IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ

IND vs SA, ICC World Cup 2023: ಕೋಲ್ಕತ್ತಾದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ.ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ
ಭಾರತ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on:Nov 05, 2023 | 1:59 PM

ಕೋಲ್ಕತ್ತಾದ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ (ICC World Cup 2023) ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು (India vs South Africa) ಎದುರಿಸುತ್ತಿದೆ.ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲಿದೆ. ಪ್ರಸ್ತುತ ಈ ಎರಡೂ ತಂಡಗಳು ವಿಶ್ವಕಪ್‌ನ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದು, ಪಾಯಿಂಟ್‌ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಆಕ್ರಮಿಸಿಕೊಂಡಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನ ಸಿಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಇದುವರೆಗಿನ ವಿಶ್ವಕಪ್‌ನ ಎರಡು ಯಶಸ್ವಿ ತಂಡಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ. ಭಾರತ ಇದುವರೆಗೆ ಆಡಿದ ಎಲ್ಲಾ ಏಳು ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ ಆಡಿರುವ 7 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದು 1 ರಲ್ಲಿ ಸೋತಿದೆ.

ವಿರಾಟ್ ಕೊಹ್ಲಿ ಜನ್ಮದಿನ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಇಂದಿನ ಪಂದ್ಯ ವಿರಾಟ್ ಕೊಹ್ಲಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಇಂದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ 35 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ವಾಸ್ತವವಾಗಿ ಹುಟ್ಟು ಹಬ್ಬದಂದು ವಿರಾಟ್​ಗೆ ಇದು ಮೂರನೇ ಪಂದ್ಯವಾಗಲಿದೆ. ಇದಕ್ಕೂ ಮುನ್ನ ಅವರು ಒಂದು ಟೆಸ್ಟ್ ಮತ್ತು ಒಂದು ಟಿ20 ಪಂದ್ಯವನ್ನು ತಮ್ಮ ಜನ್ಮದಿನದಂದು ಆಡಿದ್ದಾರೆ. ಅಂದರೆ, ಕೊಹ್ಲಿ ತಮ್ಮ ಜನ್ಮದಿನದಂದು ಮೊದಲ ಬಾರಿಗೆ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್​ನಿಂದ ಶತಕ ಬರುವ ನಿರೀಕ್ಷೆಯೊಂದಿಗೆ ಅಭಿಮಾನಿಗಳು ಕಾಯುತ್ತಿದ್ದಾರೆ.

IND vs SA, ICC World Cup: ವಿರಾಟ್ ಕೊಹ್ಲಿ ಹುಟ್ಟುಹಬ್ಬದ ದಿನ ಎಷ್ಟು ಪಂದ್ಯ ಆಡಿದ್ದಾರೆ?: ಗೆದ್ದಿದ್ದೆಷ್ಟು?, ಸೋತಿದ್ದೆಷ್ಟು?

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್​ಗಿಡಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Sun, 5 November 23