IND Vs SA: ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯದ ಬಗ್ಗೆ ಇಲ್ಲಿದೆ ವಿವರ..
ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ಈ ಪಂದ್ಯ ನಡೆಯಲಿದೆ.
ಟೀಂ ಇಂಡಿಯಾ (Team India) ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಗೆ ಆಹುತಿ ಆಯಿತು. ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಬೇಕು ಎಂಬ ಟೀಂ ಇಂಡಿಯಾ ಕನಸು ಈಡೇರಿರಲಿಲ್ಲ. ಇಂದು (ಡಿಸೆಂಬರ್ 12) ಎರಡನೇ ಪಂದ್ಯ ನಡೆಯಲಿದೆ. ಮೂರು ಮ್ಯಾಚ್ಗಳ ಸರಣಿ ಇದಾಗಿದ್ದು, ಟೀಂ ಇಂಡಿಯಾಗೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂಡೋ-ಆಫ್ರಿಕಾ ಎರಡನೇ ಟಿ20 ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ಎರಡನೇ ಪಂದ್ಯ ಎಲ್ಲಿ?
ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ನಲ್ಲಿ ಈ ಪಂದ್ಯ ನಡೆಯಲಿದೆ.
ವೀಕ್ಷಿಸೋದು ಎಲ್ಲಿ?
ಭಾರತ vs ದಕ್ಷಿಣ ಆಫ್ರಿಕಾ ಸರಣಿಯ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಪಡೆದುಕೊಂಡಿದೆ. ದ್ವಿತೀಯ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಹಾಗೂ ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ಪಂದ್ಯ ನೋಡಬಹುದಾಗಿದೆ.
ಸಮಯ
ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಪ್ರಾರಂಭ ಆಗಲಿದೆ. ಇಂದು ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?
ಭಾರತ ಟಿ20 ತಂಡ: ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ (ಉಪ ನಾಯಕ), ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಮುಖೇಶ್ ಕುಮಾರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:44 am, Tue, 12 December 23