IND tour of SA: ಭಾರತ-ದಕ್ಷಿಣ ಆಫ್ರಿಕಾ ಸರಣಿ ಯಾವಾಗ?, ಎಷ್ಟು ಗಂಟೆಗೆ?, ನೇರಪ್ರಸಾರ?: ಇಲ್ಲಿದೆ ಮಾಹಿತಿ

|

Updated on: Dec 01, 2023 | 8:35 AM

India’s tour of South Africa Full Squad, Schedule, Timings, Live Streaming: ಮೂರು ಟಿ20 ಪಂದ್ಯಗಳು, ಮೂರು ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತವು ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಲಿದೆ. ರೋಹಿತ್ ಟೆಸ್ಟ್ ಸರಣಿಯಲ್ಲಿ ಮುನ್ನಡೆಸಲಿದ್ದಾರೆ, ಟಿ20ಗೆ ಸೂರ್ಯಕುಮಾರ್, ಕೆಎಲ್ ರಾಹುಲ್ ಏಕದಿನಕ್ಕೆ ನಾಯಕರಾಗಿ ನೇಮಕಗೊಂಡಿದ್ದಾರೆ. ಹಾಗಾದರೆ ಈ ಸರಣಿ ಯಾವಾಗ ಆರಂಭ ಆಗಲಿದೆ?, ಎಷ್ಟು ಗಂಟೆಗೆ?, ಲೈವ್ ಸ್ಟ್ರೀಮಿಂಗ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

IND tour of SA: ಭಾರತ-ದಕ್ಷಿಣ ಆಫ್ರಿಕಾ ಸರಣಿ ಯಾವಾಗ?, ಎಷ್ಟು ಗಂಟೆಗೆ?, ನೇರಪ್ರಸಾರ?: ಇಲ್ಲಿದೆ ಮಾಹಿತಿ
India’s tour of South Africa Full Details
Follow us on

ಮೂರು ಪಂದ್ಯಗಳ ಟಿ20I ಸರಣಿ, ಮೂರು ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡ ಇದೇ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾಕ್ಕೆ (India Tour of South Africa) ಪ್ರಯಾಣಿಸಲಿದೆ. ಡಿಸೆಂಬರ್ 10 ರಂದು ಡರ್ಬನ್‌ನಲ್ಲಿ ಈ ಸರಣಿ ಪ್ರಾರಂಭವಾದರೆ ಅಂತಿಮ ಪಂದ್ಯವು ಕೇಪ್ ಟೌನ್‌ನಲ್ಲಿ ಜನವರಿ 3 ರಿಂದ 7, 2024 ರವರೆಗೆ ನಡೆಯಲಿದೆ. ವಿಶೇಷ ಎಂದರೆ ಟೀಮ್ ಇಂಡಿಯಾ ಎರಡು ವರ್ಷಗಳ ನಂತರ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸುತ್ತಿದೆ. ಈಗಾಗಲೇ ಬಿಸಿಸಿಐ ಈ ಮೂರು ಮಾದರಿಯ ಸರಣಿಗೆ ಭಾರತ ತಂಡವನ್ನು ಪ್ರಕಟ ಮಾಡಿದೆ. ಮೂರು ವಿಭಿನ್ನ ಸ್ವರೂಪಗಳಿಗೆ ಮೂರು ವಿಭಿನ್ನ ನಾಯಕರನ್ನು ಆಯ್ಕೆ ಮಾಡಿದೆ. ಹಾಗಾದರೆ ಭಾರತ-ದಕ್ಷಿಣ ಆಫ್ರಿಕಾ ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ?, ನೇರಪ್ರಸಾರ ಯಾವುದರಲ್ಲಿದೆ?. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಭಾರತ-ದಕ್ಷಿಣ ಆಫ್ರಿಕಾ ಸರಣಿಯ ವೇಳಾಪಟ್ಟಿ

T20I ಸರಣಿ

  • ಡಿಸೆಂಬರ್ 10: 1ನೇ ಟಿ20ಐ- ಕಿಂಗ್ಸ್‌ಮೀಡ್, ಡರ್ಬನ್
  • ಡಿಸೆಂಬರ್ 12: 2ನೇ ಟಿ20ಐ- ಸೇಂಟ್ ಜಾರ್ಜ್ ಪಾರ್ಕ್, ಗ್ಕೆಬರ್ಹಾ
  • ಡಿಸೆಂಬರ್ 14: 3ನೇ ಟಿ20ಐ- ನ್ಯೂ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್

ODI ಸರಣಿ

ಇದನ್ನೂ ಓದಿ
ವಿಶ್ವಕಪ್ ಆಡಿದ 12 ಆಟಗಾರರು ಔಟ್: ಆಫ್ರಿಕಾ ವಿರುದ್ಧದ ODI ಸರಣಿಗೆ ಬದಲಾವಣೆ
ಇಂದು ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟಿ20 ಪಂದ್ಯ: ಭಾರತಕ್ಕೆ ಅಯ್ಯರ್ ಬಲ
ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ
ಇತಿಹಾಸ ಸೃಷ್ಟಿಸಿದ ಉಗಾಂಡ: ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ತಂಡ
  • ಡಿಸೆಂಬರ್ 17: 1ನೇ ಏಕದಿನ- ನ್ಯೂ ವಾಂಡರರ್ಸ್ ಸ್ಟೇಡಿಯಂ, ಜೋಹಾನ್ಸ್‌ಬರ್ಗ್
  • ಡಿಸೆಂಬರ್ 19: 2ನೇ ಏಕದಿನ- ಸೇಂಟ್ ಜಾರ್ಜ್ ಪಾರ್ಕ್, ಗ್ಕೆಬರ್ಹಾ
  • ಡಿಸೆಂಬರ್ 21: 3ನೇ ಏಕದಿನ- ಬೋಲ್ಯಾಂಡ್ ಪಾರ್ಕ್, ಪಾರ್ಲ್

ಟೆಸ್ಟ್ ಸರಣಿ

  • ಡಿಸೆಂಬರ್ 26-30: 1 ನೇ ಟೆಸ್ಟ್- ಸೂಪರ್‌ಸ್ಪೋರ್ಟ್ ಪಾರ್ಕ್, ಸೆಂಚುರಿಯನ್
  • ಜನವರಿ 3-7: 2 ನೇ ಟೆಸ್ಟ್- ನ್ಯೂಲ್ಯಾಂಡ್ಸ್, ಕೇಪ್ ಟೌನ್

MS Dhoni Car: 0007 ನಂಬರ್ ಪ್ಲೇಟ್: ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ:

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್ನೆಸ್ ಅವಲಂಬಿಸಿ), ಜಸ್​ಪ್ರಿತ್ ಬುಮ್ರಾ (ಉಪ ನಾಯಕ), ಪ್ರಸಿದ್ಧ್ ಕೃಷ್ಣ.

ಭಾರತ-ದಕ್ಷಿಣ ಆಫ್ರಿಕಾ ಸರಣಿ ಲೈವ್ ಸ್ಟ್ರೀಮಿಂಗ್:

ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ. ಮೂರು ಟಿ20Iಗಳು ರಾತ್ರಿ 9:30 IST ಕ್ಕೆ ಪ್ರಾರಂಭವಾಗುತ್ತದೆ. ಜೋಹಾನ್ಸ್‌ಬರ್ಗ್‌ನಲ್ಲಿ ಡಿಸೆಂಬರ್ 17 ರಂದು ನಡೆಯಲಿರುವ ಮೊದಲ ಏಕದಿನ ಮಧ್ಯಾಹ್ನ 1:30 IST ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮುಂದಿನ ಎರಡು ಪಂದ್ಯಗಳು 4:30 IST ಕ್ಕೆ ಶುರುವಾಗಲಿದೆ. ಬಾಕ್ಸಿಂಗ್ ಡೇ ಟೆಸ್ಟ್ ಮಧ್ಯಾಹ್ನ 1:30 IST ಕ್ಕೆ ಪ್ರಾರಂಭವಾಗಲಿದೆ ಮತ್ತು ಹೊಸ ವರ್ಷದ ಟೆಸ್ಟ್ ಅನ್ನು ಕೇಪ್ ಟೌನ್‌ನಲ್ಲಿ ಮಧ್ಯಾಹ್ನ 2:00 IST ಕ್ಕೆ ಆಯೋಜಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ