿನ ಮೂಲಕ ಆಸ್ಟ್ರೇಲಿಯಾಕ್ಕೆ ಹಾರಲು ರೋಹಿತ್ ಪಡೆ ಪ್ರಯತ್ನಿಸಲಿದೆ.

ಸರಣಿ ಮುಗಿದ ತಕ್ಷಣ ಆಸ್ಟ್ರೇಲಿಯಾಕ್ಕೆ ಪ್ಯಾಕಪ್

ಸರಣಿ ಮುಗಿದ ಬಳಿಕ ರೋಹಿತ್ ಪಡೆ ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಲಿದೆ. ಭಾರತ ತಂಡ ಅಕ್ಟೋಬರ್ 23 ರಂದು ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇದಕ್ಕೂ ಮುನ್ನ ತಂಡವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ 2 ಅಭ್ಯಾಸ ಪಂದ್ಯಗಳನ್ನು ಆಡಲಿದೆ.

ಅಂತಿಮ ಟಿ20 ಪಂದ್ಯದ ಸಂಪೂರ್ಣ ವಿವರ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಅಕ್ಟೋಬರ್ 4 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ T20 ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ T20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

Published On - 3:10 pm, Mon, 3 October 22