Gautam Gambhir: ನಾನಾಗಿದ್ರೆ ಅಜಿಂಕ್ಯ ರಹಾನೆಯನ್ನು ಕೈಬಿಟ್ಟು, ಆತನನ್ನು ತಂಡದಲ್ಲಿ ಉಳಿಸಿಕೊಳ್ಳುತ್ತಿದ್ದೆ..!

India vs South Africa 3rd Test: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್.

Gautam Gambhir: ನಾನಾಗಿದ್ರೆ ಅಜಿಂಕ್ಯ ರಹಾನೆಯನ್ನು ಕೈಬಿಟ್ಟು, ಆತನನ್ನು ತಂಡದಲ್ಲಿ ಉಳಿಸಿಕೊಳ್ಳುತ್ತಿದ್ದೆ..!
Gautam Gambhir
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 11, 2022 | 2:40 PM

ಭಾರತ-ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟೆಸ್ಟ್ ಪಂದ್ಯ ಕೇಪ್​ ಟೌನ್​ನಲ್ಲಿ ಶುರುವಾಗಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮರಳಿದ್ದಾರೆ. 2ನೇ ಟೆಸ್ಟ್ ಪಂದ್ಯಕ್ಕೂ ಬೆನ್ನು ನೋವಿನ ಕಾರಣ ಕೊಹ್ಲಿ ತಂಡದಿಂದ ಹೊರಗುಳಿದಿದ್ದರು. ಇದೀಗ ಕೊಹ್ಲಿ ವಾಪಾಸಾತಿ ಮಾಡಿದ್ದು, ಹೀಗಾಗಿ ಹನುಮ ವಿಹಾರಿ ತಂಡದಿಂದ ಹೊರಗುಳಿಯಬೇಕಾಗಿ ಬಂದಿದೆ. ಆದರೆ ನಾನು ನಾಯಕನಾಗಿದಿದ್ರೆ ಹನುಮ ವಿಹಾರಿಯನ್ನು ಪ್ಲೇಯಿಂಗ್​ ಇಲೆವೆನ್​ನಲ್ಲೇ ಉಳಿಸಿಕೊಳ್ಳುತ್ತಿದ್ದೆ. ಬದಲಾಗಿ ಅಜಿಂಕ್ಯ ರಹಾನೆಯನ್ನು ತಂಡದಿಂದ ಕೈ ಬಿಡುತಿದ್ದೆ ಎಂದು ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ತಿಳಿಸಿದ್ದಾರೆ.

ಮೂರನೇ ಮತ್ತು ಅಂತಿಮ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿಗಾಗಿ ಹನುಮ ವಿಹಾರಿಯನ್ನು (Hanuma Vihari) ಹೊರಗಿಡಲಾಗಿದೆ. ಆದರೆ ನನ್ನ ಪ್ರಕಾರ ರಹಾನೆಯನ್ನು ಕೈ ಬಿಡಬೇಕಿತ್ತು. ನಾನು ನಾಯಕ ಆಗಿದಿದ್ರೆ ಖಂಡಿತವಾಗಿಯೂ ಹನುಮ ವಿಹಾರಿಯನ್ನು ತಂಡದಲ್ಲಿರಿಸಿ, ಅಜಿಂಕ್ಯ ರಹಾನೆಯನ್ನು ತಂಡದಿಂದ ಹೊರಗಿಡುತ್ತಿದ್ದೆ ಎಂದು ಗಂಭೀರ್ ತಿಳಿಸಿದ್ದಾರೆ.

‘ಕೊನೆಯ ಟೆಸ್ಟ್‌ನಲ್ಲಿ ಭಾರತ ಎಲ್ಲವನ್ನೂ ಸರಿಯಾಗಿ ಮಾಡಬೇಕಾಗಿದೆ. ದಕ್ಷಿಣ ಆಫ್ರಿಕಾ ಸರಣಿಯಲ್ಲಿ 1-1 ಸಮಬಲ ಹೊಂದಿರುವ ಖುಷಿಯಲ್ಲಿದೆ. 3ನೇ ಪಂದ್ಯದಲ್ಲಿ ಭಾರತವನ್ನು ಸೋಲಿಸಿದರೆ ಅವರಿಗೆ ಲಾಟರಿ ಹೊಡೆದಂತೆ. ಇದೀಗ ವಿರಾಟ್ ಕೊಹ್ಲಿ ತಂಡಕ್ಕೆ ಮರಳಲಿದ್ದಾರೆ. ಹೀಗಾಗಿ ಪ್ರತಿಯೊಂದು ಹಂತದಲ್ಲೂ ಟೀಮ್ ಇಂಡಿಯಾ ಉತ್ತಮವಾಗಿ ಆಡಬೇಕಿದೆ. ಅಂದರೆ ಮಾತ್ರ ಪಂದ್ಯವನ್ನು ಗೆಲ್ಲಬಹುದು ಎಂದು ರಹಾನೆ ಅಭಿಪ್ರಾಯಪಟ್ಟರು.

ಇನ್ನು ಅಜಿಂಕ್ಯ ರಹಾನೆಯನ್ನು ತಂಡದಲ್ಲೇ ಉಳಿಸಿಕೊಂಡಿರುವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಗಂಭೀರ್, ಇದು ಯುವ ಆಟಗಾರರಿಗೆ ಆಗುವ ಅನ್ಯಾಯ ಎಂದು ನಾನು ಭಾವಿಸುತ್ತೇನೆ. ನಾನು ರಹಾನೆ ವಿರುದ್ಧ ಅಲ್ಲ. ಅವರು ಉತ್ತಮ ವ್ಯಕ್ತಿ ಮತ್ತು ಅವರು ಕಳೆದ ಪಂದ್ಯದಲ್ಲಿ ಫಾರ್ಮ್ ತೋರಿಸಿದ್ದಾರೆ. ಆದರೆ ನಾನು ವಿಹಾರಿಗಾಗಿ ಚಿಂತಿಸುತ್ತಿದ್ದೆ. ಹೀಗಾಗಿ ಅವರನ್ನೇ ಪ್ಲೇಯಿಂಗ್​ 11 ನಲ್ಲಿ ಇರಿಸಿಕೊಳ್ಳುತ್ತಿದ್ದೆ ಎಂದು ತಿಳಿಸಿದರು.

ಮೂರನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಕಂಡು ಬಂದಿದೆ. ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅವರ ಸ್ಥಾನದಲ್ಲಿ ಉಮೇಶ್ ಯಾದವ್ ಕಣಕ್ಕಿಳಿಯಲಿದ್ದಾರೆ. ಒಟ್ಟಿನಲ್ಲಿ 2 ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಅಂತಿಮ ಟೆಸ್ಟ್ ಪಂದ್ಯವಾಡುತ್ತಿದ್ದು, ಈ ಪಂದ್ಯದಲ್ಲಿ ಭಾರತ ಗೆದ್ದರೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದ ಇತಿಹಾಸ ನಿರ್ಮಾಣವಾಗಲಿದೆ.

ಭಾರತದ ಆಡುವ XI: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Gautam Gambhir supports Hanuma Vihrari)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ