AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa ಟಿ20 ಸರಣಿ ಯಾವಾಗ?, ಎಷ್ಟು ಗಂಟೆಗೆ, ನೇರ ಪ್ರಸಾರ, ಟಿಕೆಟ್ ಮಾರಾಟ: ಇಲ್ಲಿದೆ ಎಲ್ಲ ಮಾಹಿತಿ

IND vs SA T20I Series: ಭಾರತ ಹಾಗೂ ದಕ್ಷಿಣ ಆಫ್ರಿಕಾ ಟಿ20 ಸರಣಿಯ ಟಿಕೆಟ್ ಬೆಲೆ ಎಷ್ಟು?, ಪಂದ್ಯ ಎಷ್ಟು ಗಂಟೆಗೆ ಆರಂಭ ಹಾಗೂ ಎಲ್ಲಿ?, ತಂಡಗಳು ಹೇಗಿದೆ?, ಇಲ್ಲಿದೆ ನೋಡಿ ಎಲ್ಲ ಮಾಹಿತಿ.

India vs South Africa ಟಿ20 ಸರಣಿ ಯಾವಾಗ?, ಎಷ್ಟು ಗಂಟೆಗೆ, ನೇರ ಪ್ರಸಾರ, ಟಿಕೆಟ್ ಮಾರಾಟ: ಇಲ್ಲಿದೆ ಎಲ್ಲ ಮಾಹಿತಿ
IND vs SA T20I Series
TV9 Web
| Edited By: |

Updated on:Jun 06, 2022 | 10:04 AM

Share

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಐದು ಪಂದ್ಯಗಳ ಟಿ20 ಸರಣಿ ಪೈಕಿ ಜೂನ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಅನುಭವಿ ಆಟಗಾರರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಅವರಿಗೆ ರೆಸ್ಟ್ ನೀಡಲಾಗಿರುವ ಕಾರಣ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಭ್ ಪಂತ್​ಗೆ ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ. ಈಗಾಗಲೇ ಉಭಯ ತಂಡಗಳು ದೆಹಲಿಗೆ ತಲುಪಿದ್ದು ಕೋವಿಡ್ ಟೆಸ್ಟ್ ನಡೆಸಲಾಗಿದೆ. ಆರ್​ಟಿಪಿಸಿಆರ್ ಟೆಸ್ಟ್​ನಲ್ಲಿ ಎಲ್ಲ ಆಟಗಾರರಿಗೆ ನೆಗೆಟಿವ್ ಬಂದಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಾಗಾದ್ರೆ ಇಂಡೋ- ಆಫ್ರಿಕಾ (IND vs SA) ಸರಣಿಯ ಟಿಕೆಟ್ ಬೆಲೆ ಎಷ್ಟು?, ಪಂದ್ಯ ಎಷ್ಟು ಗಂಟೆಗೆ ಆರಂಭ ಹಾಗೂ ಎಲ್ಲಿ?, ತಂಡಗಳು ಹೇಗಿದೆ?, ಇಲ್ಲಿದೆ ನೋಡಿ ಎಲ್ಲ ಮಾಹಿತಿ.

ಉಭಯ ತಂಡಗಳು:

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಇದನ್ನೂ ಓದಿ
Image
French Open 2022: ಫ್ರೆಂಚ್ ಓಪನ್ ಪ್ರಶಸ್ತಿಯೊಂದಿಗೆ ದಾಖಲೆಯ 22 ನೇ ಗ್ರ್ಯಾಂಡ್ ಸ್ಲಾಮ್​ ಗೆದ್ದ ರಾಫೆಲ್ ನಡಾಲ್!
Image
ಟ್ಯಾಟೂ ಪ್ರಿಯರ ಕಣ್ಣು ಕುಕ್ಕುತ್ತಿದೆ ಸೂರ್ಯಕುಮಾರ್ ಯಾದವ್ ಹೊಸ ಟ್ಯಾಟೂ; ಫೋಟೋ ನೋಡಿ
Image
French Open 2022: ಫ್ರೆಂಚ್ ಓಪನ್ ಮಹಿಳೆಯರ ಡಬಲ್ಸ್ ಪ್ರಶಸ್ತಿ ಗೆದ್ದ ಗಾರ್ಸಿಯಾ- ಮ್ಲಾಡೆನೋವಿಕ್ ಜೋಡಿ
Image
ENG vs NZ: ಶತಕ, 10000 ರನ್, ಕಿವೀಸ್ ವಿರುದ್ಧ 1000 ರನ್! ಮೊದಲ ಟೆಸ್ಟ್​ನಲ್ಲಿ ರೂಟ್ ಮಾಡಿದ ದಾಖಲೆಗಳಿವು

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಟಬ್ರೈಜ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್.

Rafael Nadal: ದಾಖಲೆಯ 14ನೇ ಬಾರಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದ ರಫೆಲ್ ನಡಾಲ್‌: ಯಾರು ಹೇಗೆ ಪ್ರತಿಕ್ರಿಯಿಸಿದರು?

ವೇಳಾಪಟ್ಟಿ:

ಜೂನ್ 9- ಮೊದಲ T20I ಪಂದ್ಯ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

ಜೂನ್ 12- ದ್ವಿತೀಯ T20I ಪಂದ್ಯ (ಬಾರಾಬತಿ ಸ್ಟೇಡಿಯಂ, ಕಟಕ್)

ಜೂನ್ 14- ಮೂರನೇ T20I ಪಂದ್ಯ (ಡಾ. ವೈಎಸ್‌ಆರ್ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ)

ಜೂನ್ 17- ನಾಲ್ಕನೇ T20I ಪಂದ್ಯ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್ಕೋಟ್)

ಜೂನ್ 19- ಐದನೇ T20I ಪಂದ್ಯ (ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

ನೇರಪ್ರಸಾರ:

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ ಮತ್ತು ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ವೀಕ್ಷಿಸಬಹುದು. ಸೌತ್ ಆಫ್ರಿಕಾದಲ್ಲಾದರೆ ಸೂಪರ್​​ಸ್ಫೋರ್ಟ್ಸ್​ ಕ್ರಿಕೆಟ್​ನಲ್ಲಿ ನೇರಪ್ರಸಾರವಾಗಲಿದೆ.

ಟಿಕೆಟ್ ಮಾರಾಟ:

ಭಾರತ ಹಾಗೂ ದಕ್ಷಿಣ ಆಫ್ರಿಕಾ ಟಿ20 ಸರಣಿಯ ಟಿಕೆಟ್​ಗಳು ಪಂದ್ಯ ನಡೆಯುವ ಸ್ಥಳೀಯ ಕ್ರಿಕೆಟ್ ಕ್ಲಬ್‌ಗಳಲ್ಲಿ ಹಂಚಲಾಗುತ್ತದೆ. ಉಳಿದ ಟಿಕೆಟ್‌ಗಳನ್ನು Paytm ಅಪ್ಲಿಕೇಶನ್ ಪ್ಲಾಟ್‌ಫಾರ್ಮ್‌ನಲ್ಲಿ ಇರಿಸಲಾಗುತ್ತದೆ. ಕನಿಷ್ಠ ಟಿಕೆಟ್ ದರ 850 ರಿಂದ 14,000 ರೂ. ಆಗಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:04 am, Mon, 6 June 22