AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ

India vs South Africa T20 WC 2026 Warm-up: 2026ರ ಟಿ20 ವಿಶ್ವಕಪ್‌ಗೆ ಮುನ್ನ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಏಕೈಕ ಅಭ್ಯಾಸ ಪಂದ್ಯವಾಡುತ್ತಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದೆ. ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್‌ನಿಂದ, ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಓಪನಿಂಗ್ ಮಾಡುತ್ತಿದ್ದಾರೆ. ಇಶಾನ್ ಉತ್ತಮ ಪ್ರದರ್ಶನ ನೀಡಿದರೆ, ಸಂಜು ಸ್ಯಾಮ್ಸನ್ ವಿಶ್ವಕಪ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.

IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ
Ind Vs Sa
ಪೃಥ್ವಿಶಂಕರ
|

Updated on:Feb 04, 2026 | 7:09 PM

Share

2026 ರ ಟಿ20 ವಿಶ್ವಕಪ್‌ಗೆ ( T20 World Cup 2026) ಮುಂಚಿತವಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಆತಿಥೇಯ ಟೀಂ ಇಂಡಿಯಾ ಕೂಡ ತನ್ನ ಮೊದಲ ಮತ್ತು ಏಕೈಕ ಅಭ್ಯಾಸ ಪಂದ್ಯವನ್ನು ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯವು ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಸಂಜು- ಕಿಶನ್ ಆರಂಭಿಕರು

ವಾಸ್ತವವಾಗಿ ಈ ಅಭ್ಯಾಸ ಪಂದ್ಯಕ್ಕೂ ಮುನ್ನ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಎಲ್ಲಾ ಪಂದ್ಯಗಳಲ್ಲಿ ಅಭಿಷೇಕ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ ಅವರ ಫಾರ್ಮ್ ಅಷ್ಟೇನೂ ಉತ್ತಮವಾಗಿರಲಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಈ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜೊತೆಗೆ ಇಶಾನ್ ಕಿಶನ್​ಗೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಈ ಜೋಡಿ ಈ ಪಂದ್ಯದಲ್ಲಿ ಅಬ್ಬರಿಸಿದರೆ, ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್​ನಲ್ಲಿ ಬೆಂಚ್ ಕಾಯುವುದು ಖಚಿತ.

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ಐಡೆಮ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೇವಿಡ್ ಮಿಲ್ಲರ್, ಡೆವಾಲ್ಡ್ ಬ್ರೆವಿಸ್, ಜಾರ್ಜ್ ಲಿಂಡೆ, ಜೇಸನ್ ಸ್ಮಿತ್, ಮಾರ್ಕೊ ಯಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಕಾರ್ಬಿನ್ ಬಾಷ್, ಅನ್ರಿಚ್ ನೋಕಿಯಾ, ಕಗಿಸೊ ರಬಾಡ, ಕೇಶವ್ ಮಹಾರಾಜ್, ಕ್ವೆನಾ ಮಾಫಕ ಮತ್ತು ಲುಂಗಿ ಎನ್‌ಗಿಡಿ.

Published On - 7:06 pm, Wed, 4 February 26

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?