ಕೇಪ್ ಟೌನ್ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಣ ಕೊನೆಯ ಟೆಸ್ಟ್ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ 223 ರನ್ಗಳಿಗೆ ಉತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2ನೇ ದಿನದಾಟದಲ್ಲೇ ಆಲೌಟ್ ಆಗಿದೆ. ಮೊದಲ ದಿನ 1 ವಿಕೆಟ್ ನಷ್ಟಕ್ಕೆ 17 ರನ್ಗಳಿಸಿದ್ದ ದಕ್ಷಿಣ ಆಫ್ರಿಕಾ 2ನೇ ದಿನದಾಟವನ್ನು ಆರಂಭಿಸಿತ್ತು. ಆದರೆ ಟೀಮ್ ಇಂಡಿಯಾ ವೇಗಿಗಳ ಮಾರಕ ಬೌಲಿಂಗ್ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ದಕ್ಷಿಣ ಆಫ್ರಿಕಾ ಬ್ಯಾಟರ್ಗಳಿಗೆ ಸಾಧ್ಯವಾಗಿಲ್ಲ.
ಇದಾಗ್ಯೂ 4ನೇ ಕ್ರಮಾಂಕದಲ್ಲಿ ಕೀಗನ್ ಪೀಟರ್ಸನ್ ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ 72 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಆದರೆ ಇನ್ನೊಂದೆ ಬುಮ್ರಾ ಯಾರ್ಕರ್ಗಳಿಗೆ ದಕ್ಷಿಣ ಆಫ್ರಿಕಾ ವಿಕೆಟ್ಗಳು ಒಂದರ ಹಿಂದೆ ಒಂದರಂತೆ ಬೀಳುತ್ತಾ ಹೋಯಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ 210 ರನ್ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ 42 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರೆ ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ತಲಾ 2 ವಿಕೆಟ್ ಕಬಳಿಸಿ ಗಮನ ಸೆಳೆದರು.
ಇನ್ನು ಮೊದಲ ಇನಿಂಗ್ಸ್ನ 13 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಈ ಬಾರಿ ಕೂಡ ಆರಂಭಿಕ ವೈಫಲ್ಯಕ್ಕೆ ಒಳಗಾಯಿತು. 10 ರನ್ಗಳಿಸಿ ಕೆಎಲ್ ರಾಹುಲ್ ಔಟಾದರೆ, 7 ರನ್ಗಳಿಸಿ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರಾ ತಂಡಕ್ಕೆ ಆಸರೆಯಾದರು. ಇದೀಗ 2ನೇ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 57 ರನ್ಗಳಿಸಿದೆ. ಸದ್ಯ ಕ್ರೀಸ್ನಲ್ಲಿ ಚೇತಶ್ವರ ಪೂಜಾರಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟ್ ಮಾಡುತ್ತಿದ್ದು, 3ನೇ ದಿನದಾಟದಲ್ಲಿ ದೊಡ್ಡ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್
ಇದನ್ನೂ ಓದಿ: Sachin Tendulkar: ಆಲ್ ಟೈಮ್ ಬೆಸ್ಟ್ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ
ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!
(India vs South Africa 3rd Test: Kohli, Pujara keep IND steady at Stumps)
Published On - 11:00 pm, Wed, 12 January 22