IND vs SA: ಚಿನ್ನಸ್ವಾಮಿಯಲ್ಲಿ ಫೈನಲ್ ಫೈಟ್: ರಾಹುಲ್ ದ್ರಾವಿಡ್ ಮಾಡಿರುವ ಆ ಮಾಸ್ಟರ್ ಪ್ಲಾನ್ ಏನು?

India vs South Africa, 5th T20I: ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ.

IND vs SA: ಚಿನ್ನಸ್ವಾಮಿಯಲ್ಲಿ ಫೈನಲ್ ಫೈಟ್: ರಾಹುಲ್ ದ್ರಾವಿಡ್ ಮಾಡಿರುವ ಆ ಮಾಸ್ಟರ್ ಪ್ಲಾನ್ ಏನು?
IND vs SA
Follow us
TV9 Web
| Updated By: Vinay Bhat

Updated on: Jun 19, 2022 | 9:01 AM

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ಅಂತಿಮ ಐದನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ 2-2 ಅಂತರದಿಂದ ಸರಣಿ ಸಮಬಲಗೊಂಡಿರುವ ಕಾರಣ ಈ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ. ಮೊದಲೆರಡು ಪಂದ್ಯದಲ್ಲಿ ಹರಿಣಗಳ ಪಡೆ ಗೆದ್ದಿದ್ದರೆ ಮತ್ತೆರಡು ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯ ಸಾಧಿಸಿತ್ತು. ವಿಶೇಷ ಎಂದರೆ ರಿಷಭ್ ಪಂತ್ (Rishabh Pant) ಪಡೆ ಈ ಸರಣಿಯ ನಾಲ್ಕೂ ಪಂದ್ಯಗಳಲ್ಲೂ ಮೊದಲು ಬ್ಯಾಟಿಂಗ್​​ ಮಾಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಟಾರ್ಗೆಟ್​​ ನೀಡಿ ಸೋತರೆ, ಕೊನೆಯ ಎರಡು ಪಂದ್ಯಗಳಲ್ಲಿ ಎದುರಾಳಿಯನ್ನು ಟಾರ್ಗೆಟ್​​ ಮುಟ್ಟದಂತೆ ಮಾಡಿತ್ತು. ಹೀಗಾಗಿ ಟೀಮ್​​ ಇಂಡಿಯಾದ ಪಾಲಿಗೆ ಟಾಸ್​​ ಕೇವಲ ಪಂದ್ಯದ ಭಾಗವಷ್ಟೇ  ಎಂಬಂತೆ ಆಗಿಬಿಟ್ಟಿದೆ.

ಇಂದಿನ ಪಂದ್ಯದಲ್ಲೂ ದಿನೇಶ್ ಕಾರ್ತಿಕ್ ಅವರೇ ಪ್ರಮುಖ ಹೈಲೇಟ್ ಆಗಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಆಡುತ್ತಿರುವ ಕಾರ್ತಿಕ್​ಗೆ ಬೆಂಗಳೂರಿನಲ್ಲಿ ಅಭಿಮಾನಿಗಳ ಬಳಗ ಜೋರಾಗಿಯೇ ಇದೆ. ಹೀಗಾಗಿ ಡಿಕೆ ಘೋಷಣೆ ದೊಟ್ಟದಲ್ಲಿ ಕೇಳಿಬರಲಿದೆ. ನಾಲ್ಕನೇ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಹೊಡೆದಿದ್ದ ದಿನೇಶ್ ಗೆಲುವಿನ ರೂವಾರಿಯಾಗಿದ್ದರು. ಅವರೊಂದಿಗೆ ಹಾರ್ದಿಕ್ ಪಾಂಡ್ಯ ಕೂಡ ಮಿಂಚಿದ್ದರು. ಆದರೆ, ನಾಯಕ ರಿಷಭ್ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ.

ಸರಣಿಯಲ್ಲಿ ಎರಡು ಅರ್ಧಶತಕ ಹೊಡೆದಿರುವ ಇಶಾನ್ ಉತ್ತಮ ಲಯದಲ್ಲಿದ್ದರೆ ರುತುರಾಜ್ ಗಾಯಕ್ವಾಡ್ ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಆರಂಭಿಕ ಜೋಡಿಯಲ್ಲಿ ಬದಲಾವಣೆ ಆಗುತ್ತಾ ಎಂಬುದು ಕುತೂಹಲ. ವೆಂಕಟೇಶ್ ಅಯ್ಯರ್​​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ. ಶ್ರೇಯಸ್ ಅಯ್ಯರ್ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದ್ದು ಲಯಕ್ಕೆ ಮರಳಬೇಕಿದೆ.

ಇದನ್ನೂ ಓದಿ
Image
Neeraj Chopra: ಮೊದಲ ಪ್ರಯತ್ನದಲ್ಲೇ 86.69 ಮೀ.: ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮತ್ತೊಂದು ಚಿನ್ನ
Image
Indonesia Open 2022: ಸೆಮಿಫೈನಲ್‌ನಲ್ಲಿ ಸೋತ ಪ್ರಣಯ್! ಪಂದ್ಯಾವಳಿಯಲ್ಲಿ ಭಾರತದ ಪ್ರಯಾಣ ಅಂತ್ಯ
Image
T20 World Cup: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಆಯ್ಕೆ ಪ್ರಕ್ರಿಯೆ ಯಾವಾಗ? ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ದಕ್ಷಿಣ ಆಫ್ರಿಕಾ ಸರಣಿಗೆ ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್ ಅವರಂತಹ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದ್ದರೂ, ಅವರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಅಂತಿಮ ಕದನದಲ್ಲಿ ಅವಕಾಶ ಅನುಮಾನ. ವೇಗಿಗಳಾಗಿ ಹರ್ಷಲ್ ಪಟೇಲ್ ಮತ್ತು ಭುವನೇಶ್ವರ್ ಕುಮಾರ್ ಭಾರತಕ್ಕೆ ಅತ್ಯಂತ ಪ್ರಮುಖ ಅಸ್ತ್ರವಾಗಿದ್ದು, ಹರ್ಷಲ್ ಈ ಸರಣಿಯಲ್ಲಿ ಏಳು ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ಭುವನೇಶ್ವರ್ ಆರು ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪವರ್‌ಪ್ಲೇ/ಡೆತ್ ಓವರ್‌ಗಳಲ್ಲಿ ಅವರ ಬೌಲಿಂಗ್ ಅತ್ಯಂತ ನಿರ್ಣಾಯಕವಾಗಿರುತ್ತದೆ. ಅವೇಶ್ ಖಾನ್ ಹಿಂದಿನ ಪಂದ್ಯದಲ್ಲಿ ಗಮನ ಸೆಳೆದಿದ್ದಾರೆ. ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಹಲ್ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಪ್ರದರ್ಶನ ನೀಡಬೇಕಾಗಿದೆ.

ಇತ್ತ ದಕ್ಷಿಣ ಆಫ್ರಿಕಾ ಬ್ಯಾಟರ್​​ಗಳು ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಕ್ವಿಂಟನ್ ಡಿ ಕಾಕ್ ತಂಡಕ್ಕೆ ಮರಳುವುದರೊಂದಿಗೆ ದಕ್ಷಿಣ ಆಫ್ರಿಕಾ ಖಂಡಿತವಾಗಿಯೂ ಪ್ರಮುಖ ಪಂದ್ಯದಲ್ಲಿ ಪುಟಿದೇಳುವ ಸಾಧ್ಯತೆ ಇದೆ. ಡೇವಿಡ್ ಮಿಲ್ಲರ್ ಮತ್ತು ವ್ಯಾನ್ ಡೆರ್ ಡಸ್ಸೆನ್ ಕೂಡ ಮೊದಲ ಪಂದ್ಯದಂತೆ ತಮ್ಮ ಬಿರುಸಿನ ಫಾರ್ಮ್ ಪ್ರದರ್ಶಿಸಬೇಕಾಗಿದೆ. 2ನೇ ಟಿ20ಯಲ್ಲಿ ಆಡಿದಂತೆ ಕ್ಲಾಸೆನ್ ಕೂಡ ಆಡಬೇಕಿದೆ. ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುವ ಪಿಚ್ ಇದಾಗಿದೆ. ಚಾಣಾಕ್ಷತನದಿಂದ ಬೌಲಿಂಗ್ ಮಾಡುವ ಮಧ್ಯಮವೇಗಿಗಳಿಗೆ ಒಂದಿಷ್ಟು ನೆರವು ಸಿಗಬಹುದು. ಆದರೆ ಸ್ಪಿನ್ನರ್‌ಗಳಿಗೆ ತುಸು ಕಷ್ಟ. ಮೂರು ವರ್ಷಗಳಿಂದ ಇಲ್ಲಿ ಸೀಮಿತ ಓವರ್‌ಗಳ ಪಂದ್ಯಗಳು ನಡೆದಿಲ್ಲ ಎಂಬುದು ಗಮನಿಸಬೇಕಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI:

ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್/ ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ