2023 ರ ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾ ತನ್ನ 8 ನೇ ಪಂದ್ಯವನ್ನು ಇದೇ ಭಾನುವಾರ ಅಂದರೆ ನವೆಂಬರ್ 5 ರಂದು ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡಲಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಕೋಲ್ಕತ್ತಾ ತಲುಪಿವೆ. ವಿಶ್ವಕಪ್‌ನಲ್ಲಿ ಭಾರತ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಈ ಎಲ್ಲಾ ಪಂದ್ಯಗಳನ್ನು ಭಾರತ ಗೆದ್ದಿದೆ. ಹೀಗಾಗಿ ಆಫ್ರಿಕಾ ವಿರುದ್ಧವೂ ಗೆದ್ದು ಭಾರತ ಪಾಯಿಂಟ್ ಪಟ್ಟಿಯಲ್ಲಿ ತನ್ನ ನಂಬರ್ 1 ಸ್ಥಾನವನ್ನು ಮುಂದುವರೆಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ.
2023ರ ವಿಶ್ವಕಪ್‌ನಲ್ಲಿ ಭಾರತದ ಹೊರತಾಗಿ ದಕ್ಷಿಣ ಆಫ್ರಿಕಾ ಕೂಡ ಉತ್ತಮ ಪ್ರದರ್ಶನ ನೀಡಿದೆ. ತಂಡ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದು ಪಂದ್ಯದಲ್ಲಿ ಸೋತು, 6 ಪಂದ್ಯಗಳನ್ನು ಗೆದ್ದಿದೆ. ಹೀಗಿರುವಾಗ ಭಾರತ-ಆಫ್ರಿಕಾ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.
‘ಟೀಂ ಇಂಡಿಯಾಗೆ ಬೇರೆ ಬಾಲ್ ನೀಡಲಾಗುತ್ತಿದೆ’; ಪಾಕ್ ಮಾಜಿ ಆಟಗಾರನ ಆರೋಪಕ್ಕೆ ವಾಸಿಂ ಅಕ್ರಂ ಸ್ಪಷ್ಟನೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವು ನವೆಂಬರ್ 05 ರಂದು (ಭಾನುವಾರ) ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವೂ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:05 pm, Sat, 4 November 23