IND vs SA 5th T20 Match Live Streaming: ಹರಿಣಗಳನ್ನು ಮಣಿಸಿ ಸರಣಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ

India vs South Africa 5th T20 Match Live Streaming: ಭಾನುವಾರ ಬೆಂಗಳೂರಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 5ನೇ ಹಾಗೂ ನಿರ್ಣಾಯಕ ಪಂದ್ಯ ನಡೆಯಲಿದೆ. ಇಬ್ಬರ ನಡುವಿನ 5 ಪಂದ್ಯಗಳ ಟಿ20 ಸರಣಿ 2-2ರಲ್ಲಿ ಸಮಬಲಗೊಂಡಿದೆ.

IND vs SA 5th T20 Match Live Streaming: ಹರಿಣಗಳನ್ನು ಮಣಿಸಿ ಸರಣಿ ಗೆಲ್ಲುತ್ತಾ ಭಾರತ? ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ
India vs South Africa
Follow us
| Updated By: ಪೃಥ್ವಿಶಂಕರ

Updated on:Jun 18, 2022 | 3:07 PM

ಭಾನುವಾರ ಬೆಂಗಳೂರಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವೆ 5ನೇ ಹಾಗೂ ನಿರ್ಣಾಯಕ ಪಂದ್ಯ ನಡೆಯಲಿದೆ. ಇಬ್ಬರ ನಡುವಿನ 5 ಪಂದ್ಯಗಳ ಟಿ20 ಸರಣಿ 2-2ರಲ್ಲಿ ಸಮಬಲಗೊಂಡಿದೆ. ದಕ್ಷಿಣ ಆಫ್ರಿಕಾ ಸರಣಿಯ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿತು, ಆದರೆ ನಂತರದ ಎರಡು ಪಂದ್ಯಗಳಲ್ಲಿ ಭಾರತವು ಸೇಡು ತೀರಿಸಿಕೊಂಡಿತು ಮತ್ತು ಸರಣಿಯನ್ನು ಸಮಸ್ಥಿತಿಗೆ ತಂದಿತು. ಇದೀಗ ಇಬ್ಬರ ದೃಷ್ಟಿಯೂ ನಿರ್ಣಾಯಕ ಪಂದ್ಯದತ್ತ ನೆಟ್ಟಿದೆ. ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಪಂದ್ಯದ ಕುರಿತು ಮಾತನಾಡುವುದಾದರೆ, ಮೊದಲು ಬ್ಯಾಟಿಂಗ್ ಮಾಡಿದ ರಿಷಬ್ ಪಂತ್ (Rishabh Pant) ನೇತೃತ್ವದ ಟೀಂ ಇಂಡಿಯಾ 6 ವಿಕೆಟ್‌ಗೆ 169 ರನ್ ಗಳಿಸಿತು. 170 ರನ್‌ಗಳ ಗುರಿಗೆ ಉತ್ತರವಾಗಿ ಪ್ರವಾಸಿ ತಂಡವನ್ನು 87 ರನ್‌ಗಳಿಗೆ ಆಲ್​ಔಟ್ ಮಾಡಲಾಯಿತು.

ಕಾರ್ತಿಕ್ ಮತ್ತು ಪಾಂಡ್ಯ ಅಬ್ಬರ

ದಿನೇಶ್ ಕಾರ್ತಿಕ್ ಭರ್ಜರಿ ಅರ್ಧಶತಕ ಗಳಿಸಿದರು. ಕಾರ್ತಿಕ್ 16 ವರ್ಷಗಳ ನಂತರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. ಅದೇ ವೇಳೆ ಅವೇಶ್ ಖಾನ್ ಕೂಡ 18 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಸಂಚಲನ ಮೂಡಿಸಿದರು. ಗೆಲುವಿನ ಹಾದಿಗೆ ಮರಳಿದ ಭಾರತ ತಂಡದ ಪ್ರದರ್ಶನದ ಕುರಿತು ಮಾತನಾಡಿದ ಪಂತ್, ನಾವು ತಂತ್ರದ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದ್ದವು. ಈಗ ಫಲಿತಾಂಶವು ಮುಂದಿದೆ ಎಂದು ಹೇಳಿದರು. ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಅತ್ಯುತ್ತಮ ಜೊತೆಯಾಟದ ಬಗ್ಗೆ ಮಾತನಾಡಿದ ನಾಯಕ, ಇಬ್ಬರ ಬ್ಯಾಟಿಂಗ್‌ನಿಂದಾಗಿ ಬೌಲರ್‌ಗಳು ಒತ್ತಡವನ್ನು ಹೇರಲು ಪ್ರಾರಂಭಿಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ
Image
Ranji Trophy: 23 ವರ್ಷಗಳ ನಂತರ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್‌ ಪ್ರವೇಶಿಸಿದ ಮಧ್ಯಪ್ರದೇಶ..!
Image
ENG vs NED: 498 ರನ್, 3 ಶತಕ, 26 ಸಿಕ್ಸರ್! ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ ನಿರ್ಮಿಸಿದ 5 ವಿಶ್ವ ದಾಖಲೆಗಳಿವು
Image
IND vs SA: ಸಿಂಗಲ್​ಗೆ ಒಲ್ಲೆ ಎಂದ ಪಾಂಡ್ಯ; 26 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ಉತ್ತರ ಕೊಟ್ಟ ಕಾರ್ತಿಕ್

ಇದನ್ನೂ ಓದಿ:IND vs IRE: 6 ಎಸೆತಗಳಲ್ಲಿ 6 ಸಿಕ್ಸರ್! ಐಪಿಎಲ್​ನಲ್ಲಿ 413 ರನ್ ಚಚ್ಚಿದ ಬ್ಯಾಟರ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ

ಪಂದ್ಯದ ಬಗೆಗಿನ ಹೆಚ್ಚಿನ ಮಾಹಿತಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಜೂನ್ 19 ರಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ T20 ಎಲ್ಲಿ ನೇರ ಪ್ರಸಾರವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ20 ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ T20I ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ T20 ನ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದು. ಇದಲ್ಲದೇ tv9kannada.com ನ ಲೈವ್ ಬ್ಲಾಗ್‌ನಿಂದಲೂ ಪಂದ್ಯದ ಮಾಹಿತಿಯನ್ನು ಪಡೆಯಬಹುದು

Published On - 3:07 pm, Sat, 18 June 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ