South Africa vs India: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟೆಸ್ಟ್: ಇತಿಹಾಸ ಸೃಷ್ಟಿಸುವ ಕನಸಲ್ಲಿ ಕೊಹ್ಲಿ ಪಡೆ

IND vs SA 3rd Test: ಅನೇಕ ಕಾರಣಗಳಿಂದಾಗಿ ಭಾರತ- ದಕ್ಷಿಣ ಆಫ್ರಿಕಾ 3ನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ಆಫ್ರಿಕಾದಲ್ಲಿ ಭಾರತಕ್ಕೆ ಮೊದಲ ಸರಣಿ ಜಯ ತಂದುಕೊಟ್ಟ ಶ್ರೇಯಸ್ಸು ಕೊಹ್ಲಿ ಪಡೆಗೆ ಸಿಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

South Africa vs India: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಮೂರನೇ ಟೆಸ್ಟ್: ಇತಿಹಾಸ ಸೃಷ್ಟಿಸುವ ಕನಸಲ್ಲಿ ಕೊಹ್ಲಿ ಪಡೆ
India vs South Africa 3rd Test
Follow us
TV9 Web
| Updated By: Vinay Bhat

Updated on: Jan 11, 2022 | 7:28 AM

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಅಂತಿಮ ಮೂರನೇ ಟೆಸ್ಟ್ ಪಂದ್ಯ ಇಂದಿನಿಂದ ಕೇಪ್ ಟೌನ್​ನ (Cape Town) ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಆರಂಭವಾಗಲಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿರುವ ಕಾರಣ ಇದು ನಿರ್ಣಾಯಕ ಕದನವಾಗಿರಲಿದೆ. ಸೆಂಚೂರಿಯನ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 113 ರನ್​ಗಳ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದರೆ, ಜೋಹಾನ್ಸ್​ಬರ್ಗ್​​ನಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಸೌತ್ ಆಫ್ರಿಕಾ 7 ವಿಕೆಟ್​ಗಳ ಗೆಲುವು ಕಂಡಿತು. ಹೀಗಾಗಿ ಉಭಯ ತಂಡಗಳು ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ. ಸದ್ಯ ಮೂರನೇ ಟೆಸ್ಟ್​ ಪಂದ್ಯದ ಮೇಲೆ ಸರಣಿ ಗೆಲುವಿನ ಲೆಕ್ಕಾಚಾರ ನಿಂತಿದೆ. ವಿರಾಟ್ ಕೊಹ್ಲಿ (Virat Kohli) ಪಡೆ ಈ ಟೆಸ್ಟ್ ಗೆದ್ದರೆ ಹರಿಣಗಳ ನಾಡಿನಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದಂತಾಗುತ್ತದೆ.

ಗಾಯಕ್ಕೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಕಮ್​ಬ್ಯಾಕ್ ಮಾಡಿರುವುದು ಟೀಮ್ ಇಂಡಿಯಾ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಿದೆ. ನಿನ್ನೆ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ, ತಾನು ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಮೊಹಮ್ಮದ್ ಸಿರಾಜ್ ಅಲಭ್ಯರಾಗಲಿದ್ದಾರೆ ಎಂಬ ವಿಷಯವನ್ನು ತಿಳಿಸಿದರು.

ಇನ್ನು ಕೊಹ್ಲಿ ತೃತೀಯ ಟೆಸ್ಟ್ ಪಂದ್ಯದ ಮೂಲಕ ತಂಡಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ ಹನುಮ ವಿಹಾರಿ ಆಡುವ ಬಳಗದಿಂದ ಹೊರಗುಳಿಯಬೇಕಾಗುತ್ತದೆ. ಮೊಹಮ್ಮದ್ ಸಿರಾಜ್ ಬದಲು ಉಮೇಶ್ವ ಯಾದವ್ ಅಥವಾ ಇಶಾಂತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಹಿರಿಯ ಅನುಭವಿ ಬ್ಯಾಟರ್​ಗಳಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲೂ ಸ್ಥಾನ ಪಡೆಯುವುದು ಖಚಿತ.

ಚೆಂಡು ಬೌನ್ಸ್‌ ಆಗುವ ನ್ಯೂಲ್ಯಾಂಡ್ಸ್ ಪಿಚ್‌ನಲ್ಲಿ ಕಗಿಸೊ ರಬಾಡ, ಲುಂಗಿ ಗಿಡಿ, ಡ್ವಾನೆ ಒಲಿವಿಯರ್‌ ಹಾಗೂ ಮಾರ್ಕೊ ಜ್ಯಾನ್ಸೆನ್ ಅವರ ಎಸೆತಗಳನ್ನು ಎದುರಿಸಲು ಭಾರತದ ಬ್ಯಾಟರ್‌ಗಳು ಯಾವ ತಂತ್ರ ಬಳಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಕೆ.ಎಲ್‌.ರಾಹುಲ್ ಮತ್ತು ಮಯಂಕ್‌ ಅಗರವಾಲ್ ತಂಡಕ್ಕೆ ಉತ್ತಮ ಆರಂಭ ಒದಗಿಸುವರೇ ಎಂಬುದು ಕೂಡ ಕೂತೂಹ ಕೆರಳಿಸಿರುವ ಮತ್ತೊಂದು ಪ್ರಶ್ನೆ. ಹೀಗಾಗಿ ಭಾರತ ಬ್ಯಾಟಿಂಗ್​ನಲ್ಲಿ ಎಚ್ಚರಿಕೆಯಿಂದ ಆಡಬೇಕಿದೆ.

ಕೇಪ್‌ ಟೌನ್‌ ನ್ಯೂಲ್ಯಾಂಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಒಮ್ಮೆಯೂ ಸೋಲಿಸಿಲ್ಲ. ಎರಡು ಪಂದ್ಯಗಳಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಭಾರತ ತಂಡ ಅಂತಿಮವಾಗಿ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು ಹಾಗೂ ಇನ್ನುಳಿದ ಮೂರು ಪಂದ್ಯಗಳಲ್ಲಿ ಸೋಲುಂಡಿತ್ತು. ಈ ಅಂಗಣದಲ್ಲಿ ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ 6 ಪಂದ್ಯಗಳಿಂದ 35 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಬಾಡ ವಿರುದ್ದ ಭಾರತ ಎಚ್ಚರಿಕೆಯಿಂದ ಬ್ಯಾಟ್‌ ಮಾಡಬೇಕಾದ ಅಗತ್ಯವಿದೆ. ಆಫ್ರಿಕಾ ನಾಯಕ ಡೀನ್‌ ಎಲ್ಗರ್‌ ಕೂಡ ಭಾರತದ ಬೌಲರ್‌ಗಳಿಗೆ ಸವಾಲಾಗಿದ್ದಾರೆ. ಈ ಅಂಗಣದಲ್ಲಿ ಅವರು ಆಡಿರುವ 10 ಪಂದ್ಯಗಳಿಂದ ಎರಡು ಶತಕ ಹಾಗೂ ಮೂರು ಅರ್ಧಶತಕಗಳೊಂದಿಗೆ ಒಟ್ಟು 708 ರನ್‌ ಗಳಿಸಿದ್ದಾರೆ.

ಒಟ್ಟಾರೆ ಅನೇಕ ಕಾರಣಗಳಿಂದಾಗಿ ಈ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಭಾರತಕ್ಕೆ ಮೊದಲ ಸರಣಿ ಜಯ ತಂದುಕೊಟ್ಟ ಶ್ರೇಯಸ್ಸು ವಿರಾಟ್ ಕೊಹ್ಲಿ ಪಡೆಗೆ ಸಿಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

India vs South Africa, 3rd Test: ಕಿಂಗ್ ಕೊಹ್ಲಿ ಕಂಬ್ಯಾಕ್, ಸಿರಾಜ್ ಔಟ್: ಯಾರಿಗೆ ಸಿಗಲಿದೆ ಚಾನ್ಸ್​?

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ