IND vs SA WC T20 Final 2024 Highlights: ರಣರೋಚಕ ಪಂದ್ಯದಲ್ಲಿ ಗೆದ್ದು ವಿಶ್ವಕಪ್ ಎತ್ತಿ ಹಿಡಿದ ಭಾರತ
India vs South Africa, ICC T20 world cup 2024 Final Highlights: ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.
ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.
LIVE NEWS & UPDATES
-
IND vs SA, LIVE Updates: ಭಾರತಕ್ಕೆ 7 ರನ್ ಜಯ
ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಏಳು ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.
-
IND vs SA, LIVE Updates: ಕ್ಲಾಸೆನ್ 52 ರನ್‌ಗಳಿಗೆ ಔಟ್
ಭಾರತವು ದೊಡ್ಡ ಯಶಸ್ಸನ್ನು ಸಾಧಿಸಿದೆ. 16ನೇ ಓವರ್‌ನ ಮೊದಲ ಎಸೆತದಲ್ಲಿ ಹೆನ್ರಿಕ್ ಕ್ಲಾಸೆನ್ ಔಟಾದರು. ಹಾರ್ದಿಕ್ ಪಾಂಡ್ಯ ಕ್ಲಾಸೆನ್ ವಿಕೆಟ್ ಪಡೆದರು. 16ನೇ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಸ್ಕೋರ್ 152/5
-
IND vs SA, LIVE Updates: ಡಿ ಕಾಕ್ ಔಟ್
ದಕ್ಷಿಣ ಆಫ್ರಿಕಾ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. ಅರ್ಷದೀಪ್ ಸಿಂಗ್ ಅವರು ಕ್ವಿಂಟನ್ ಡಿ ಕಾಕ್ ಅವರನ್ನು ಔಟ್ ಮಾಡಿದ್ದಾರೆ. ಡಿ ಕಾಕ್ 31 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 39 ರನ್ ಗಳಿಸಿ ಔಟಾದರು. ಸದ್ಯ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಕ್ರೀಸ್‌ನಲ್ಲಿದ್ದಾರೆ. 13 ಓವರ್‌ಗಳ ನಂತರ ದಕ್ಷಿಣ ಆಫ್ರಿಕಾದ ಸ್ಕೋರ್ ನಾಲ್ಕು ವಿಕೆಟ್‌ಗೆ 109 ರನ್ ಆಗಿದೆ. ಅವರಿಗೆ 42 ಎಸೆತಗಳಲ್ಲಿ 68 ರನ್‌ಗಳ ಅಗತ್ಯವಿದೆ.
IND vs SA, LIVE Updates: ಗೆಲುವಿಗೆ 84 ರನ್ ಬೇಕು
ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 177 ರನ್‌ಗಳ ಗುರಿಯನ್ನು ನೀಡಿದೆ. 11 ಓವರ್‌ಗಳ ನಂತರ ದಕ್ಷಿಣ ಆಫ್ರಿಕಾ ಸ್ಕೋರ್ 93/3. ಗೆಲುವಿಗೆ ಇನ್ನೂ 84 ರನ್‌ಗಳ ಅಗತ್ಯವಿದೆ.
IND vs SA, LIVE Updates: 3ನೇ ವಿಕೆಟ್
ಆಫ್ರಿಕಾ ಮೂರನೇ ವಿಕೆಟ್ ಪತನ. ಒಂಬತ್ತನೇ ಓವರ್‌ನಲ್ಲಿ ಅಕ್ಷರ್ ಪಟೇಲ್ ಟ್ರಿಸ್ಟಾನ್ ಸ್ಟಬ್ಸ್ ಅವರನ್ನು ಬೌಲ್ಡ್ ಮಾಡಿದರು. 21 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಮೂರನೇ ವಿಕೆಟ್‌ಗೆ ಡಿ ಕಾಕ್ ಜೊತೆ ಸ್ಟಬ್ಸ್ 58 ರನ್‌ಗಳ ಜೊತೆಯಾಟ ನಡೆಸಿದರು. ಹೆನ್ರಿಕ್ ಕ್ಲಾಸೆನ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಅವರಿಗೆ ಬೆಂಬಲ ನೀಡಲು ಡಿ ಕಾಕ್ ಕ್ರೀಸ್‌ನಲ್ಲಿದ್ದಾರೆ.
IND vs SA, LIVE Updates: ಎಂಟು ಓವರ್ ಪೂರ್ಣ
ಕ್ವಿಂಟನ್ ಡಿ ಕಾಕ್ (28) ಮತ್ತು ಟ್ರಿಸ್ಟಾನ್ ಸ್ಟಬ್ಸ್ (30) ಬಲಿಷ್ಠ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಎಂಟು ಓವರ್‌ಗಳ ನಂತರ ತಂಡದ ಸ್ಕೋರ್ 68/2.
IND vs SA, LIVE Updates: 5 ಓವರ್‌ಗಳಲ್ಲಿ 32 ರನ್
ಎರಡನೇ ಇನಿಂಗ್ಸ್‌ನ 5 ಓವರ್‌ಗಳು ಪೂರ್ಣಗೊಂಡಿವೆ. ದಕ್ಷಿಣ ಆಫ್ರಿಕಾ 2 ವಿಕೆಟ್ ನಷ್ಟಕ್ಕೆ 32 ರನ್ ಗಳಿಸಿದೆ. ಕ್ವಿಂಟನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಕ್ರೀಸ್‌ನಲ್ಲಿದ್ದಾರೆ.
IND vs SA, LIVE Updates: ಮಾರ್ಕ್‌ರಾಮ್ ಔಟ್
ಮೂರನೇ ಓವರ್‌ನ ಮೂರನೇ ಎಸೆತದಲ್ಲಿ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ನಾಯಕ ಏಡೆನ್ ಮಾರ್ಕ್‌ರಾಮ್ ಅವರನ್ನು ಔಟ್ ಮಾಡಿದರು. ಟ್ರಿಸ್ಟಾನ್ ಸ್ಟಬ್ಸ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
IND vs SA, LIVE Updates: ಬುಮ್ರಾಗೆ ಮೊದಲ ವಿಕೆಟ್
ಬುಮ್ರಾ ತಮ್ಮ ಮೊದಲ ಓವರ್ನಲ್ಲೇ ಆಫ್ರಿಕಾಕ್ಕೆ ಮೊದಲ ಹೊಡೆತ ನೀಡಿದ್ದಾರೆ. ಅವರು ಇನ್ನಿಂಗ್ಸ್‌ನ ಎರಡನೇ ಓವರ್‌ನಲ್ಲಿ ರೀಜಾ ಹೆಂಡ್ರಿಕ್ಸ್ ಅವರನ್ನು ಬೌಲ್ಡ್ ಮಾಡಿದರು. ನಾಯಕ ಏಡನ್ ಮಾರ್ಕ್ರಾಮ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
ಎರಡು ಓವರ್‌ಗಳ ನಂತರ ತಂಡದ ಸ್ಕೋರ್ 11/1.
IND vs SA, LIVE Updates: ಆಫ್ರಿಕಾದ ಇನ್ನಿಂಗ್ಸ್ ಆರಂಭ
ಆಫ್ರಿಕಾದ ಇನ್ನಿಂಗ್ಸ್ ಆರಂಭವಾಗಿದೆ. ಆರಂಭಿಕರಾಗಿ ರೀಜಾ ಹೆಂಡ್ರಿಕ್ಸ್ ಮತ್ತು ಕ್ವಿಂಟನ್ ಡಿ ಕಾಕ್ ಕ್ರೀಸ್‌ಗೆ ಬಂದಿದ್ದಾರೆ. ಇನಿಂಗ್ಸ್‌ನ ಮೊದಲ ಓವರ್ ಅನ್ನು ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡುತ್ತಿದ್ದಾರೆ.
IND vs SA, LIVE Updates: 177 ರನ್ ಟಾರ್ಗೆಟ್ ನೀಡಿದ ಭಾರತ
ವಿರಾಟ್ ಕೊಹ್ಲಿ ಅವರ 76 ರನ್ ಮತ್ತು ಅಕ್ಷರ್ ಪಟೇಲ್ ಅವರ 47 ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್‌ನಿಂದ ಭಾರತ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 176 ರನ್ ಗಳಿಸಿದೆ. ಈಗ ಜವಾಬ್ದಾರಿ ಬೌಲರ್‌ಗಳ ಮೇಲಿದೆ.
IND vs SA, LIVE Updates: ಕೊಹ್ಲಿ ಔಟ್
ವಿರಾಟ್ ಕೊಹ್ಲಿ ರೂಪದಲ್ಲಿ ಭಾರತಕ್ಕೆ ಐದನೇ ಹೊಡೆತ ಬಿದ್ದಿದೆ. ಕೊಹ್ಲಿ 76 ರನ್ ಗಳಿಸಿ ಔಟಾದರು. ಕೊಹ್ಲಿ ಮತ್ತು ದುಬೆ ನಡುವೆ ಐದನೇ ವಿಕೆಟ್‌ಗೆ 50ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವಿತ್ತು.
IND vs SA, LIVE Updates: ಭಾರತದ 150 ರನ್ ಪೂರ್ಣ
ಭಾರತ 18 ಓವರ್‌ಗಳಲ್ಲಿ 150 ರನ್ ಪೂರೈಸಿತು. ಕೊಹ್ಲಿ ಅರ್ಧಶತಕ ಪೂರೈಸಿದ್ದು, ಶಿವಂ ದುಬೆ 22 ರನ್ ಗಳಿಸಿ ಆಡುತ್ತಿದ್ದಾರೆ. ಇಲ್ಲಿಯವರೆಗೆ ಭಾರತ 4 ವಿಕೆಟ್ ಕಳೆದುಕೊಂಡಿದೆ.
IND vs SA, LIVE Updates: ಕೊಹ್ಲಿ ಅರ್ಧಶತಕ
ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 50 ರನ್ ಪೂರೈಸಿದ್ದಾರೆ. ಕೊಹ್ಲಿ ಮತ್ತು ಶಿವಂ ದುಬೆ ಇನ್ನೂ ಕ್ರೀಸ್‌ನಲ್ಲಿದ್ದಾರೆ. 16 ಓವರ್‌ಗಳಲ್ಲಿ ಭಾರತದ ಸ್ಕೋರ್ 130/3.
IND vs SA, LIVE Updates: ಅಕ್ಷರ್ ರನೌಟ್
ಭಾರತಕ್ಕೆ ಅಕ್ಷರ್ ಪಟೇಲ್ ರೂಪದಲ್ಲಿ ನಾಲ್ಕನೇ ವಿಕೆಟ್ ಕಳೆದುಕೊಂಡಿದೆ. 14ನೇ ಓವರ್‌ನ ಮೂರನೇ ಎಸೆತದಲ್ಲಿ ಕ್ವಿಂಟನ್ ಡಿ ಕಾಕ್ ಅವರಿಂದ ರನೌಟ್ ಆದರು. ಅವರು 31 ಎಸೆತಗಳಲ್ಲಿ 47 ರನ್ ಗಳಿಸುವಲ್ಲಿ ಯಶಸ್ವಿಯಾದರು. ಶಿವಂ ದುಬೆ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಅವರಿಗೆ ಬೆಂಬಲವಾಗಿ ವಿರಾಟ್ ಕೊಹ್ಲಿ (44) ಕ್ರೀಸ್‌ನಲ್ಲಿದ್ದಾರೆ.
14 ಓವರ್‌ಗಳ ನಂತರ ಸ್ಕೋರ್ 108/4.
IND vs SA, LIVE Updates: ಶತಕ ಪೂರ್ಣ
ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಕ್ರೀಸ್‌ನಲ್ಲಿ ನಿಂತಿದ್ದಾರೆ. ಇದರೊಂದಿಗೆ ಭಾರತ 100 ರನ್ ಪೂರೈಸಿದೆ. ವಿರಾಟ್ ಕೊಹ್ಲಿ ಸುರಕ್ಷಿತವಾಗಿ ಆಡುತ್ತಿರುವುದು ಕಂಡುಬಂದರೂ ಅಕ್ಷರ್ ಪಟೇಲ್ ಸಿಕ್ಸರ್ ಬಾರಿಸುತ್ತಿದ್ದಾರೆ.
13.1 ಓವರ್‌ಗಳಲ್ಲಿ ಭಾರತದ ಸ್ಕೋರ್ 104-3.
IND vs SA, LIVE Updates: ಅರ್ಧಶತಕದ ಜೊತೆಯಾಟ
ರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ನಡುವೆ 50ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನಡೆದಿದೆ. ಇಬ್ಬರೂ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುವುದನ್ನು ಕಾಣಬಹುದು.
12 ಓವರ್‌ಗಳಲ್ಲಿ ಭಾರತದ ಸ್ಕೋರ್ 93/3.
IND vs SA, LIVE Updates: ಕೊಹ್ಲಿ-ಅಕ್ಸರ್ ಜೊತೆಯಾಟ
ಪವರ್ ಪ್ಲೇನಲ್ಲಿ ಮೂರು ವಿಕೆಟ್ ಕಳೆದುಕೊಂಡ ಭಾರತ ತಂಡಕ್ಕೆ ಇದೀಗ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಬೆಂಬಲ ಸಿಕ್ಕಿದೆ. ಇಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಒಂಬತ್ತು ಓವರ್‌ಗಳ ನಂತರ ತಂಡದ ಸ್ಕೋರ್ 68/3.
IND vs SA, LIVE Updates: ಪವರ್‌ಪ್ಲೇ ಅಂತ್ಯ
ಮೊದಲ ಆರು ಓವರ್‌ಗಳಲ್ಲಿ ಭಾರತ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಕೇವಲ ಒಂಬತ್ತು ರನ್ ಗಳಿಸಿದ್ದ ರೋಹಿತ್ ಶರ್ಮಾ (9) ರೂಪದಲ್ಲಿ ಕೇಶವ್ ಮಹಾರಾಜ್ ಮೊದಲ ವಿಕೆಟ್ ಪಡೆದರು. ಎರಡನೇ ಓವರ್‌ನ ಕೊನೆಯ ಎಸೆತದಲ್ಲಿ ರಿಷಬ್ ಪಂತ್ (0) ಔಟಾದರು. ಅದೇ ಸಮಯದಲ್ಲಿ ಸೂರ್ಯಕುಮಾರ್ ಯಾದವ್ (3) ಅವರನ್ನು ರಬಾಡ ಔಟ್ ಮಾಡಿದರು. ಸದ್ಯ ವಿರಾಟ್ ಕೊಹ್ಲಿ (25) ಮತ್ತು ಅಕ್ಷರ್ ಪಟೇಲ್ (8) ಕ್ರೀಸ್‌ನಲ್ಲಿದ್ದಾರೆ.
ಪವರ್‌ಪ್ಲೇ ನಂತರ ಭಾರತದ ಸ್ಕೋರ್ 45/3.
IND vs SA, LIVE Updates: ಸೂರ್ಯ ಔಟ್
ಭಾರತ ಮೂರನೇ ವಿಕೆಟ್ ಕಳೆದುಕೊಂಡಿದೆ. ಐದನೇ ಓವರ್‌ನ ಮೂರನೇ ಎಸೆತದಲ್ಲಿ ಕಗಿಸೊ ರಬಾಡ ಸೂರ್ಯ ಅವರ ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
ಐದು ಓವರ್‌ಗಳ ನಂತರ ತಂಡದ ಸ್ಕೋರ್ 40/3.
IND vs SA, LIVE Updates: ಶೂನ್ಯಕ್ಕೆ ಪಂತ್ ಔಟ್
2ನೇ ಓವರ್‌ನಲ್ಲಿ ಭಾರತ 2ನೇ ವಿಕೆಟ್ ಕಳೆದುಕೊಂಡಿದೆ. ರಿಷಭ್ ಪಂತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಭಾರತ 23/2
IND vs SA, LIVE Updates: ರೋಹಿತ್ ಔಟ್
23 ರನ್‌ಗಳಾಗುವಷ್ಟರಲ್ಲಿ ಭಾರತಕ್ಕೆ ಮೊದಲ ಪೆಟ್ಟು ಬಿದ್ದಿತು. ಎರಡನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಕೇಶವ್ ಮಹಾರಾಜ್ ಎಸೆತದಲ್ಲಿ ರೋಹಿತ್ ಶರ್ಮಾ ಕ್ಯಾಚ್ ನೀಡಿ ಔಟಾದರು.
IND vs SA, LIVE Updates: ಕೊಹ್ಲಿ ಉತ್ತಮ ಆರಂಭ
ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಲಿಷ್ಠ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮಾರ್ಕೊ ಯಾನ್ಸೆನ್ ವಿರುದ್ಧ ಮೂರು ಬೌಂಡರಿಗಳನ್ನು ಹೊಡೆದರು. ಒಂದು ಓವರ್ ನಂತರ ಭಾರತದ ಸ್ಕೋರ್ 15/0.
IND vs SA, LIVE Updates: ದಕ್ಷಿಣ ಆಫ್ರಿಕಾ ತಂಡ
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನೋಕಿಯಾ, ತಬ್ರೈಜ್ ಶಮ್ಸಿ.
IND vs SA, LIVE Updates: ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
IND vs SA, LIVE Updates: ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
IND vs SA, LIVE Updates: ಲಘು ಮಳೆ ಪ್ರಾರಂಭ
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯಕ್ಕೂ ಮುನ್ನ ಮಳೆ ನಿಂತಿದ್ದು, ಬೆಳಗ್ಗಿನಿಂದಲೇ ಶುಭ್ರವಾದ ವಾತಾವರಣವಿದ್ದರೂ ಮತ್ತೊಮ್ಮೆ ತುಂತುರು ಮಳೆ ಆರಂಭವಾಗಿದೆ.
IND vs SA, LIVE Updates: ಬಾರ್ಬಡೋಸ್‌ನಲ್ಲಿ ಟೀಂ ಇಂಡಿಯಾ ದಾಖಲೆ
ಇದು ಬಾರ್ಬಡೋಸ್‌ನಲ್ಲಿ ಟೀಮ್ ಇಂಡಿಯಾದ ನಾಲ್ಕನೇ ಟಿ20 ಪಂದ್ಯವಾಗಿದೆ. ಇದಕ್ಕೂ ಮುನ್ನ ಇಲ್ಲಿ 3 ಪಂದ್ಯಗಳನ್ನು ಆಡಿದ್ದು, 1ರಲ್ಲಿ ಮಾತ್ರ ಗೆದ್ದಿದೆ. ಜೊತೆಗೆ ಬಾರ್ಬಡೋಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾದ ಮೊದಲ ಹಣಾಹಣಿಯಾಗಿದೆ.
IND vs SA, LIVE Updates: ಭಾರತ-ದಕ್ಷಿಣ ಆಫ್ರಿಕಾ ಫೈನಲ್
ಬಾರ್ಬಡೋಸ್‌ನಲ್ಲಿ 2024 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಆಡಲಿದೆ. ಬಾರ್ಬಡೋಸ್‌ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಇದು ಎರಡನೇ ಪಂದ್ಯವಾಗಿದೆ. ಇದಕ್ಕೂ ಮುನ್ನ ಬಾರ್ಬಡೋಸ್‌ನಲ್ಲಿಯೇ ಸೂಪರ್-8ರಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸಿತ್ತು.
Published On - Jun 29,2024 5:46 PM