
ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿದೆ. ಅದಕ್ಕೂ ಮುನ್ನ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ ಎಂಬಿತ್ಯಾದಿ ವಿವರವನ್ನು ತಿಳಿದುಕೊಳ್ಳೋಣ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಡಿಸೆಂಬರ್ 19, 2025 ರಂದು ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20ಪಂದ್ಯ ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಮೊಬೈಲ್‌ನಲ್ಲಿ ವೀಕ್ಷಿಸಬಹುದು.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಡಿ ಕಾಕ್, ಹೆಂಡ್ರಿಕ್ಸ್, ಬ್ರೆವಿಸ್, ಮಿಲ್ಲರ್, ಸ್ಟಬ್ಸ್, ಫೆರೀರಾ, ಜೆನ್ಸನ್, ಲುಥೊ ಸಿಪಾಮ್ಲಾ, ಒಟ್ನೀಲ್ ಬಾರ್ಟ್‌ಮನ್, ಅನ್ರಿಚ್ ನೋಕಿಯಾ, ಲುಂಗಿ ಎನ್‌ಗಿಡಿ, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ