IND vs SA 5thT20 Weather Report: ಫೈನಲ್ ಫೈಟ್​ಗೆ ಮಳೆ ಕಾಟ! ಟಾಸ್ ವೇಳೆಗೆ ವರುಣನ ಎಂಟ್ರಿ?

IND Vs SA T20 Weather Forecast Report Today: ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಸಮಯದಲ್ಲಿ ಹವಾಮಾನ ಹದಗೆಡುವ ನಿರೀಕ್ಷೆಯಿದೆ. ಅಕ್ಯುವೆದರ್ ಪ್ರಕಾರ, ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಶೇಕಡಾ 51 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

IND vs SA 5thT20 Weather Report: ಫೈನಲ್ ಫೈಟ್​ಗೆ ಮಳೆ ಕಾಟ! ಟಾಸ್ ವೇಳೆಗೆ ವರುಣನ ಎಂಟ್ರಿ?
IND VS SA
Follow us
TV9 Web
| Updated By: ಪೃಥ್ವಿಶಂಕರ

Updated on:Jun 19, 2022 | 2:18 PM

ಭಾನುವಾರ ಬೆಂಗಳೂರಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa in Bengaluru) ನಡುವೆ 5ನೇ ಹಾಗೂ ಅಂತಿಮ ಟಿ20 ಪಂದ್ಯ (5th and final T20 match) ನಡೆಯಲಿದೆ. ಇಬ್ಬರ ನಡುವಿನ ಸರಣಿ 2-2ರಲ್ಲಿ ಸಮಬಲವಾಗಿದ್ದು, ಕೊನೆಯ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ತೀವ್ರ ಪ್ರಯತ್ನ ನಡೆಸಲಿವೆ. ಸರಣಿಯ ಮೊದಲ 2 ಪಂದ್ಯಗಳನ್ನು ಪ್ರವಾಸಿ ತಂಡ ದಕ್ಷಿಣ ಆಫ್ರಿಕಾ ಗೆದ್ದಿತ್ತು. ಇದಾದ ಬಳಿಕ ರಿಷಭ್ ಪಂತ್ (Rishabh Pant) ನೇತೃತ್ವದ ಟೀಂ ಇಂಡಿಯಾ ಮೂರು ಮತ್ತು ನಾಲ್ಕನೇ ಪಂದ್ಯಗಳನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸಿದೆ. ಈಗ ಎಲ್ಲರ ಕಣ್ಣು ನಿರ್ಣಾಯಕ ಪಂದ್ಯದತ್ತ ನೆಟ್ಟಿದೆ. ಉಭಯ ತಂಡಗಳು ಮತ್ತು ಅಭಿಮಾನಿಗಳಲ್ಲದೆ, ಹವಾಮಾನವೂ ಇದರ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಿನವಿಡೀ ಮೋಡ ಕವಿದ ವಾತಾವರಣ ಇರುತ್ತದೆ.

ಟಾಸ್ ವೇಳೆಗೆ ಮಳೆ ಸಾಧ್ಯತೆ

ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಸಮಯದಲ್ಲಿ ಹವಾಮಾನ ಹದಗೆಡುವ ನಿರೀಕ್ಷೆಯಿದೆ. ಅಕ್ಯುವೆದರ್ ಪ್ರಕಾರ, ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಶೇಕಡಾ 51 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯದ ಪ್ರಾರಂಭದಲ್ಲಿ ವಿಳಂಬವಾಗಬಹುದು. ಆದಾಗ್ಯೂ, ಇದರ ನಂತರವೂ, ಮಳೆ ಕಡಿಮೆಯಾಗುವ ಸಾಧ್ಯತೆಗಳು ತುಂಬಾ ಕಡಿಮೆ. 8 ಗಂಟೆಯ ನಂತರ ಶೇ.47ರಷ್ಟು ಮಳೆಯಾಗಲಿದ್ದು, ನಂತರ ಶೇ.35ರಷ್ಟು ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
T20 World Cup: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಆಯ್ಕೆ ಪ್ರಕ್ರಿಯೆ ಯಾವಾಗ? ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ
Image
IND vs SA 5th T20 Match Preview: ಬೆಂಗಳೂರಿನಲ್ಲಿ ಸರಣಿ ನಿರ್ಧಾರ; ಭಾರತಕ್ಕೆ ಇತಿಹಾಸ ಸೃಷ್ಟಿಸುವ ಅವಕಾಶ

ಇದನ್ನೂ ಓದಿ:Dinesh Karthik: 16 ವರ್ಷ, 36 ಪಂದ್ಯ.. 3ನೇ ಬಾರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ; ಇದು ದಿನೇಶ್ ಕಾರ್ತಿಕ್ ಟಿ20 ಕರಿಯರ್

ಹೆಚ್ಚಿನ ಪಂದ್ಯಗಳನ್ನು ಚೇಸಿಂಗ್ ಮಾಡಿ ಗೆದ್ದಿದೆ

ಬೆಂಗಳೂರಿನ ಈ ಮೈದಾನದ ದಾಖಲೆ ಕುರಿತು ಮಾತನಾಡಿದರೇ, ಇಲ್ಲಿ 8 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಈ ಪೈಕಿ 5 ಬಾರಿ ಗುರಿ ಬೆನ್ನತ್ತಿದ ತಂಡ ಗೆಲುವು ಸಾಧಿಸಿತು. 3 ಬಾರಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಈ ಪಿಚ್‌ನಲ್ಲಿ ಸರಾಸರಿ ಸ್ಕೋರ್ 153. ರಾಜ್‌ಕೋಟ್‌ನಲ್ಲಿ ನಡೆದ ಕೊನೆಯ ಪಂದ್ಯದ ಬಗ್ಗೆ ಮಾತನಾಡುವುದಾದರೆ, ದಿನೇಶ್ ಕಾರ್ತಿಕ್ ಮತ್ತು ಅವೇಶ್ ಖಾನ್ ಅದ್ಭುತ ಪ್ರದರ್ಶನ ನೀಡಿದರು. ಕಾರ್ತಿಕ್ 55 ರನ್ ಗಳಿಸಿದರೆ, ಅವೇಶ್ 4 ವಿಕೆಟ್ ಪಡೆದರು. ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 82 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ದಕ್ಷಿಣ ಆಫ್ರಿಕಾ ವಿರುದ್ಧ ಟಿ20ಯಲ್ಲಿ ಭಾರತಕ್ಕೆ ಅತಿ ದೊಡ್ಡ ಗೆಲುವು. 16 ವರ್ಷಗಳಲ್ಲಿ 36ನೇ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ ಆಡಿದ ಕಾರ್ತಿಕ್ ಮೊದಲ ಅರ್ಧಶತಕ ದಾಖಲಿಸಿದರು. ಅದೇ ಸಮಯದಲ್ಲಿ ಹಾರ್ದಿಕ್ ಪಾಂಡ್ಯ ಕೂಡ 46 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಮುಗಿದ ಬಳಿಕ ಭಾರತ ತಂಡ ಇಂಗ್ಲೆಂಡ್ ಸವಾಲನ್ನು ಎದುರಿಸಲು ಸಿದ್ಧತೆ ಆರಂಭಿಸಲಿದೆ.

Published On - 2:18 pm, Sun, 19 June 22

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್