AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ-ಸೌತ್ ಆಫ್ರಿಕಾ ಸರಣಿಯ ವೇಳಾಪಟ್ಟಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

India vs South Africa Live Streaming Details: ಈ ಸರಣಿಯಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

IND vs SA: ಭಾರತ-ಸೌತ್ ಆಫ್ರಿಕಾ ಸರಣಿಯ ವೇಳಾಪಟ್ಟಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
IND vs SA
TV9 Web
| Edited By: |

Updated on: Jun 08, 2022 | 5:18 PM

Share

ಭಾರತ-ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ (India vs South Africa T20Is Series) ನಾಳೆಯಿಂದ (ಜೂನ್ 9) ಶುರುವಾಗಲಿದೆ. 5 ಪಂದ್ಯಗಳ ಈ ಸರಣಿ ಒಂದು ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷ. ಹೀಗಾಗಿ ಐಪಿಎಲ್​ ಅನ್ನು ಸ್ಟೇಡಿಯಂನಲ್ಲಿ ಕಣ್ತುಂಬಿಕೊಳ್ಳಲು ಸಾಧ್ಯವಾಗದ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ20 ಪಂದ್ಯವನ್ನು ವೀಕ್ಷಿಸಬಹುದು. ಗುರುವಾರದಿಂದ ಟಿ20 ಕದನ ಆರಂಭವಾಗಲಿದ್ದು, ಅಂತಿಮ ಪಂದ್ಯ ಜೂನ್ 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ಸರಣಿಯಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಹಾಗೆಯೇ ಈ ಸರಣಿಯ ಮೂಲಕ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿರುವುದು ವಿಶೇಷ. ಅಲ್ಲದೆ ಯುವ ಬೌಲರ್​ಗಳಾದ ಉಮ್ರಾನ್ ಮಲಿಕ್ ಹಾಗೂ ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಮೊದಲ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಸರಣಿ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್​ಗಳಲ್ಲಿ (ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಗೋಲ್ಡ್ 2 ಚಾನೆಲ್‌) ಮತ್ತು ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ
Image
Virat Kohli: ಮೈದಾನಕ್ಕಿಳಿಯದೆ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಹೀಗಿದೆ:

  1.  ಜೂನ್ 9- ಮೊದಲ T20I ಪಂದ್ಯ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)
  2. ಜೂನ್ 12- 2 ನೇ T20I ಪಂದ್ಯ (ಬಾರಾಬತಿ ಸ್ಟೇಡಿಯಂ, ಕಟಕ್)
  3. ಜೂನ್ 14- 3ನೇ T20I ಪಂದ್ಯ (ಡಾ. ವೈಎಸ್‌ಆರ್ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ)
  4. ಜೂನ್ 17- 4 ನೇ T20I ಪಂದ್ಯ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್ಕೋಟ್)
  5. ಜೂನ್ 19- 5 ನೇ T20I ಪಂದ್ಯ (ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

ಈ ಸರಣಿಗಾಗಿ ಉಭಯ ತಂಡಗಳು ಹೀಗಿವೆ:

  1. ಟೀಮ್ ಇಂಡಿಯಾ ಟಿ20 ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.
  2. ದಕ್ಷಿಣ ಆಫ್ರಿಕಾ ಟಿ20 ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವಾಯ್ನೆ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ತಬ್ರೇಝ್ ಶಮ್ಸಿ, ಸ್ಟೀಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಯಾನ್ಸೆನ್

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ