IND vs SA: ಭಾರತ- ಆಫ್ರಿಕಾ ಮೊದಲ ಟಿ20 ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ

India vs South Africa T20: ಭಾರತದ ಯುವ ಟಿ20 ತಂಡವು ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಅಭ್ಯಾಸದಲ್ಲಿ ನಿರತವಾಗಿದೆ. ಶ್ರೀಲಂಕಾದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಸೂರ್ಯ, ಇದೀಗ ಆಫ್ರಿಕಾ ನೆಲದಲ್ಲಿ ಯಾವ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದಾರೆ.

IND vs SA: ಭಾರತ- ಆಫ್ರಿಕಾ ಮೊದಲ ಟಿ20 ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ
ಭಾರತ- ದಕ್ಷಿಣ ಆಫ್ರಿಕಾ
Follow us
ಪೃಥ್ವಿಶಂಕರ
|

Updated on: Nov 06, 2024 | 10:42 PM

ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಮುಖಭಂಗಕ್ಕೊಳಗಾಗಿದ್ದ ಟೀಂ ಇಂಡಿಯಾ, ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಸರಣಿ ಆಡಲು ಸಜ್ಜಾಗಿದೆ. ಭಾರತ ಯುವ ಪಡೆ 4 ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಅಭ್ಯಾಸದಲ್ಲಿ ನಿರತವಾಗಿದೆ. ಶ್ರೀಲಂಕಾದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಸೂರ್ಯ, ಇದೀಗ ಆಫ್ರಿಕಾ ನೆಲದಲ್ಲಿ ಯಾವ ರೀತಿ ತಂಡವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೋಡಲು ಎಲ್ಲರೂ ಕಾತುರರಾಗಿದ್ದಾರೆ. ಟೀಂ ಇಂಡಿಯಾದ ಭಾಗಶಃ ಆಟಗಾರರಿಗೆ ಇದು ಚೊಚ್ಚಲ ಆಫ್ರಿಕಾ ಪ್ರವಾಸವಾಗಿದ್ದು, ಈ ಪ್ರವಾಸದಲ್ಲಿ ಮಿಂಚುವ ಮೂಲಕ ಭಾರತ ಟಿ20 ತಂಡದಲ್ಲಿ ಖಾಯಂ ಸ್ಥಾನ ಪಡೆಯುವ ಇರಾದೆಯಲ್ಲಿ ಯುವ ಆಟಗಾರರಿದ್ದಾರೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವು ಶುಕ್ರವಾರ, ನವೆಂಬರ್ 8 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ರಾತ್ರಿ 8:30 ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಟಿವಿ ಮತ್ತು ಮೊಬೈಲ್‌ನಲ್ಲಿ ನೋಡುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಇದರ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿಯೂ ನೋಡಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವೈಶಾಖ್ ವಿಜಯಕುಮಾರ್, ಅವೇಶ್ ಖಾನ್, ಯಶ್ ದಯಾಳ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಓಟ್ನಿಯಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಲಾಲಿ ಮಾಪೊಂಗ್ವಾನಾ, ನ್ಕಾಬಾ ಪೀಟರ್, ಆಂಡಿಲ್ ಸಿಮೆಲಾಬ್ಸ್, ಆಂಡಿಲೆ ರಿಕೆಲಾಬ್ಲಾಮ್ .

ಟಿ20 ಸರಣಿ ವೇಳಾಪಟ್ಟಿ

  1. ಮೊದಲ ಟಿ20 ಪಂದ್ಯ – 8 ನವೆಂಬರ್
  2. ಎರಡನೇ ಟಿ20 ಪಂದ್ಯ- ನವೆಂಬರ್ 10
  3. ಮೂರನೇ ಟಿ20 ಪಂದ್ಯ – ನವೆಂಬರ್ 13
  4. ನಾಲ್ಕನೇ ಟಿ20 ಪಂದ್ಯ – ನವೆಂಬರ್ 15

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ