India vs South Africa Schedule: ಭಾರತ-ಸೌತ್ ಆಫ್ರಿಕಾ ಸರಣಿಯ ವೇಳಾಪಟ್ಟಿ
India vs South Africa schedule 2022: ವಿಶೇಷ ಎಂದರೆ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಆಟಗಾರರು ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಹೀಗಾಗಿ ಏಕದಿನ ಸರಣಿಗೆ ಬದಲಿ ಟೀಮ್ ಇಂಡಿಯಾವನ್ನು ಕಣಕ್ಕಿಳಿಸಬಹುದು.
ಭಾರತ-ಆಸ್ಟ್ರೇಲಿಯಾ (India vs Australia) ನಡುವಣ ಸರಣಿ ಮುಕ್ತಾಯಗೊಂಡಿದೆ. 3 ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ (Team India) 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಭಾರತ ತಂಡವು ಸೌತ್ ಆಫ್ರಿಕಾ (India vs South Africa Schedule 2022) ವಿರುದ್ಧದ ಸರಣಿಗೆ ಸಜ್ಜಾಗಬೇಕಿದೆ. ಬುಧವಾರದಿಂದ ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿಯು ಶುರುವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲು ಟಿ20 ಸರಣಿಯನ್ನು ಆಡಲಿದ್ದು, ಈ ಮೂಲಕ ಟಿ20 ವಿಶ್ವಕಪ್ಗಾಗಿ ಉಭಯ ತಂಡಗಳು ಸಜ್ಜಾಗಲಿದೆ. ವಿಶೇಷ ಎಂದರೆ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ಆಟಗಾರರು ಟಿ20 ವಿಶ್ವಕಪ್ಗಾಗಿ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಹೀಗಾಗಿ ಏಕದಿನ ಸರಣಿಗೆ ಬದಲಿ ಟೀಮ್ ಇಂಡಿಯಾವನ್ನು ಕಣಕ್ಕಿಳಿಸಬಹುದು.
ಭಾರತ-ಸೌತ್ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:
- ಸೆಪ್ಟೆಂಬರ್ 28- ಮೊದಲ ಟಿ20 ಪಂದ್ಯ (ತಿರುವನಂತಪುರಂ)
- ಅಕ್ಟೋಬರ್ 2- 2ನೇ ಟಿ20 ಪಂದ್ಯ (ಗೌಹಾಟಿ)
- ಅಕ್ಟೋಬರ್ 4- 3ನೇ ಟಿ20 ಪಂದ್ಯ (ಇಂದೋರ್)
ಟಿ20 ಸರಣಿಯ ಎಲ್ಲಾ ಪಂದ್ಯಗಳು ರಾತ್ರಿ 7 ಗಂಟೆಯಿಂದ ಶುರುವಾಗಲಿದೆ.
ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿಯ ವೇಳಾಪಟ್ಟಿ:
- ಅಕ್ಟೋಬರ್ 6- ಮೊದಲ ಏಕದಿನ ಪಂದ್ಯ (ಲಕ್ನೋ)
- ಅಕ್ಟೋಬರ್ 9- 2ನೇ ಏಕದಿನ ಪಂದ್ಯ (ರಾಂಚಿ)
- ಅಕ್ಟೋಬರ್ 11- 3ನೇ ಏಕದಿನ ಪಂದ್ಯ (ದೆಹಲಿ)
ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಮಧ್ಯಾಹ್ನ 1.30 ರಿಂದ ಶುರುವಾಗಲಿದೆ.
ಭಾರತ ಟಿ20 ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ಟಿ20 ತಂಡ:
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.