India vs South Africa: ಸೌತ್ ಆಫ್ರಿಕಾ ನಾಯಕ ಬದಲಾವಣೆ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
India vs South Africa 3rd ODI: ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ದೆಹಲಿ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಭಾರತ – ಸೌತ್ ಆಫ್ರಿಕಾ ನಡುವಣ 2ನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಏಕೆಂದರೆ 3 ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಬಳಿಕ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಜಯದೊಂದಿಗೆ ಕಮ್ಬ್ಯಾಕ್ ಮಾಡಿತ್ತು. ಈ ಮೂಲಕ 1-1 ಅಂಕಗಳ ಸಮಬಲ ಸಾಧಿಸಿತ್ತು.
ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮತ್ತೊಂದೆಡೆ ಈ ಪಂದ್ಯದಿಂದ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ ಹಾಗೂ ಉಪನಾಯಕ ಕೇಶವ್ ಮಹರಾಜ್ ಹೊರಗುಳಿದಿದ್ದಾರೆ. ಹೀಗಾಗಿ ಹಂಗಾಮಿ ನಾಯಕನಾಗಿ ಡೇವಿಡ್ ಮಿಲ್ಲರ್ ಕಾಣಿಸಿಕೊಳ್ಳುತ್ತಿದ್ದಾರೆ.
? Toss Update ?#TeamIndia have elected to bowl against South Africa in the third & final #INDvSA ODI of the series.
Follow the match ? https://t.co/XyFdjVrL7K @mastercardindia pic.twitter.com/LVAgNsKEG8
— BCCI (@BCCI) October 11, 2022
ಯುವ ಆಟಗಾರರಿಂದಲೇ ಕೂಡಿರುವ ಟೀಮ್ ಇಂಡಿಯಾಕ್ಕೆ (Team India) ಇದೊಂದು ಅಗ್ನಿಪರೀಕ್ಷೆಯಾಗಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಭಾರತ ಪ್ಲೇಯಿಂಗ್ 11: ಶಿಖರ್ ಧವನ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಅವೇಶ್ ಖಾನ್
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ , ಜಾನ್ನೆಮನ್ ಮಲನ್ , ರೀಜಾ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ (ನಾಯಕ) , ಮಾರ್ಕೊ ಯಾನ್ಸೆನ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ಅನ್ರಿಕ್ ನೋಕಿಯಾ.
Published On - 2:53 pm, Tue, 11 October 22