ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಆ ಬಳಿಕ ಆಸ್ಟ್ರೇಲಿಯಾ ಪ್ರವಾಸಕ್ಕೆ ತಯಾರಿ ಆರಂಭಿಸಲಿದೆ. ಉಭಯ ತಂಡಗಳ ನಡುವೆ ನವೆಂಬರ್ 22 ರಿಂದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದ್ದು, ಈ ಸರಣಿಗಾಗಿ ಭಾರತ ಟಿ20 ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಉಭಯ ತಂಡಗಳ ನಡುವೆ ನಾಲ್ಕು ಪಂದ್ಯಗಳ ಟಿ20 ಸರಣಿ ನಡೆಯಲ್ಲಿದ್ದು, ಸರಣಿಯ ಮೊದಲ ಪಂದ್ಯ ನವೆಂಬರ್ 8 ರಂದು ನಡೆದರೆ ಕೊನೆಯ ಪಂದ್ಯ ನವೆಂಬರ್ 15 ರಂದು ನಡೆಯಲಿದೆ. ಈ ನಾಲ್ಕು ಪಂದ್ಯಗಳು ಆಫ್ರಿಕಾದ ನಾಲ್ಕು ನಗರಗಳಲ್ಲಿ ಡರ್ಬನ್, ಗೆಕೆಬರ್ಹಾ, ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿವೆ. ಈ ಸರಣಿಯ ಬಗ್ಗೆಗಿನ ಪೂರ್ಣ ವಿವರ ಹೀಗಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ನವೆಂಬರ್ 8 ರಿಂದ ಆರಂಭವಾಗಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿ ಡರ್ಬನ್, ಗೆಕೆಬರ್ಹಾ, ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್ ನಗರಗಳಲ್ಲಿ ನಡೆಯಲ್ಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 9:30 ಕ್ಕೆ ಆರಂಭವಾಗಲಿವೆ. ಟಾಸ್ ರಾತ್ರಿ 9 ಗಂಟೆಗೆ ನಡೆಯಲಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯನ್ನು ಭಾರತದಲ್ಲಿ ಸ್ಪೋರ್ಟ್ಸ್ 18 ಮತ್ತು ಸ್ಪೋರ್ಟ್ಸ್ 18 HD ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದಲ್ಲದೇ, ನೀವು ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ವೀಕ್ಷಿಸಬಹುದು.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯನ್ನು ಆನ್‌ಲೈನ್‌ನಲ್ಲಿ JioCinema ಆ್ಯಪ್‌ನಲ್ಲಿ ವೀಕ್ಷಿಸಬಹುದು.
ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್ ಮತ್ತು ಯಶ್ ದಯಾಳ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ