IND vs SA: ಕೊನೆಗೂ ಟಾಸ್ ಗೆದ್ದ ಸೂರ್ಯ; ಆಫ್ರಿಕಾ ವಿರುದ್ಧ ಕಣಕ್ಕಿಳಿದ ಬಲಿಷ್ಠ ಪಡೆ
IND vs SA: ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ತಂಡ ಅಂತಿಮ ಹಾಗೂ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದ್ದು, ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಗೆಲ್ಲುವ ಅವಕಾಶ ಟೀಂ ಇಂಡಿಯಾಕ್ಕಿದೆ. ಇತ್ತ ದಕ್ಷಿಣ ಆಫ್ರಿಕಾ ಕೂಡ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮಬಲಗೊಳಿಸುವ ಇರಾದೆಯಲ್ಲಿದೆ. ಇನ್ನು ಈ ಪಂದ್ಯದ ಟಾಸ್ ನಡೆದಿದ್ದು, ಕೊನೆಗೂ ಆಫ್ರಿಕಾ ನೆಲದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ವಾಸ್ತವವಾಗಿ ಈ ಪಂದ್ಯಕ್ಕೂ ಮುನ್ನ ನಡೆದ ಮೂರೂ ಪಂದ್ಯಗಳಲ್ಲೂ ಸೂರ್ಯಕುಮಾರ್ ಯಾದವ್ ಟಾಸ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
ಉಭಯ ತಂಡಗಳು
ದಕ್ಷಿಣ ಆಫ್ರಿಕಾ: ರಿಯಾನ್ ರೆಕ್ಲೆಸ್ಟೋನ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೆ ಜೆನ್ಸನ್, ಜೆರಾಲ್ಡ್ ಕೊಯೆಟ್ಜಿ, ಆಂಡಿಲ್ ಸಿಮೆಲೇನ್, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ.
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ರಮಣದೀಪ್ ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ.
🚨 Toss Update 🚨
Captain @surya_14kumar wins the toss and #TeamIndia elect to bat in the final T20I 👌👌
Live – https://t.co/b22K7t9imj#SAvIND pic.twitter.com/8WWKoVMRpZ
— BCCI (@BCCI) November 15, 2024
ಅದೃಷ್ಟದ ಮೈದಾನ
ಎರಡೂ ತಂಡಗಳು ವಾಂಡರರ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಮೈದಾನ ಭಾರತದ ಪಾಲಿಗೆ ಅದೃಷ್ಟದ ಮೈದಾನವಾಗಿದೆ. ಇದೇ ಮೈದಾನದಲ್ಲಿ 2007ರಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ನಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಸೋಲಿಸಿ ಮೊದಲ ಟಿ20 ವಿಶ್ವಕಪ್ ಗೆದ್ದಿತ್ತು. ಒಂದು ವರ್ಷದ ಹಿಂದೆ ಕಳೆದ ಟಿ20 ಸರಣಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಇನ್ನು ಉಭಯ ತಂಡಗಳ ನಡುವೆ ಕೊನೆಯದಾಗಿ ಆಡಿದ ಸರಣಿ 1-1 ಸಮಬಲವಾಗಿದ್ದರೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.
3ನೇ ಸರಣಿ ಗೆಲ್ಲುವ ತವಕದಲ್ಲಿ ಭಾರತ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕಳೆದ 5 ಟಿ20 ಸರಣಿಯಲ್ಲಿ ಮೂರು ಡ್ರಾ ಆಗಿದೆ. ಕಳೆದ ವರ್ಷ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಅಲ್ಲಿ 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲದಲ್ಲಿ ಕೊನೆಗೊಂಡಿತ್ತು. ಅದಕ್ಕೂ ಮುನ್ನ 2022ರಲ್ಲಿ ಭಾರತದಲ್ಲಿ ನಡೆದ ಸರಣಿ 2-2ರಲ್ಲಿ ಡ್ರಾದಲ್ಲಿ ಅಂತ್ಯಗೊಂಡಿತ್ತು. 2019-20ರಲ್ಲಿ ಭಾರತದಲ್ಲಿ ಸರಣಿ 1-1ರಲ್ಲಿ ಸಮಬಲದಲ್ಲಿತ್ತು. ಕಳೆದ 5 ಸರಣಿಗಳಲ್ಲಿ ಟೀಂ ಇಂಡಿಯಾ ಉಳಿದೆರಡು ಸರಣಿಗಳನ್ನು ಗೆದ್ದಿದ್ದು, ಇದೀಗ ಮೂರನೇಯ ಸರಣಿ ಮೇಲೆ ಭಾರತ ಕಣ್ಣಿಟ್ಟಿದೆ. ಟಿ20 ಕ್ರಿಕೆಟ್‌ನ ಅತ್ಯಂತ ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ರಿಂಕು ಸಿಂಗ್ ಅವರ ಫಾರ್ಮ್ ಕೂಡ ಆತಂಕಕ್ಕೆ ಕಾರಣವಾಗಿದೆ, ಕಳೆದ ಕೆಲವು ತಿಂಗಳುಗಳಿಂದ ಉತ್ತಮವಾಗಿ ಆಡಲು ಸಾಧ್ಯವಾಗುತ್ತಿಲ್ಲ. ಆರು ಅಥವಾ ಏಳನೇ ಕ್ರಮಾಂಕದಲ್ಲಿ ಸ್ಥಾನ ಪಡೆದಿರುವುದರಿಂದ ಆರಾಮವಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:14 pm, Fri, 15 November 24