AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ಆಫ್ರಿಕಾ ನಡುವಿನ ಟಿ20 ಸರಣಿ ಯಾವಾಗ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ 15 ರವರೆಗೆ ನಡೆಯಲಿದೆ. ಡರ್ಬನ್, ಗಿಕ್ಬರ್ಹಾ, ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಪಂದ್ಯಗಳನ್ನು ಭಾರತೀಯ ಸಮಯ ರಾತ್ರಿ 9:30 ಕ್ಕೆ ಪ್ರಸಾರ ಮಾಡಲಾಗುವುದು. ಸ್ಪೋರ್ಟ್ಸ್ 18, ಸ್ಪೋರ್ಟ್ಸ್ 18 HD ಮತ್ತು ಜಿಯೋಸಿನಿಮಾ ಆ್ಯಪ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.

IND vs SA: ಭಾರತ- ಆಫ್ರಿಕಾ ನಡುವಿನ ಟಿ20 ಸರಣಿ ಯಾವಾಗ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?
ಭಾರತ- ದಕ್ಷಿಣ ಆಫ್ರಿಕಾ
ಪೃಥ್ವಿಶಂಕರ
|

Updated on: Oct 28, 2024 | 5:41 PM

Share

ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಆಸ್ಟ್ರೇಲಿಯಾ ಪ್ರವಾಸಕ್ಕೆ ತಯಾರಿ ಆರಂಭಿಸಲಿದೆ. ಉಭಯ ತಂಡಗಳ ನಡುವೆ ನವೆಂಬರ್ 22 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದ್ದು, ಈ ಸರಣಿಗಾಗಿ ಭಾರತ ಟಿ20 ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಉಭಯ ತಂಡಗಳ ನಡುವೆ ನಾಲ್ಕು ಪಂದ್ಯಗಳ ಟಿ20 ಸರಣಿ ನಡೆಯಲ್ಲಿದ್ದು, ಸರಣಿಯ ಮೊದಲ ಪಂದ್ಯ ನವೆಂಬರ್ 8 ರಂದು ನಡೆದರೆ ಕೊನೆಯ ಪಂದ್ಯ ನವೆಂಬರ್ 15 ರಂದು ನಡೆಯಲಿದೆ. ಈ ನಾಲ್ಕು ಪಂದ್ಯಗಳು ಆಫ್ರಿಕಾದ ನಾಲ್ಕು ನಗರಗಳಲ್ಲಿ ಡರ್ಬನ್, ಗೆಕೆಬರ್ಹಾ, ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿವೆ. ಈ ಸರಣಿಯ ಬಗ್ಗೆಗಿನ ಪೂರ್ಣ ವಿವರ ಹೀಗಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ಯಾವಾಗ ಆರಂಭ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ನವೆಂಬರ್ 8 ರಿಂದ ಆರಂಭವಾಗಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಗೆ ಯಾವ್ಯಾವ ನಗರುಗಳು ಆತಿಥ್ಯವಹಿಸುತ್ತಿವೆ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ಡರ್ಬನ್, ಗೆಕೆಬರ್ಹಾ, ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್‌ ನಗರಗಳಲ್ಲಿ ನಡೆಯಲ್ಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಪಂದ್ಯಗಳು ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 9:30 ಕ್ಕೆ ಆರಂಭವಾಗಲಿವೆ. ಟಾಸ್ ರಾತ್ರಿ 9 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯನ್ನು ಭಾರತದಲ್ಲಿ ಸ್ಪೋರ್ಟ್ಸ್ 18 ಮತ್ತು ಸ್ಪೋರ್ಟ್ಸ್ 18 HD ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದಲ್ಲದೇ, ನೀವು ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ವೀಕ್ಷಿಸಬಹುದು.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ಯಾವ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯನ್ನು ಆನ್‌ಲೈನ್‌ನಲ್ಲಿ JioCinema ಆ್ಯಪ್​ನಲ್ಲಿ ವೀಕ್ಷಿಸಬಹುದು.

ಟಿ20 ಸರಣಿಯ ಸಂಪೂರ್ಣ ವೇಳಾಪಟ್ಟಿ

  1. ಮೊದಲನೇ ಟಿ20: 8 ನವೆಂಬರ್, ಡರ್ಬನ್, ರಾತ್ರಿ 9:30
  2. ಎರಡನೇ ಟಿ20: 10 ನವೆಂಬರ್, ಗಿಕ್ಬರ್ಹಾ, ರಾತ್ರಿ 9:30
  3. ಮೂರನೇ ಟಿ20: 13 ನವೆಂಬರ್ , ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್, ರಾತ್ರಿ 9:30
  4. ನಾಲ್ಕನೇ ಟಿ20: 15 ನವೆಂಬರ್, ಜೋಹಾನ್ಸ್‌ಬರ್ಗ್, ರಾತ್ರಿ 9:30

ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್ ಮತ್ತು ಯಶ್ ದಯಾಳ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!