IND vs SA Playing XI: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್; ಉಭಯ ತಂಡಗಳು ಹೀಗಿವೆ

ICC Men’s T20 world cup Final India vs South Africa Playing XI: ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎಂದಿನಂತೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಸೆಮಿಫೈನಲ್​ನಲ್ಲಿ ಆಡಿದ ತಂಡಗಳೇ ಇಂದು ಕಣಕ್ಕಿಳಿಯುತ್ತಿವೆ.

IND vs SA Playing XI: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್; ಉಭಯ ತಂಡಗಳು ಹೀಗಿವೆ
ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Jun 29, 2024 | 7:59 PM

2024 ರ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಉಭಯ ತಂಡಗಳು ಇಲ್ಲಿಯವರೆಗೆ ಅಜೇಯವಾಗಿವೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೂರ್ನಿಯ ಅಂತಿಮ ಪಂದ್ಯ ಇಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಯಾವುದೇ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯ ಆಡಲು ಸಿದ್ಧವಾಗಿದ್ದರೆ, ಇತ್ತ ಟೀಂ ಇಂಡಿಯಾ ಮೂರನೇ ಬಾರಿಗೆ ಫೈನಲ್ ಕದನಕ್ಕೆ ಸನ್ನದ್ಧವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎಂದಿನಂತೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಸೆಮಿಫೈನಲ್​ನಲ್ಲಿ ಆಡಿದ ತಂಡಗಳೇ ಇಂದು ಕಣಕ್ಕಿಳಿಯುತ್ತಿವೆ.

ಉಭಯ ತಂಡಗಳು ಇಂತಿವೆ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನೋಕಿಯಾ, ತಬ್ರೈಜ್ ಶಮ್ಸಿ.

ಭಾರತದ ಪ್ರದರ್ಶನ ಹೇಗಿದೆ?

ವೆಸ್ಟ್ ಇಂಡೀಸ್‌ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚೆಗಷ್ಟೇ ಭಾರತ ಇಲ್ಲಿ ಅಫ್ಘಾನಿಸ್ತಾನ ವಿರುದ್ಧ 47 ರನ್‌ಗಳಿಂದ ಗೆದ್ದಿತ್ತು. ಆದರೆ 2010ರಲ್ಲಿ ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 14 ರನ್‌ಗಳಿಂದ ಮತ್ತು ಆಸ್ಟ್ರೇಲಿಯಾ ವಿರುದ್ಧ 49 ರನ್‌ಗಳಿಂದ ಸೋಲನುಭವಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Sat, 29 June 24

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ