IND vs SA: ಸೋಲಿನ ಸೇಡು… ಭಾರತ vs ಸೌತ್ ಆಫ್ರಿಕಾ ಸರಣಿ ಇಂದಿನಿಂದ ಶುರು

India vs South Africa ODI Series: ಭಾರತದ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದೀಗ ಉಭಯ ತಂಡಗಳು 3 ಪಂದ್ಯಗಳ ಏಕದಿನ ಸರಣಿ ಆಡಲು ಸಜ್ಜಾಗಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾ ಟೆಸ್ಟ್ ಸರಣಿ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

IND vs SA: ಸೋಲಿನ ಸೇಡು... ಭಾರತ vs ಸೌತ್ ಆಫ್ರಿಕಾ ಸರಣಿ ಇಂದಿನಿಂದ ಶುರು
IND vs SA

Updated on: Nov 30, 2025 | 1:02 PM

ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿನ ಬಳಿಕ ಭಾರತ ತಂಡ ಏಕದಿನ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಇಂದಿನಿಂದ (ನ.30) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್​ಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಎಷ್ಟು ಗಂಟೆಗೆ ಮ್ಯಾಚ್ ಶುರು?

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 1.30 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ಲೈವ್ ವೀಕ್ಷಿಸಬಹುದು?

ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​​ನಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಈ ಸರಣಿಯಲ್ಲಿ ಎಷ್ಟು ಪಂದ್ಯಗಳು ನಡೆಯಲಿದೆ?

ಭಾರತ ಮತ್ತು ಸೌತ್ ಆಫ್ರಿಕಾ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಮ್ಯಾಚ್ ಇಂದು (ನ.30) ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ರಾಯ್​​ಪುರದಲ್ಲಿ ನಡೆಯಲಿದೆ. ಹಾಗೆಯೇ ಕೊನೆಯ ಮ್ಯಾಚ್​​ಗೆ ವಿಶಾಖಪಟ್ಟಣದ ಎಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಸರಣಿ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಮೊದಲ ಏಕದಿನ ಪಂದ್ಯ- ನವೆಂಬರ್ 30 – ರಾಂಚಿ (ಮಧ್ಯಾಹ್ನ 2:00 PM)
  • ಎರಡನೇ ಏಕದಿನ ಪಂದ್ಯ- ಡಿಸೆಂಬರ್ 03 – ರಾಯ್‌ಪುರ (ಮಧ್ಯಾಹ್ನ 2:00 PM)
  • 3ನೇ ಏಕದಿನ ಪಂದ್ಯ ಡಿಸೆಂಬರ್ 06 – ವಿಶಾಖಪಟ್ಟಣಂ (ಮಧ್ಯಾಹ್ನ 2:00 PM)

ಉಭಯ ತಂಡಗಳು:

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್​​ಕೆ, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್​​ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್.

 

Published On - 7:10 am, Sun, 30 November 25