
ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇತ್ತ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾಕ್ಕೆ ಮೊದಲ ಎಸೆತದಲ್ಲೇ ಆಘಾತ ಎದುರಾಗಿದೆ. ಅಭಿಷೇಕ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ತಂಡದ ಉಪನಾಯಕ ಶುಭ್ಮನ್ ಗಿಲ್ (Shubman Gill) ಕೇವಲ 2 ಎಸೆತಗಳಿಗೆ ಸುಸ್ತಾಗಿದ್ದಾರೆ. ಆಕ್ರಮಣಕಾರಿ ಆಟಕ್ಕೆ ಮುಂದಾದ ಗಿಲ್ ಮೊದಲ ಓವರ್ನ ಮೂರನೇ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
ವಾಸ್ತವವಾಗಿ ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎಂಗಿಡಿ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್ನ ಮೊದಲ ಎಸೆತದಲ್ಲಿ ಅಭಿಷೇಕ್ ಸಿಂಗಲ್ ತೆಗೆದುಕೊಂಡರು. ನಂತರ ಸ್ಟ್ರೈಕ್ಗೆ ಬಂದ ಶುಭ್ಮನ್ ಗಿಲ್ ತಾವು ಎದುರಿಸಿದ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದರು. ನಂತರದ ಎಸೆತವನ್ನು ಸಹ ಬೌಂಡರಿಗಟ್ಟುವ ಉತ್ಸಾಹ ತೋರಿದ ಗಿಲ್, ಮಿಡ್ ಆಫ್ನಲ್ಲಿ ಮಾರ್ಕೊ ಯಾನ್ಸೆನ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡಿದ್ದಾರೆ. ಹೀಗಾಗಿ ಮೊದಲ ಓವರ್‌ನಲ್ಲಿ ಭಾರತ 1 ವಿಕೆಟ್ ಕಳೆದುಕೊಂಡು 5 ರನ್ ಗಳಿಸಿದೆ.
ವಾಸ್ತವವಾಗಿ ಇದೇ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದ ಗಿಲ್, ಅಂದಿನಿಂದ ರಿಹ್ಯಾಬ್ಗೆ ಒಳಗಾಗಿದ್ದರು. ಇದರಿಂದಾಗಿ ಅವರು ಏಕದಿನ ಸರಣಿಯಲ್ಲೂ ಆಡಲು ಸಾಧ್ಯವಾಗಲಿಲ್ಲ. ಆದರೆ ಟಿ20 ಸರಣಿಗೂ ಮುನ್ನ ಪೂರ್ಣ ಫಿಟ್ ಆಗಿ ತಂಡವನ್ನು ಸೇರಿಕೊಂಡಿರುವ ಗಿಲ್, ಮೊದಲ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.
IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ತಂಡದಲ್ಲಿ 4 ಬದಲಾವಣೆ
ಟೀಂ ಇಂಡಿಯಾದ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಶಿವಂ ದುಬೆ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ಆಡುವ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ, ಲುಂಗಿ ಎನ್‌ಗಿಡಿ, ಅನ್ರಿಚ್ ನೋಕಿಯಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:21 pm, Tue, 9 December 25