India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ: ಆಯ್ಕೆಯಾಗಲಿರುವ 15 ಆಟಗಾರರು ಯಾರೆಲ್ಲ ಗೊತ್ತೇ?

India cricket team squad for South Africa tour: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿ ಭಾರತ ತಂಡವನ್ನು ಬಿಸಿಸಿಐ ಈ ವಾರದಲ್ಲಿ ಪ್ರಕಟ ಮಾಡಲಿದೆ. ಆದರೆ, ಟೀಮ್ ಇಂಡಿಯಾದಲ್ಲಿರುವ ಎಲ್ಲ ಆಟಗಾರರು ಭರ್ಜರಿ ಫಾರ್ಮ್​ನಲ್ಲಿರುವ ಕಾರಣ ಯಾರಿಗೆ ಅವಕಾಶ ನೀಡಬೇಕು ಎಂಬುದು ಆಯ್ಕೆ ಸಮಿತಿಗೆ ದೊಡ್ಡ ತಲೆನೋವಾಗಿದೆ. ಹಾಗಾದ್ರೆ ಆಫ್ರಿಕಾ ವಿರುದ್ಧದ ಸರಣಿಗೆ ಭಾರತದ ಸಂಭಾವ್ಯ ತಂಡ ಹೇಗಿರಲಿದೆ.?

India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ: ಆಯ್ಕೆಯಾಗಲಿರುವ 15 ಆಟಗಾರರು ಯಾರೆಲ್ಲ ಗೊತ್ತೇ?
India vs South Africa
Follow us
TV9 Web
| Updated By: Vinay Bhat

Updated on: Dec 07, 2021 | 10:04 AM

ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಸರಣಿ ಸೋಮವಾರಕ್ಕೆ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ತನ್ನ ಮುಂದಿನ ಪ್ರವಾಸಕ್ಕೆ ಸಜ್ಜಾಗುತ್ತಿದೆ. ಸದ್ಯದಲ್ಲೇ ದಕ್ಷಿಣ ಆಫ್ರಿಕಾ (India vs South Africa) ಪ್ರವಾಸ ಬೆಳೆಸಲಿರುವ ವಿರಾಟ್ ಕೊಹ್ಲಿ (Virat Kohli) ಪಡೆ ಅಲ್ಲಿ ಮೂರು ಪಂದ್ಯಗಳ ಟೆಸ್ಟ್​ ಮತ್ತು ಏಕದಿನ ಸರಣಿ ಆಡಲಿದೆ. ಈಗಾಗಲೇ ಕ್ರಿಕೆಟ್ ಸೌತ್ ಆಫ್ರಿಕಾ (Cricket South Africa) ಸಂಸ್ಥೆ ಹೊಸ ವೇಳಾಪಟ್ಟಿ ಪ್ರಕಟಿಸಿದೆ. ಇದರ ಪ್ರಕಾರ ಡಿ. 17ರಂದು ಆರಂಭವಾಗಬೇಕಿದ್ದ ಕ್ರಿಕೆಟ್ ಸರಣಿಯನ್ನ ಓಮಿಕ್ರೋನ್ ವೈರಸ್ (Omicron) ಕಾರಣಕ್ಕೆ 9 ದಿನ ಮುಂದೂಡಲಾಗಿದೆ. ಹೀಗಾಗಿ ಇಂಡೋ-ಆಫ್ರಿಕಾ ನಡುವೆ ಮೊದಲ ಟೆಸ್ಟ್ ಡಿಸೆಂಬರ್ 26 ರಂದು ಪ್ರಾರಂಭವಾಗುತ್ತದೆ. ಆದರೆ, ಈ ಪ್ರವಾಸಕ್ಕೆ ಭಾರತ ತಂಡ (India Squad) ಇನ್ನೂ ಪ್ರಕಟ ಆಗಿಲ್ಲ. ಈ ವಾರ ಪ್ರಕಟವಾಗುವ ನಿರೀಕ್ಷೆ ಇದೆ. ಬಹಳಷ್ಟು ಪ್ರತಿಭಾನ್ವಿತ ಆಟಗಾರರು ತಂಡದ ಬಾಗಿಲು ಬಡಿಯುತ್ತಿರುವುದು ಆಯ್ಕೆಗಾರರಿಗೆ ತಲೆಬಿಸಿ ತಂದಿದೆ. ಅಲ್ಲದೆ ಏಕದಿನ ಸರಣಿಯ ನಾಯಕತ್ವ ಮತ್ತು ಟೆಸ್ಟ್ ಸರಣಿಯ ಉಪ ನಾಯಕತ್ವಕ್ಕೆ ರೋಹಿತ್ ಶರ್ಮಾ (Rohit Sharma) ಆಯ್ಕೆಯಾಗುವ ಸಾಧ್ಯತೆ ಕೂಡ ಇದೆ.

ಈಗಾಗಲೇ ಹೇಳಿರುವಂತೆ ನ್ಯೂಜಿಲೆಂಡ್ ವಿರುದ್ಧ ಮಯಂಕ್ ಅಗರ್ವಾಲ್, ಶುಭ್ಮನ್ ಗಿಲ್, ಅಕ್ಷರ್ ಪಟೇಲ್, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್ ಭರ್ಜರಿ ಪ್ರದರ್ಶನ ತೋರಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್ ಅನುಪಸ್ಥಿತಿ ಗಿಲ್ – ಮಯಂಕ್ ಜೋಡಿ ಮೋಡಿ ಮಾಡಿದ್ದಾರೆ. ಹೀಗಾಗಿ ಯಾರನ್ನ ಕೈಬಿಡಬೇಕು, ಯಾರನ್ನ ಆಯ್ಕೆ ಮಾಡಬೇಕು ಎಂಬುದು ಬಿಸಿಸಿಐಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ಭಾರತ ಎ ತಂಡ ಈಗಾಗಲೇ ಆಫ್ರಿಕಾದಲ್ಲಿ ಅನಧಿಕೃ ಟೆಸ್ಟ್ ಪಂದ್ಯ ಆಡುತ್ತಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರರಿಗೂ ಅವಕಾಶ ನೀಡಬೇಕಾದ ಒತ್ತಡದಲ್ಲಿದೆ ಬಿಸಿಸಿಐ.

ಇತ್ತ ಏಕದಿನ ಸರಣಿಯ ಆಯ್ಕೆಯೂ ಬಿಸಿಸಿಐಗೆ ಕಬ್ಬಿಣದ ಕಡಲೆಯಂತಾಗಿದೆ. ರುತುರಾಜ್ ಗಾಯಕ್ವಾಡ್, ಹರ್ಷಲ್ ಪಟೇಲ್ ಸೇರಿದಂತೆ ಅನೇಕ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ಕಾದುಕುಳಿತಿದ್ದಾರೆ. ಹಾಗಾದ್ರೆ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ಪಟ್ಟಿ ನೋಡುವುದಾದರೆ…

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ವೃದ್ದಿಮಾನ್ ಸಾಹ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಆಯೋಜನೆಯಾಗಿದ್ದ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಕೋವಿಡ್ ಕಾರಣದಿಂದ ಕೈಬಿಡಲಾಗಿದೆ. ಆದರೆ, ರದ್ದಾಗಿಲ್ಲ, ಬದಲಾಗಿ ಮುಂದೂಡಿಕೆ ಆಗಿದೆ. ಮುಂದಿನ ವರ್ಷ ಸೂಕ್ತ ಸಮಯ ನೋಡಿ ಟಿ20 ಸರಣಿಯನ್ನ ಆಡಿಸಲಾಗುವುದು ಎಂದು ಕ್ರಿಕೆಟ್ ಸೌತ್ ಆಫ್ರಿಕಾ ಹೇಳಿದೆ. ಸೆಂಚೂರಿಯನ್, ಜೋಹಾನ್ಸ್​ಬರ್ಗ್, ಕೇಪ್​ಟೌನ್ ಮತ್ತು ಪಾರ್ಲ್ ನಗರಗಳಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳ ಪಂದ್ಯಗಳು ನಡೆಯಲಿವೆ.

ದಕ್ಷಿಣ ಆಫ್ರಿಕಾ ಮತ್ತು ಭಾರತ ಕ್ರಿಕೆಟ್ ಸರಣಿ ವೇಳಾಪಟ್ಟಿ:

ಟೆಸ್ಟ್ ಸರಣಿ:

1) ಡಿ. 26-30: ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್

2) ಜ. 3-7: ವಾಂಡರರ್ಸ್, ಜೋಹಾನ್ಸ್​ಬರ್ಗ್

3) ಜ. 11-15: ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ:

1) ಜ. 19: ಬೋಲ್ಯಾಂಡ್ ಪಾರ್ಕ್, ಪಾರ್ಲ್

2) ಜ. 21: ಬೋಲ್ಯಾಂಡ್ ಪಾರ್ಕ್, ಪಾರ್ಲ್

3) ಜ. 23: ನ್ಯೂಲೆಂಡ್ಸ್, ಕೇಪ್ ಟೌನ್

Ravichandran Ashwin: ಅಶ್ವಿನ್ ಮಾಡಿದ ಒಂದು ಟ್ವೀಟ್​ಗೆ ಬ್ಲೂ ಟಿಕ್ ಆಯ್ತು ಈ ನ್ಯೂಜಿಲೆಂಡ್ ಕ್ರಿಕೆಟಿಗನ ಅಕೌಂಟ್

David Warner: ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಂದ ಡೇವಿಡ್ ವಾರ್ನರ್​ಗೆ ವಿಶೇಷ ಬೇಡಿಕೆ: ಈಡೇರಿಸ್ತಾರ ಆಸೀಸ್ ಕ್ರಿಕೆಟಿಗ?

(India vs South Africa Here is the Virat Kohli Captain Indian probable squad for the SA tour)

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ