India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಮೊದಲ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಒಟ್ಟು 146 ರನ್​ ಬಾರಿಸುವ ಮೂಲಕ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ
India vs South Africa
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 30, 2021 | 4:48 PM

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್​ನ ಸ್ಪೋರ್ಟ್​ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (123) ಅವರ ಭರ್ಜರಿ ಶತಕದ ನೆರವಿನಿಂದ ಭಾರತ 327 ರನ್​ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಮೊಹಮ್ಮದ್ ಶಮಿ ಅವರ ಮಾರಕ ದಾಳಿಗೆ ತತ್ತರಿಸಿತು. ಅದರಂತೆ 5 ವಿಕೆಟ್ ಉರುಳಿಸಿದ ಶಮಿ ಸೌತ್ ಆಫ್ರಿಕಾ ತಂಡವನ್ನು ಕೇವಲ 197 ರನ್​ಗಳಿಗೆ ನಿಯಂತ್ರಿಸಿದರು.

ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 174 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ದಕ್ಷಿಣ ಆಫ್ರಿಕಾಗೆ 2ನೇ ಇನಿಂಗ್ಸ್​ನಲ್ಲಿ 305 ರನ್​ಗಳ ಟಾರ್ಗೆಟ್ ನೀಡಿತು.  ಕೊನೆಯ ದಿನದಾಟದ ವೇಳೆ ದಕ್ಷಿಣ ಆಫ್ರಿಕಾ ತಂಡವು 211 ರನ್​ಗಳ ಗುರಿ ಪಡೆದಿತ್ತು. ಆದರೆ ಅಂತಿಮ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ತಂಡದ 6 ವಿಕೆಟ್ ಉರುಳಿಸಿದ ಟೀಮ್ ಇಂಡಿಯಾ ಬೌಲರ್​ಗಳು ಭಾರತ ತಂಡಕ್ಕೆ 113 ರನ್​ಗಳ ಐತಿಹಾಸಿಕ ಗೆಲುವು ತಂದುಕೊಟ್ಟರು.

ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದರು. ಹಾಗೆಯೇ ಮೊಹಮ್ಮದ್ ಸಿರಾಜ್ ಹಾಗೂ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿದರು.ಇನ್ನು ಮೊದಲ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಒಟ್ಟು 146 ರನ್​ ಬಾರಿಸುವ ಮೂಲಕ ಬ್ಯಾಟಿಂಗ್​ನಲ್ಲಿ ಮಿಂಚಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

ಸೆಂಚುರಿಯನ್ ಮೈದಾನದಲ್ಲಿ ಟೀಮ್​ ಇಂಡಿಯಾಗೆ ಇದು ಚೊಚ್ಚಲ ಗೆಲುವು. ಈ ಮೈದಾನದಲ್ಲಿ ಈ ಹಿಂದೆ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಎದುರಿಸಬೇಕಾಗಿ ಬಂದಿತ್ತು. ಆದರೆ ಈ ಬಾರಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಅಷ್ಟೇ ಅಲ್ಲದೆ ಸೆಂಚುರಿಯನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಏಷ್ಯಾದ ಮೊದಲ ತಂಡ ಎಂಬ ದಾಖಲೆಯನ್ನು ಕೂಡ ಭಾರತ ತಂಡ ಬರೆದಿದೆ.

ಇದುವರೆಗೆ ಭಾರತ, ಪಾಕಿಸ್ತಾನ, ಶ್ರೀಲಂಕಾ ತಂಡಗಳು ದಕ್ಷಿಣ ಆಫ್ರಿಕಾ ವಿರುದ್ದ ಸೆಂಚುರಿಯನ್‌ನಲ್ಲಿ ಆಡಿದೆ. ಆದರೆ ಭಾರತ ಹೊರತುಪಡಿಸಿ ಯಾವುದೇ ಏಷ್ಯಾದ ತಂಡ ಸೆಂಚುರಿಯನ್​ನಲ್ಲಿ ಗೆದ್ದಿಲ್ಲ. ಇದೀಗ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿಯುವ ಮೂಲಕ ಸೆಂಚುರಿಯನ್​ನಲ್ಲಿ ಗೆಲುವು ದಾಖಲಿಸಿದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಎರಡು ಇನಿಂಗ್ಸ್​ ಸೇರಿ 146 ರನ್​ಗಳನ್ನು ಬಾರಿಸಿದ್ದ ಕೆಎಲ್ ರಾಹುಲ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

Published On - 4:23 pm, Thu, 30 December 21

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!