AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ಆಫ್ರಿಕಾ ನಡುವಿನ ಏಕದಿನ ಸರಣಿ ಯಾವಾಗ ಆರಂಭ? ಎಷ್ಟು ಪಂದ್ಯ ನಡೆಯಲಿವೆ?

India vs South Africa ODI series: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ನಂತರ ಟೀಂ ಇಂಡಿಯಾ ಇದೀಗ ಮುಂಬರುವ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. 25 ವರ್ಷಗಳ ನಂತರ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾ, ಏಕದಿನದಲ್ಲೂ ತನ್ನ ಮೇಲುಗೈ ಸಾಧಿಸಲು ಎದುರು ನೋಡುತ್ತಿದೆ. ನವೆಂಬರ್ 30 ರಿಂದ ಆರಂಭವಾಗುವ ಈ ರೋಚಕ ಸರಣಿಯ ವೇಳಾಪಟ್ಟಿ, ತಂಡಗಳ ಹೆಡ್ ಟು ಹೆಡ್ ದಾಖಲೆ ಹಾಗೂ ಆಟಗಾರರ ಪಟ್ಟಿ ಇಲ್ಲಿದೆ.

IND vs SA: ಭಾರತ- ಆಫ್ರಿಕಾ ನಡುವಿನ ಏಕದಿನ ಸರಣಿ ಯಾವಾಗ ಆರಂಭ? ಎಷ್ಟು ಪಂದ್ಯ ನಡೆಯಲಿವೆ?
Ind Vs Sa
ಪೃಥ್ವಿಶಂಕರ
|

Updated on: Nov 26, 2025 | 8:57 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ (India vs South Africa) ಹೀನಾಯ ಸೋಲು ಅನುಭವಿಸಿದೆ. ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಭಾರತ ತಂಡವನ್ನು 30 ರನ್‌ಗಳಿಂದ ಸೋಲಿಸಿತ್ತು. ಇದೀಗ ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನೂ ಸಹ ದಕ್ಷಿಣ ಆಫ್ರಿಕಾ ಗೆದ್ದುಕೊಂಡಿದೆ. ಈ ಮೂಲಕ ಬರೋಬ್ಬರಿ 25 ವರ್ಷಗಳ ನಂತರ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಇತಿಹಾಸ ನಿರ್ಮಿಸಿರುವ ದಕ್ಷಿಣ ಆಫ್ರಿಕಾ ತಂಡ ಇದೀಗ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ. ಇತ್ತ ತವರಿನಲ್ಲಿ ಟೆಸ್ಟ್ ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ಗೆದ್ದು, ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ನವೆಂಬರ್ 30 ರಿಂದ ಆರಂಭವಾಗಲಿದೆ.

ಏಕದಿನ ಸರಣಿಯಲ್ಲಿ ಹೆಡ್ ಟು ಹೆಡ್ ದಾಖಲೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ 94 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಟೀಂ ಇಂಡಿಯಾ 40 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 51 ಏಕದಿನ ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಮೂರು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಅಂದರೆ ಅಂಕಿ ಅಂಶಗಳನ್ನು ನೋಡಿದರೆ, ಏಕದಿನ ಕ್ರಿಕೆಟ್​ನಲ್ಲಿ ದಕ್ಷಿಣ ಆಫ್ರಿಕಾ ತಂಡ, ಭಾರತದ ಮೇಲೆ ಮೇಲುಗೈ ಸಾಧಿಸಿರುವುದನ್ನು ಗಮನಿಸಬಹುದಾಗಿದೆ.

ಏಕದಿನ ಸರಣಿಯ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ: 30 ನವೆಂಬರ್ 2025, ರಾಂಚಿ
  • ಎರಡನೇ ಏಕದಿನ ಪಂದ್ಯ: 3 ಡಿಸೆಂಬರ್ 2025, ರಾಯ್‌ಪುರ
  • ಮೂರನೇ ಏಕದಿನ ಪಂದ್ಯ: 6 ಡಿಸೆಂಬರ್ 2025, ವಿಶಾಖಪಟ್ಟಣಂ

ಉಭಯ ತಂಡಗಳು

ಏಕದಿನ ಸರಣಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರಿಷಭ್ ಪಂತ್ (ಉಪನಾಯಕ/ವಿಕೆಟ್ ಕೀಪರ್), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ ಮತ್ತು ಅರ್ಶ್ದೀಪ್ ಸಿಂಗ್.

ದಕ್ಷಿಣ ಆಫ್ರಿಕಾದ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಡೆವಾಲ್ಡ್ ಬ್ರೂಯಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಾಯೆನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ