IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್.. ಕೊಹ್ಲಿ, ಉಮೇಶ್ ಇನ್; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

IND vs SA: ಕೇಪ್ ಟೌನ್ ಟೆಸ್ಟ್​ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಅವರ ಜಾಗದಲ್ಲಿ ಹನುಮ ವಿಹಾರಿ ಹೊರ ಹೋಗಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್.. ಕೊಹ್ಲಿ, ಉಮೇಶ್ ಇನ್; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ

ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದೆ. ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಕೇಪ್ ಟೌನ್ ಟೆಸ್ಟ್​ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಅವರ ಜಾಗದಲ್ಲಿ ಹನುಮ ವಿಹಾರಿ ಹೊರ ಹೋಗಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಬಗ್ಗೆ ಹೇಳುವುದಾದರೆ, ಅವರು ಆಡುವ XI ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತದ ಆಡುವ XI ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್ XI ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಟೆಂಬಾ ಬವುಮಾ, ಕೀಗನ್ ಪೀಟರ್ಸನ್, ರೆಸಿ ವ್ಯಾನ್ ಡೆರ್ ಡ್ಯುಸೆನ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಮಾರ್ಕೊ ಯಾನ್ಸನ್, ಡುವಾನ್ ಒಲಿವಿಯರ್, ಕೇಶವ್ ಮಹಾರಾಜ್ ಮತ್ತು ಕೈಲ್ ವೆರೆನ್.

Published On - 1:46 pm, Tue, 11 January 22

Click on your DTH Provider to Add TV9 Kannada