IND vs SA: ಭಾರತಕ್ಕೆ ಆಫ್ರಿಕಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ವಿವರ

India Vs South Africa Live Streaming: 2023 ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ 8 ನೇ ಪಂದ್ಯವನ್ನು ಇದೇ ಭಾನುವಾರ ಅಂದರೆ ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

IND vs SA: ಭಾರತಕ್ಕೆ ಆಫ್ರಿಕಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ವಿವರ
ಭಾರತ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on:Nov 04, 2023 | 1:05 PM

2023 ರ ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾ ತನ್ನ 8 ನೇ ಪಂದ್ಯವನ್ನು ಇದೇ ಭಾನುವಾರ ಅಂದರೆ ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಕೋಲ್ಕತ್ತಾ ತಲುಪಿವೆ. ವಿಶ್ವಕಪ್‌ನಲ್ಲಿ ಭಾರತ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಈ ಎಲ್ಲಾ ಪಂದ್ಯಗಳನ್ನು ಭಾರತ ಗೆದ್ದಿದೆ. ಹೀಗಾಗಿ ಆಫ್ರಿಕಾ ವಿರುದ್ಧವೂ ಗೆದ್ದು ಭಾರತ ಪಾಯಿಂಟ್ ಪಟ್ಟಿಯಲ್ಲಿ ತನ್ನ ನಂಬರ್ 1 ಸ್ಥಾನವನ್ನು ಮುಂದುವರೆಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ.

2023ರ ವಿಶ್ವಕಪ್‌ನಲ್ಲಿ ಭಾರತದ ಹೊರತಾಗಿ ದಕ್ಷಿಣ ಆಫ್ರಿಕಾ ಕೂಡ ಉತ್ತಮ ಪ್ರದರ್ಶನ ನೀಡಿದೆ. ತಂಡ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದು ಪಂದ್ಯದಲ್ಲಿ ಸೋತು, 6 ಪಂದ್ಯಗಳನ್ನು ಗೆದ್ದಿದೆ. ಹೀಗಿರುವಾಗ ಭಾರತ-ಆಫ್ರಿಕಾ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.

‘ಟೀಂ ಇಂಡಿಯಾಗೆ ಬೇರೆ ಬಾಲ್ ನೀಡಲಾಗುತ್ತಿದೆ’; ಪಾಕ್ ಮಾಜಿ ಆಟಗಾರನ ಆರೋಪಕ್ಕೆ ವಾಸಿಂ ಅಕ್ರಂ ಸ್ಪಷ್ಟನೆ

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವು ನವೆಂಬರ್ 05 ರಂದು (ಭಾನುವಾರ) ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವೂ ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Sat, 4 November 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ