ಏಕದಿನ ವಿಶ್ವಕಪ್ನ 37ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (101) ಅಜೇಯ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಭಾರತೀಯ ಬೌಲರ್ಗಳ ಕರಾರುವಾಕ್ ದಾಳಿಗೆ ತತ್ತರಿಸಿದರು. ಪರಿಣಾಮ ಕೇವಲ 27.1 ಓವರ್ಗಳಲ್ಲಿ 83 ರನ್ಗಳಿಸಿ ಸೌತ್ ಆಫ್ರಿಕಾ ತಂಡ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 243 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ಹಾಗೂ ಭಾರತ ತಂಡಗಳು ಇದುವರೆಗೆ 91 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ 50 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ ಗೆದ್ದಿರುವುದು 37 ಪಂದ್ಯಗಳಲ್ಲಿ ಮಾತ್ರ. ಇನ್ನು 3 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿತ್ತು.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್ಗಿಡಿ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಕುಲ್ದೀಪ್ ಯಾದವ್ ಎಸೆದ 28ನೇ ಓವರ್ನ ಮೊದಲ ಎಸೆತದಲ್ಲಿ ಲುಂಗಿ ಎನ್ಗಿಡಿ ಕ್ಲೀನ್ ಬೌಲ್ಡ್.
27.1 ಓವರ್ಗಳಲ್ಲಿ ಕೇವಲ 83 ರನ್ಗಳಿಸಿ ಆಲೌಟ್ ಆದ ಸೌತ್ ಆಫ್ರಿಕಾ ತಂಡ.
ಸೌತ್ ಆಫ್ರಿಕಾ ವಿರುದ್ಧ 243 ರನ್ಗಳ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ.
ರವೀಂದ್ರ ಜಡೇಜಾ ಎಸೆದ 27ನೇ ಓವರ್ನ 2ನೇ ಎಸೆತದಲ್ಲಿ ನೇರವಾಗಿ ಬೌಲರ್ಗೆ ಕ್ಯಾಚ್ ನೀಡಿದ ಕಗಿಸೊ ರಬಾಡ.
ಸೌತ್ ಆಫ್ರಿಕಾ ತಂಡದ 9 ವಿಕೆಟ್ ಪತನ.
ಕ್ರೀಸ್ನಲ್ಲಿ ತಬ್ರೇಝ್ ಶಂಸಿ ಹಾಗೂ ಲುಂಗಿ ಎನ್ಗಿಡಿ ಬ್ಯಾಟಿಂಗ್.
ಕುಲ್ದೀಪ್ ಯಾದವ್ ಎಸೆದ 26ನೇ ಓವರ್ನ 4ನೇ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಕ್ಯಾಚ್ ನೀಡಿದ ಮಾರ್ಕೊ ಯಾನ್ಸೆನ್ (14).
ಸೌತ್ ಆಫ್ರಿಕಾ ತಂಡದ 8ನೇ ವಿಕೆಟ್ ಕೂಡ ಪತನ..ಗೆಲುವಿನತ್ತ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಕಗಿಸೊ ರಬಾಡ ಹಾಗೂ ಲುಂಗಿ ಎನ್ಗಿಡಿ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 25ನೇ ಓವರ್ನ ಕೊನೆಯ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಮಾರ್ಕೊ ಯಾನ್ಸೆನ್.
25 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 78 ರನ್ಗಳು.
ಕ್ರೀಸ್ನಲ್ಲಿ ಕಗಿಸೊ ರಬಾಡ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 69 ರನ್ಗಳು.
7 ವಿಕೆಟ್ ಕಬಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಟೀಮ್ ಇಂಡಿಯಾ ಬೌಲರ್ಗಳು.
ಕ್ರೀಸ್ನಲ್ಲಿ ಕಗಿಸೊ ರಬಾಡ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 19ನೇ ಓವರ್ನ 4ನೇ ಎಸೆತದಲ್ಲಿ ಕೇಶವ್ ಮಹಾರಾಜ್ ಕ್ಲೀನ್ ಬೌಲ್ಡ್.
ಸೌತ್ ಆಫ್ರಿಕಾ ತಂಡದ 7ನೇ ವಿಕೆಟ್ ಪತನ.
ಟೀಮ್ ಇಂಡಿಯಾ ಗೆಲುವಿಗೆ ಕೇವಲ 3 ವಿಕೆಟ್ಗಳ ಅಗತ್ಯತೆ.
ಕ್ರೀಸ್ನಲ್ಲಿ ಕಗಿಸೊ ರಬಾಡ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 17ನೇ ಓವರ್ನ 3ನೇ ಎಸೆತದಲ್ಲಿ ಡೇವಿಡ್ ಮಿಲ್ಲರ್ ಕ್ಲೀನ್ ಬೌಲ್ಡ್.
11 ಎಸೆತಗಳಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಡೇವಿಡ್ ಮಿಲ್ಲರ್.
ಕ್ರೀಸ್ನಲ್ಲಿ ಕೇಶವ್ ಮಹಾರಾಜ್ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 15ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಡೇವಿಡ್ ಮಿಲ್ಲರ್.
15 ಓವರ್ಗಳ ಮುಕ್ತಾಯದ ವೇಳೆಗೆ 52 ರನ್ ಕಲೆಹಾಕಿದ ಸೌತ್ ಆಫ್ರಿಕಾ.
ಕ್ರೀಸ್ನಲ್ಲಿ ಡೇವಿಡ್ ಮಿಲ್ಲರ್ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 14ನೇ ಓವರ್ನ ಮೊದಲ ಎಸೆತದಲ್ಲೇ ಎಲ್ಬಿಡಬ್ಲ್ಯೂ ಆದ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್.
32 ಎಸೆತಗಳಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಡುಸ್ಸೆನ್.
ಕ್ರೀಸ್ನಲ್ಲಿ ಡೇವಿಡ್ ಮಿಲ್ಲರ್ ಹಾಗೂ ಮಾರ್ಕೊ ಯಾನ್ಸೆನ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 13ನೇ ಓವರ್ನ 5ನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಹೆನ್ರಿಕ್ ಕ್ಲಾಸೆನ್.
ಟೀಮ್ ಇಂಡಿಯಾಗೆ ನಾಲ್ಕನೇ ಯಶಸ್ಸು ತಂದುಕೊಟ್ಟ ಜಡೇಜಾ.
ಕ್ರೀಸ್ನಲ್ಲಿ ಡೇವಿಡ್ ಮಿಲ್ಲರ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
ಮೊಹಮ್ಮದ್ ಶಮಿ ಎಸೆದ 10ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಐಡೆನ್ ಮಾರ್ಕ್ರಾಮ್.
6 ಎಸೆತಗಳಲ್ಲಿ 9 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ಮಾರ್ಕ್ರಾಮ್.
10 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 35 ರನ್ಗಳು.
ಕ್ರೀಸ್ನಲ್ಲಿ ಹೆನ್ರಿಕ್ ಕ್ಲಾಸೆನ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 9ನೇ ಓವರ್ನ ಮೂರನೇ ಎಸೆತದಲ್ಲಿ ಟೆಂಬಾ ಬವುಮಾ ಕ್ಲೀನ್ ಬೌಲ್ಡ್.
19 ಎಸೆತಗಳಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸೌತ್ ಆಫ್ರಿಕಾ ತಂಡದ ನಾಯಕ.
ಕ್ರೀಸ್ನಲ್ಲಿ ಐಡೆನ್ ಮಾರ್ಕ್ರಾಮ್ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
8ನೇ ಓವರ್ ಅನ್ನು ಮೇಡನ್ ಮಾಡಿದ ಮೊಹಮ್ಮದ್ ಸಿರಾಜ್.
8 ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 21 ರನ್ಗಳು.
ಕ್ರೀಸ್ನಲ್ಲಿ ಟೆಂಬಾ ಬವುಮಾ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 5ನೇ ಓವರ್ನ 2ನೇ ಎಸೆತದಲ್ಲಿ ಲಾಂಗ್ ಆನ್ನತ್ತ ಫೋರ್ ಬಾರಿಸಿದ ಟೆಂಬಾ ಬವುಮಾ.
ಐದು ಓವರ್ಗಳ ಮುಕ್ತಾಯದ ವೇಳೆಗೆ ಸೌತ್ ಆಫ್ರಿಕಾ ತಂಡದ ಸ್ಕೋರ್ 17 ರನ್ಗಳು.
ಕ್ರೀಸ್ನಲ್ಲಿ ಟೆಂಬಾ ಬವುಮಾ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
ಕ್ವಿಂಟನ್ ಡಿಕಾಕ್ (5) ಔಟ್.
3ನೇ ಓವರ್ನಲ್ಲಿ ಕೇವಲ 1 ರನ್ ನೀಡಿದ ಜಸ್ಪ್ರೀತ್ ಬುಮ್ರಾ.
ಟೀಮ್ ಇಂಡಿಯಾ ಬೌಲರ್ಗಳಿಂದ ಉತ್ತಮ ಆರಂಭ.
ಕ್ರೀಸ್ನಲ್ಲಿ ಟೆಂಬಾ ಬವುಮಾ ಹಾಗೂ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ ಬ್ಯಾಟಿಂಗ್.
ಮೊದಲ ಓವರ್ನಲ್ಲೇ ಕೇವಲ 2 ರನ್ ನೀಡಿದ ಜಸ್ಪ್ರೀತ್ ಬುಮ್ರಾ.
ಮೊಹಮ್ಮದ್ ಸಿರಾಜ್ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
ನಾಲ್ಕನೇ ಎಸೆತದಲ್ಲಿ ಕ್ವಿಂಟನ್ ಡಿಕಾಕ್ (5) ರನ್ನು ಬೌಲ್ಡ್ ಮಾಡಿದ ಮೊಹಮ್ಮದ್ ಸಿರಾಜ್.
ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟ ಸಿರಾಜ್.
ಕೊನೆಯ ಓವರ್ನಲ್ಲಿ ಸಿಕ್ಸ್ ಹಾಗೂ ಫೋರ್ಗಳೊಂದಿಗೆ 15 ರನ್ ಬಾರಿಸಿದ ರವೀಂದ್ರ ಜಡೇಜಾ.
50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಟೀಮ್ ಇಂಡಿಯಾ ಪರ ಅಜೇಯ 101 ರನ್ ಬಾರಿಸಿ ಮಿಂಚಿದ ವಿರಾಟ್ ಕೊಹ್ಲಿ
ಸೌತ್ ಆಫ್ರಿಕಾ ತಂಡಕ್ಕೆ 327 ರನ್ಗಳ ಗುರಿ ನೀಡಿದ ಟೀಮ್ ಇಂಡಿಯಾ.
119 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ.
ಈ ಶತಕದೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಸಚಿನ್ ತೆಂಡೂಲ್ಕರ್ (49) ದಾಖಲೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್.
ಕಗಿಸೊ ರಬಾಡ ಎಸೆದ 47ನೇ ಓವರ್ನ 5ನೇ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
ಈ ಫೋರ್ನೊಂದಿಗೆ ವಿರಾಟ್ ಕೊಹ್ಲಿಯ ವೈಯುಕ್ತಿಕ ಸ್ಕೋರ್ 97 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್.
ತಬ್ರೇಝ್ ಶಂಸಿ ಎಸೆದ 46ನೇ ಓವರ್ನ ಕೊನೆಯ ಎಸೆತದಲ್ಲಿ ಸ್ವೀಪ್ ಶಾಟ್ ಬಾರಿಸಲು ಯತ್ನಿಸಲು ಸೂರ್ಯಕುಮಾರ್ ಯಾದವ್. ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ಅದ್ಭುತ ಡೈವಿಂಗ್ ಕ್ಯಾಚ್.
14 ಎಸೆತಗಳಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಸೂರ್ಯಕುಮಾರ್ ಯಾದವ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್.
ಮಾರ್ಕೊ ಯಾನ್ಸೆನ್ ಎಸೆದ 45ನೇ ಓವರ್ನ ಕೊನೆಯ ಎರಡು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಸೂರ್ಯಕುಮಾರ್ ಯಾದವ್.
45 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾದ ಸ್ಕೋರ್ 278 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
ಮಾರ್ಕೊ ಯಾನ್ಸೆನ್ ಎಸೆದ 43ನೇ ಓವರ್ನ ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಹೊಡೆತ ಬಾರಿಸಿದ ಕೆಎಲ್ ರಾಹುಲ್. ಬೌಂಡರಿ ಲೈನ್ನಲ್ಲಿ ಅತ್ಯುತ್ತಮ ರನ್ನಿಂಗ್ ಕ್ಯಾಚ್ ಹಿಡಿದ ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್. ಕೆಎಲ್ ರಾಹುಲ್ (7) ಔಟ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್.
40 ಓವರ್ಗಳ ಮುಕ್ತಾಯದ ವೇಳೆಗೆ 239 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕೊನೆಯ 10 ಓವರ್ಗಳಲ್ಲಿ ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಭಾರತ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ (75) ಹಾಗೂ ಕೆಎಲ್ ರಾಹುಲ್ (5) ಬ್ಯಾಟಿಂಗ್.
ರೋಹಿತ್ ಶರ್ಮಾ (40), ಶುಭ್ಮನ್ ಗಿಲ್ (23) ಹಾಗೂ ಶ್ರೇಯಸ್ ಅಯ್ಯರ್ (77) ಔಟ್.
ಲುಂಗಿ ಎನ್ಗಿಡಿ ಎಸೆದ 37ನೇ ಓವರ್ನ ಐದನೇ ಎಸೆತದಲ್ಲಿ ಭರ್ಜರಿ ಹೊಡತಕ್ಕೆ ಮುಂದಾಗಿ ಕ್ಯಾಚ್ ನೀಡಿದ ಶ್ರೇಯಸ್ ಅಯ್ಯರ್.
87 ಎಸೆತಗಳಲ್ಲಿ 77 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶ್ರೇಯಸ್ ಅಯ್ಯರ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಲುಂಗಿ ಎನ್ಗಿಡಿ ಎಸೆದ 35ನೇ ಓವರ್ನ ಮೊದಲ ಎಸೆತದಲ್ಲೇ ಡೀಪ್ ಎಕ್ಸ್ಟ್ರಾ ಕವರ್ನತ್ತ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
35 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 219 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಐಡೆನ್ ಮಾರ್ಕ್ರಾಮ್ ಎಸೆದ 34ನೇ ಓವರ್ನ ಕೊನೆಯ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಶ್ರೇಯಸ್ ಅಯ್ಯರ್.
34ನೇ ಓವರ್ನಲ್ಲಿ ದ್ವಿಶತಕ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್.
ಮಾರ್ಕೊ ಯಾನ್ಸೆನ್ ಎಸೆದ 31ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಶ್ರೇಯಸ್ ಅಯ್ಯರ್.
ಈ ಫೋರ್ನೊಂದಿಗೆ 63 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶ್ರೇಯಸ್.
ಕೊನೆಯ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಮತ್ತೊಂದು ಫೋರ್ ಬಾರಿಸಿದ ಅಯ್ಯರ್.
ಈ ಫೋರ್ನೊಂದಿಗೆ ಕೊಹ್ಲಿ-ಶ್ರೇಯಸ್ ಅಯ್ಯರ್ ನಡುವೆ 100 ರನ್ಗಳ ಜೊತೆಯಾಟ ಪೂರ್ಣ.
67 ಎಸೆತಗಳಲ್ಲಿ 5 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ.
ಇದು ಏಕದಿನ ಕ್ರಿಕೆಟ್ನಲ್ಲಿ ಕೊಹ್ಲಿಯ 71ನೇ ಅರ್ಧಶತಕ.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ತಬ್ರೇಝ್ ಶಂಸಿ ಎಸೆದ 28ನೇ ಓವರ್ನ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಬಾರಿಸಿದ ಶ್ರೇಯಸ್ ಅಯ್ಯರ್.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಮೊದಲ 10 ಓವರ್ಗಳಲ್ಲಿ 91 ರನ್ ಕಲೆಹಾಕಿದ್ದ ಟೀಮ್ ಇಂಡಿಯಾ.
25 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 143 ರನ್ಗಳು.
ಟೀಮ್ ಇಂಡಿಯಾ ರನ್ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ಬೌಲರ್ಗಳು.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ (24) ಹಾಗೂ ವಿರಾಟ್ ಕೊಹ್ಲಿ (42) ಬ್ಯಾಟಿಂಗ್.
20 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 124 ರನ್ಗಳು.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ (11) ಹಾಗೂ ವಿರಾಟ್ ಕೊಹ್ಲಿ (37) ಬ್ಯಾಟಿಂಗ್.
ರೋಹಿತ್ ಶರ್ಮಾ (40) ಹಾಗೂ ಶುಭ್ಮನ್ ಗಿಲ್ (23) ಔಟ್.
ಲುಂಗಿ ಎನ್ಗಿಡಿ ಎಸೆದ 18ನೇ ಓವರ್ನ 3ನೇ ಎಸೆತದಲ್ಲಿ ಥರ್ಡ್ಮ್ಯಾನ್ ಬೌಂಡರಿಯತ್ತ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
18 ಓವರ್ಗಳಲ್ಲಿ 118 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
15 ಓವರ್ಗಳಲ್ಲಿ 105 ರನ್ ಕಲೆಹಾಕಿರುವ ಟೀಮ್ ಇಂಡಿಯಾ.
2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಸೌತ್ ಆಫ್ರಿಕಾ ಬೌಲರ್ಗಳು.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ (7) ಹಾಗೂ ವಿರಾಟ್ ಕೊಹ್ಲಿ (24) ಬ್ಯಾಟಿಂಗ್.
ರೋಹಿತ್ ಶರ್ಮಾ (40) ಹಾಗೂ ಶುಭ್ಮನ್ ಗಿಲ್ (23) ಔಟ್.
14 ಓವರ್ಗಳಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಔಟ್.
ಸ್ಪಿನ್ನರ್ ಕೇಶವ್ ಮಹಾರಾಜ್ ಎಸೆದ 11ನೇ ಓವರ್ನ 3ನೇ ಎಸೆತದಲ್ಲಿ ಶುಭ್ಮನ್ ಗಿಲ್ ಕ್ಲೀನ್ ಬೌಲ್ಡ್.
24 ಎಸೆತಗಳಲ್ಲಿ 23 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶುಭ್ಮನ್ ಗಿಲ್.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಕಗಿಸೊ ರಬಾಡ ಎಸೆದ 10ನೇ ಓವರ್ನ 2ನೇ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ.
3ನೇ ಎಸೆತದಲ್ಲಿ ಕೊಹ್ಲಿ ಬ್ಯಾಟ್ನಿಂದ ಸ್ಟ್ರೈಟ್ ಹಿಟ್ ಫೋರ್.
10 ಓವರ್ಗಳ ಮುಕ್ತಾಯದ ವೇಳೆಗೆ 91 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ (23) ಹಾಗೂ ವಿರಾಟ್ ಕೊಹ್ಲಿ (18) ಬ್ಯಾಟಿಂಗ್.
ರೋಹಿತ್ ಶರ್ಮಾ (40) ಔಟ್.
ಕಗಿಸೊ ರಬಾಡ ಎಸೆದ 8ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಆಕರ್ಷಕ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಕಗಿಸೊ ರಬಾಡ ಎಸೆದ 6ನೇ ಓವರ್ನ 5ನೇ ಎಸೆತದಲ್ಲಿ ಮಿಡ್ ಆಫ್ನಲ್ಲಿ ಫೀಲ್ಡ್ನಲ್ಲಿ ಟೆಂಬಾ ಬವುಮಾಗೆ ಕ್ಯಾಚ್ ನೀಡಿದ ರೋಹಿತ್ ಶರ್ಮಾ.
24 ಎಸೆತಗಳಲ್ಲಿ 40 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಹಿಟ್ಮ್ಯಾನ್.
ಸೌತ್ ಆಫ್ರಿಕಾ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟ ರಬಾಡ.
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಲುಂಗಿ ಎನ್ಗಿಡಿ ಎಸೆದ 5ನೇ ಓವರ್ನ 3ನೇ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ರೋಹಿತ್ ಶರ್ಮಾ.
5ನೇ ಎಸೆತದಲ್ಲಿ ರೋಹಿತ್ ಶರ್ಮಾ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಮತ್ತೊಂದು ಸಿಕ್ಸ್.
5 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 61 ರನ್ಗಳು.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಕಗಿಸೊ ರಬಾಡ ಎಸೆದ 3ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಸಿಡಿಸಿದ ರೋಹಿತ್ ಶರ್ಮಾ.
3ನೇ ಎಸೆತದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಡೀಪ್ ಎಕ್ಸ್ಟ್ರಾ ಕವರ್ನತ್ತ ಮತ್ತೊಂದು ಫೋರ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಮಾರ್ಕೊ ಯಾನ್ಸೆನ್ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಆಕರ್ಷಕ ಸ್ವೀಪರ್ ಕವರ್ ಫೋರ್ ಬಾರಿಸಿದ ಶುಭ್ಮನ್ ಗಿಲ್.
5ನೇ ಎಸೆತದಲ್ಲಿ ಶುಭ್ಮನ್ ಬ್ಯಾಟ್ನಿಂದ ಡೀಪ್ ಮಿಡ್ ವಿಕೆಟ್ನತ್ತ ಮತ್ತೊಂದು ಫೋರ್.
2ನೇ ಓವರ್ನಲ್ಲಿ 17 ರನ್ ನೀಡಿದ ಎಡಗೈ ವೇಗಿ ಮಾರ್ಕೊ ಯಾನ್ಸೆನ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಲುಂಗಿ ಎನ್ಗಿಡಿ ಎಸೆದ ಮೊದಲ ಓವರ್ನ 4ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ.
ಭರ್ಜರಿ ಬೌಂಡರಿಯೊಂದಿಗೆ ಟೀಮ್ ಇಂಡಿಯಾ ರನ್ ಖಾತೆ ತೆರೆದ ಹಿಟ್ಮ್ಯಾನ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Sun, 5 November 23