ಭಾರತ-ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ (India vs South Africa T20Is Series) ನಾಳೆಯಿಂದ (ಜೂನ್ 9) ಶುರುವಾಗಲಿದೆ. 5 ಪಂದ್ಯಗಳ ಈ ಸರಣಿ ಒಂದು ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷ. ಹೀಗಾಗಿ ಐಪಿಎಲ್ ಅನ್ನು ಸ್ಟೇಡಿಯಂನಲ್ಲಿ ಕಣ್ತುಂಬಿಕೊಳ್ಳಲು ಸಾಧ್ಯವಾಗದ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ20 ಪಂದ್ಯವನ್ನು ವೀಕ್ಷಿಸಬಹುದು. ಗುರುವಾರದಿಂದ ಟಿ20 ಕದನ ಆರಂಭವಾಗಲಿದ್ದು, ಅಂತಿಮ ಪಂದ್ಯ ಜೂನ್ 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನು ಸರಣಿಯಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಹಾಗೆಯೇ ಈ ಸರಣಿಯ ಮೂಲಕ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿರುವುದು ವಿಶೇಷ. ಅಲ್ಲದೆ ಯುವ ಬೌಲರ್ಗಳಾದ ಉಮ್ರಾನ್ ಮಲಿಕ್ ಹಾಗೂ ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.
ಮೊದಲ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಈ ಸರಣಿ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ಗಳಲ್ಲಿ (ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಗೋಲ್ಡ್ 2 ಚಾನೆಲ್) ಮತ್ತು ಡಿಸ್ನಿ + ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದು.
ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಹೀಗಿದೆ:
ಈ ಸರಣಿಗಾಗಿ ಉಭಯ ತಂಡಗಳು ಹೀಗಿವೆ:
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.