2024 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಉಭಯ ತಂಡಗಳು ಇಲ್ಲಿಯವರೆಗೆ ಅಜೇಯವಾಗಿವೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೂರ್ನಿಯ ಅಂತಿಮ ಪಂದ್ಯ ಇಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಯಾವುದೇ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯ ಆಡಲು ಸಿದ್ಧವಾಗಿದ್ದರೆ, ಇತ್ತ ಟೀಂ ಇಂಡಿಯಾ ಮೂರನೇ ಬಾರಿಗೆ ಫೈನಲ್ ಕದನಕ್ಕೆ ಸನ್ನದ್ಧವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎಂದಿನಂತೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಎರಡೂ ತಂಡಗಳು ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂದರೆ ಸೆಮಿಫೈನಲ್ನಲ್ಲಿ ಆಡಿದ ತಂಡಗಳೇ ಇಂದು ಕಣಕ್ಕಿಳಿಯುತ್ತಿವೆ.
🚨 Toss Update from Barbados
Captain Rohit Sharma has won the toss & #TeamIndia have elected to bat against South Africa in the #T20WorldCup Final.
Follow The Match ▶️ https://t.co/c2CcFqXzZC#SAvIND | @ImRo45
📸 ICC pic.twitter.com/rHw7o8iGvu
— BCCI (@BCCI) June 29, 2024
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
Here's our Playing XI 🔽
Lets go #TeamIndia 👊
Follow The Match ▶️ https://t.co/c2CcFqY7Pa#T20WorldCup | #SAvIND pic.twitter.com/AKIOjbylaj
— BCCI (@BCCI) June 29, 2024
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನೋಕಿಯಾ, ತಬ್ರೈಜ್ ಶಮ್ಸಿ.
WT20 2024. South Africa XI: A. Markram (C), Q. de Kock (wk), R. Hendricks, D. Miller, H. Klaasen, T. Stubbs, M. Jansen, K. Maharaj, K. Rabada, A. Nortje, T. Shamsi. https://t.co/HRWu74Stxc #T20WorldCup #SAvIND #Final
— BCCI (@BCCI) June 29, 2024
ವೆಸ್ಟ್ ಇಂಡೀಸ್‌ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚೆಗಷ್ಟೇ ಭಾರತ ಇಲ್ಲಿ ಅಫ್ಘಾನಿಸ್ತಾನ ವಿರುದ್ಧ 47 ರನ್‌ಗಳಿಂದ ಗೆದ್ದಿತ್ತು. ಆದರೆ 2010ರಲ್ಲಿ ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 14 ರನ್‌ಗಳಿಂದ ಮತ್ತು ಆಸ್ಟ್ರೇಲಿಯಾ ವಿರುದ್ಧ 49 ರನ್‌ಗಳಿಂದ ಸೋಲನುಭವಿಸಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:41 pm, Sat, 29 June 24